Advertisement
ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಚೆನ್ನಾಗಿದೆ. ಆದರೆ ಈ ಮಧ್ಯೆ ನಡೆದ ಕೊಲೆಗಳಿಗೆ ವೈಯಕ್ತಿಕ ಕಾರಣ ಗಳಿವೆ. ಆರೋಪಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು. ಇದಕ್ಕಾಗಿ ಸಂಬಂಧಪಟ್ಟವರಿಗೆ ಸೂಚನೆ ನೀಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರಕಾರದ ಕರ್ತವ್ಯ. ಅದನ್ನು ನಿರ್ವಹಿಸಲಾಗುತ್ತಿದೆ ಎಂದು ಸ್ಪಷ್ಟಪಡಿಸಿದರು.
ಡಿಸಿಎಂ ಡಿ.ಕೆ.ಶಿವಕುಮಾರ್, ವೈಯಕ್ತಿಕ ವ್ಯವಹಾರಗಳಿಗೆ ಕೊಲೆಗಳು ನಡೆದಿವೆ. ಇದು ಈಗಲ್ಲ; ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಸಹಿತ ಎಲ್ಲರ ಕಾಲದಲ್ಲೂ ನಡೆದಿವೆ. ಅದೇನೇ ಇದ್ದರೂ ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕ್ಕೆ ಸೂಚಿಸಲಾಗಿದೆ. ಪೊಲೀಸ್ ಇಲಾಖೆ ಕರ್ತವ್ಯದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ. ಕಾನೂನು ಪ್ರಕಾರ ಅವರು ಕ್ರಮ ಕೈಗೊಳ್ಳಲಿದ್ದಾರೆ ಎಂದು ತಿಳಿಸಿದರು. ರಾಜ್ಯದಲ್ಲಿ ಕಾನೂನು-ಸುವ್ಯವಸ್ಥೆ ಸರಿಯಾಗಿದೆ. ಬಿಜೆಪಿಯವರು ಗೂಬೆ ಕೂರಿಸುವ ಪ್ರಯತ್ನ ಮಾಡುತ್ತಿದ್ದಾರೆ. ಇಲ್ಲಿ ರಾಜ್ಯಪಾಲರ ಆಡಳಿತ ಹೇರಲು ಈ ರೀತಿಯ ನಾಟಕ ಹಾಗೂ ಹುನ್ನಾರವನ್ನು ವಿಪಕ್ಷ ನಾಯಕ ಆರ್.ಅಶೋಕ್ ಮತ್ತು ಬಿಜೆಪಿಯವರು ಮಾಡುತ್ತಿದ್ದಾರೆ. ಹಾಗಾಗಲು ಬಿಡುವುದಿಲ್ಲ ಎಂದರು. ಕರ್ನಾಟಕ ಬಿಹಾರ ಆಗುತ್ತಿದೆ ಎಂದ ಬೊಮ್ಮಾಯಿ ಹೇಳಿಕೆಗೆ, ಅವರ ಕಾಲದಲ್ಲೂ ಅನೇಕ ಕೃತ್ಯಗಳು ನಡೆದಿದ್ದವು ಎಂದರು.