ಬೆಂಗಳೂರು: ಹಣಕಾಸು ಮತ್ತು ಅನೈತಿಕ ಸಂಬಂಧ ವಿಚಾರಕ್ಕೆ ಪರಿಚಯಸ್ಥರೇ ಟೆಂಪೋ ಟಾವೆಲ್ಲರ್ ಚಾಲಕನನ್ನು ಕಲ್ಲು ಎತ್ತಿಹಾಕಿ ಹತ್ಯೆಗೈದಿರುವ ಘಟನೆ ಬ್ಯಾಟರಾ ಯನಪುರ ಠಾಣೆ ವ್ಯಾಪ್ತಿಯಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ. ಆರ್.ಆರ್.ನಗರ ನಿವಾಸಿ ಚಂದ್ರಶೇಖರ್ (42) ಕೊಲೆ ಯಾದ ಚಾಲಕ. ಈ ಸಂಬಂಧ ಹನುಮಂತನಗರ ನಿವಾಸಿ ಭಾಸ್ಕರ್ ಹಾಗೂ ಆತನ ಸಹಚರರಿಗಾಗಿ ಹುಡುಕಾಟ ನಡೆ ಯುತ್ತಿದೆ ಎಂದು ಪೊಲೀಸರು ಹೇಳಿದರು.
ಮಂಡ್ಯ ಮೂಲದ ಚಂದ್ರಶೇಖರ್ ಈ ಮೊದಲು ಮಾರುಕಟ್ಟೆಯಲ್ಲಿ ಹೂ ವ್ಯಾ ಪಾರ ಮಾಡಿಕೊಂಡಿದ್ದು, ಶ್ರೀನಗರದಲ್ಲಿ ವಾಸವಾಗಿದ್ದ. ಕೊರೊನಾ ಲಾಕ್‌ಡೌನ್ ಸಂದರ್ಭದಲ್ಲಿ ವ್ಯಾಪಾರದಲ್ಲಿ ನಷ್ಟ ಹೊಂದಿ ದ್ದರಿಂದ ಸ್ವಂತ ಊರಿಗೆ ತೆರಳಿದ್ದ. ಲಾಕ್ ಡೌನ್ ತೆರವು ಬಳಿಕ ಬೆಂಗಳೂರಿಗೆ ಬಂದು, ಆರ್.ಆರ್.ನಗರದಲ್ಲಿ ಮನೆ ಮಾಡಿಕೊಂಡಿದ್ದ. ಜತೆಗೆ ಸಹೋದರನ ಟೆಂಪೋ ಟ್ರಾವೆಲ್ಲರ್‌ನ ಚಾಲಕನಾಗಿ ಕೆಲಸ ಮಾಡುತ್ತಿದ್ದ.
ಈ ಮಧ್ಯೆ ಪರಿಚಯಸ್ಥ ಭಾಸ್ಕರ್ ಪತ್ನಿ ಜತೆ ಅನೈತಿಕ ಸಂಬಂಧ ಹೊಂದಿದ್ದ. ಈ ವಿಚಾರ ತಿಳಿದಿದ್ದ ಭಾಸ್ಕರ್, ಚಂದ್ರಶೇಖರ್ ಗೆ ಬಹಳಷ್ಟು ಬಾರಿ ಎಚ್ಚರಿಕೆ ನೀಡಿದ್ದ. ಒಂದೆರಡು ಬಾರಿ ಹಲ್ಲೆ ಕೂಡ ನಡೆಸಿದ್ದ. ಈ ಸಂಬಂಧ ಕೆಲ ದಿನಗಳ ಹಿಂದೆ ಹನುಮಂತನಗರ ಠಾಣೆಯಲ್ಲಿ ಚಂದ್ರಶೇಖರ್ ಪ್ರಾಣ ರಕ್ಷಣೆ ಕೋರಿ ದೂರು ನೀಡಿದ್ದು, ತನ್ನ ಪ್ರಾಣಕ್ಕೆ ಹಾನಿಯಾದರೆ ಅದಕ್ಕೆ ಭಾಸ್ಕರ್ ಮತ್ತು ಆತನ ಸ್ನೇಹಿತರೇ ಕಾರಣ ಎಂದು ದೂರಿನಲ್ಲಿ ಉಲ್ಲೇಖೀಸಿದ್ದ.
ಇದನ್ನೂ ಓದಿ:- ಡ್ರೋಣ್ ಮೂಲಕ ಕೀಟನಾಶಕ ಸಿಂಪರಣೆ
ನಂತರ ಆರೋಪಿ ಠಾಣೆಗೆ ಬಂದು ಮುಚ್ಚಳಿಕೆ ಪತ್ರ ಬರೆದುಕೊಟ್ಟಿದ್ದ ಎಂಬುದು ಗೊತ್ತಾಗಿದೆ ಎಂದು ಪಶ್ಚಿಮ ವಿಭಾಗ ಪೊಲೀಸರು ಹೇಳಿದರು. ಮತ್ತೂಂದೆಡೆ ಭಾಸ್ಕರ್ ಜತೆಯೂ ಚಂದ್ರಶೇಖರ್ ಹಣಕಾಸಿನ ವ್ಯವಹಾರ ನಡೆಸಿದ್ದ. ಹೀಗಾಗಿ ಹಣ ಕೊಡುವಂತೆ ಪದೇ ಪದೆ ಕರೆ ಮಾಡಿ ಪೀಡಿಸುತ್ತಿದ್ದ. ಶುಕ್ರವಾರ ರಾತ್ರಿ ಭಾಸ್ಕರ್ ಮತ್ತು ತಂಡ ಮದ್ಯ ಸೇವಿಸುವ ನೆಪ ದಲ್ಲಿ ಬ್ಯಾಟರಾಯನಪುರ ಠಾಣೆ ವ್ಯಾಪ್ತಿಯ ಮಹಾವೀರ್ ಜೈನ್ ಆಸ್ಪತ್ರೆಯ ಹಿಂಭಾಗದ ನೈಸ್ ರಸ್ತೆಗೆ ಚಂದ್ರಶೇಖರ್‌ನನ್ನು ಕರೆಸಿಕೊಂಡಿದ್ದಾರೆ. ಬಳಿಕ ಎಲ್ಲರೂ ಕಂಠಪೂರ್ತಿ ಮದ್ಯ ಸೇವಿಸಿದ್ದಾರೆ.
ಈ ವೇಳೆ ಆರೋಪಿಗಳು ಹಾಗೂ ಚಂದ್ರಶೇಖರ್ ನಡುವೆ ಗಲಾಟೆ ಯಾಗಿದ್ದು, ಅದು ವಿಕೋಪಕ್ಕೆ ಹೋಗಿದೆ. ಈ ವೇಳೆ ಆರೋಪಿಗಳು, ಮೊದಲಿಗೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ, ಬಳಿಕ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆಗೈದು ಪರಾರಿ ಯಾಗಿದ್ದಾರೆ. ಶನಿವಾರ ಬೆಳಗ್ಗೆ ದಾರಿಹೋಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳಿಸಿದ್ದಾರೆ. ಚಂದ್ರಶೇಖರ್ ಸಹೋದರ ನೀಡಿದ ದೂರಿನ ಮೇರೆಗೆ ಕೊಲೆ ಪ್ರಕರಣ ದಾಖಲಾಗಿದೆ. ಆರೋಪಿಗಳ ಸುಳಿವು ಸಿಕ್ಕಿದ್ದು, ಶೋಧ ಕಾರ್ಯ ನಡೆಯುತ್ತಿದೆ ಎಂದು ಪೊಲೀಸರು ಹೇಳಿದರು. ಬ್ಯಾಟರಾಯನ ಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.