Advertisement

ಕಾಂಗ್ರೆಸ್ ಯುವ ನಾಯಕನ ಬರ್ಬರ ಕೊಲೆ

12:04 PM Sep 24, 2018 | Team Udayavani |

ಬೆಂಗಳೂರು: ಅಲ್ಲಾಳಸಂದ್ರ ಯುವ ಕಾಂಗ್ರೆಸ್ ಅಧ್ಯಕ್ಷ ಅರುಣ್ (26)ರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ಭಾನುವಾರ ತಡರಾತ್ರಿ ಯಲಹಂಕ ಬಳಿ ನಡೆದಿದೆ. 

Advertisement

ತಡರಾತ್ರಿ ಸಿನಿಮಾ ವೀಕ್ಷಿಸಿ ವಾಪಾಸ್ಸಾಗುತ್ತಿದ್ದ ವೇಳೆ ದುಷ್ಕರ್ಮಿಗಳು ಅರುಣ್ ರನ್ನು ಅಡ್ಡ ಹಾಕಿ ಮಾರಾಕಾಸ್ತ್ರಗಳಿಂದ ಕೊಲೆ ಮಾಡಿದ್ದಾರೆ. ತಿವ್ರ ರಕ್ತಸ್ರಾವದಿಂದ ಅರುಣ್ ಸ್ಥಳದಲ್ಲೆ ಮೃತಪಟ್ಟಿದ್ದಾರೆ ಎನ್ನಲಾಗಿದೆ. 

ಅರುಣ್ ಅಲ್ಲಾಳ ಸಂದ್ರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿದ್ದು, ರಾಜಕೀಯ ವೈರತ್ವ ಈ ಕೊಲೆಗೆ ಕಾರಣವಾಗಿರಬಹುದು ಎನ್ನಲಾಗಿದೆ. ಯಲಹಂಕ ನ್ಯೂ ಟೌನ್ ಪೋಲಿಸರು ಪ್ರಕರಣ ದಾಖಲಿಸಿದ್ದಾರೆ. 

Advertisement

Udayavani is now on Telegram. Click here to join our channel and stay updated with the latest news.

Next