Advertisement
ದೆಹಲಿ ಮೂಲದ ವಕೀಲರೊಬ್ಬರು ಈ ಅರ್ಜಿ ಸಲ್ಲಿಸಿದ್ದು, “ಹಿಂದೂಗಳು ಮತ್ತು ಸಿಖ್ಖರನ್ನು ಟಾರ್ಗೆಟ್ ಮಾಡಿ ಕೊಲ್ಲಲಾಗುತ್ತಿದ್ದು, ಅಲ್ಲಿರುವ ಅಲ್ಪಸಂಖ್ಯಾತರಿಗೆ ಸೂಕ್ತ ಭದ್ರತೆ ಕಲ್ಪಿಸಬೇಕು. ಹತ್ಯೆಗೀಡಾದವರ ಕುಟುಂಬಕ್ಕೆ 1 ಕೋಟಿ ರೂ. ಪರಿಹಾರ ಮತ್ತು ಕುಟುಂಬದ ಸದಸ್ಯರಿಗೆ ಸರ್ಕಾರಿ ಕೆಲಸ ನೀಡಬೇಕು’ ಎಂದು ಒತ್ತಾಯಿಸಿದ್ದಾರೆ.
ಜಮ್ಮು-ಕಾಶ್ಮೀರದ ಕುಲ್ಗಾಂ ಜಿಲ್ಲೆಯಲ್ಲಿ ಪೊಲೀಸ್ ಗಸ್ತುಪಡೆ ಮೇಲೆ ಶನಿವಾರ ಉಗ್ರರು ದಾಳಿ ನಡೆಸಿದ್ದು, ಇಬ್ಬರು ಪೊಲೀಸರು ಗಾಯಗೊಂಡಿದ್ದಾರೆ. ಇದೇ ವೇಳೆ, ಶ್ರೀನಗರದ ಛನಾಪೋರಾದಲ್ಲಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿಯೂ ನಡೆದಿದೆ.
Related Articles
Advertisement
ಕಾಶ್ಮೀರದಲ್ಲಿ ಹಿಂದೂ ಮತ್ತು ಸಿಖ್ಖರ ಹತ್ಯೆಯು ಉಗ್ರರ ವ್ಯವಸ್ಥಿತ ಸಂಚು. ಕಣಿವೆಯಲ್ಲಿ ಉಳಿದಿರುವ ಅಲ್ಪಸಂಖ್ಯಾತರನ್ನು ಒದ್ದೋಡಿಸುವ ಮತ್ತು ವಾಪಸಾಗದಂತೆ ಅವರಲ್ಲಿ ಭಯ ಹುಟ್ಟಿಸುವ ತಂತ್ರವಿದು.– ಸತೀಶ್ ಮಹಾಲ್ದಾರ್, ಕಾಶ್ಮೀರಿ ಪಂಡಿತ