ಬಂಟ್ವಾಳ: ಬಂಟ್ವಾಳ ಭಂಡಾರಿಬೆಟ್ಟು ಬಳಿಯ ವಸತಿ ಸಂಕೀರ್ಣದಲ್ಲಿ ನಡೆದ ಸುರೇಂದ್ರ ಬಂಟ್ವಾಳ ಹತ್ಯೆಯ ಆರೋಪಿಗಳನ್ನು ದಸ್ತಗಿರಿ ಮಾಡುವಲ್ಲಿ ಪೊಲೀಸರು ಯಶಸ್ವಿಯಾಗಿದ್ದು, ಪ್ರಕರಣದ ಇಬ್ಬರು ಮುಖ್ಯ ಆರೋಪಿಗಳನ್ನು ಸೋಮವಾರ ವಶಕ್ಕೆ ಪಡೆದಿದ್ದಾರೆ.
ಬಂಟ್ವಾಳದ ಅಮಾrಡಿ ಗ್ರಾಮದ ಅಜೆಕಲ ನಿವಾಸಿ ಸತೀಶ್ ಕುಲಾಲ್ ಹಾಗೂ ನೀರುಮಾರ್ಗ ಬೊಂಡಂತಿಲ ನಿವಾಸಿ ಗಿರೀಶ್ ಬಂಧಿತ ಆರೋಪಿಗಳು. ಕಳೆದ ಕೆಲವು ದಿನಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಗಳು ತಿರುಗಾಡುತ್ತಿರುವ ಮಾಹಿತಿಯ ಮೇರೆಗೆ ಪೊಲೀಸರು ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದಿದ್ದಾರೆ.
ದ.ಕ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಂ.ಲಕ್ಷ್ಮೀ ಪ್ರಸಾದ್ ಅವರ ಮಾರ್ಗದರ್ಶನದಂತೆ ಬಂಟ್ವಾಳ ಪೊಲೀಸ್ ಸರ್ಕಲ್ ಇನ್‌ಸ್ಪೆಕ್ಟರ್ ಟಿ.ಡಿ.ನಾಗರಾಜ್, ಬಂಟ್ವಾಳ ನಗರ ಪಿಎಸ್‌ಐ ಹಾಗೂ ಸಿಬಂದಿ ಆರೋಪಿಗಳನ್ನು ದಸ್ತಗಿರಿ ಮಾಡಿದ್ದಾರೆ.
ಪ್ರಸ್ತುತ ದಸ್ತಗಿರಿ ಮಾಡಲಾದ ಆರೋಪಿಗಳ ವಿಚಾರಣೆಯಿಂದ ಪೊಲೀಸರಿಗೆ ಹಲವು ಮಹತ್ವದ ಮಾಹಿತಿ ಲಭಿಸಿದ್ದು, ಪ್ರಕರಣದ ಕೂಲಂಕಷ ತನಿಖೆ ಮುಂದುವರೆಸಿದ್ದಾರೆ.
ಮುಂದೆ ಈ ಹತ್ಯೆಯನ್ನು ಯಾವ ಕಾರಣಕ್ಕೆ ಮಾಡಲಾಗಿದೆ ಎಂಬ ವಿಚಾರವನ್ನು ಕೂಡ ಪೊಲೀಸರು ಪತ್ತೆ ಹಚ್ಚಲಿದ್ದಾರೆ.