Advertisement

Murdeshwar: ನಾಲ್ವರು ವಿದ್ಯಾರ್ಥಿನಿಯರು ಸಮುದ್ರಪಾಲು; 1 ಶವ ಪತ್ತೆ

11:59 PM Dec 10, 2024 | Team Udayavani |

ಭಟ್ಕಳ: ಶ್ರೀಕ್ಷೇತ್ರ ಮುರುಡೇಶ್ವರ ಪ್ರವಾಸಕ್ಕೆ ಬಂದಿದ್ದ ವಸತಿ ಶಾಲೆಯ ವಿದ್ಯಾರ್ಥಿನಿಯರು ಸಮುದ್ರ ತಟದಲ್ಲಿ ಆಡುತ್ತಿದ್ದ ವೇಳೆ ವಿದ್ಯಾರ್ಥಿನಿಯೊಬ್ಬಳು ನೀರಿನ ಅಲೆಗೆ ಸಿಕ್ಕು ಮೃತಪಟ್ಟಿದ್ದು, ಇನ್ನೂ ಮೂವರು ನಾಪತ್ತೆಯಾಗಿದ್ದಾರೆ. ಮೂವರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Advertisement

ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಕೊತ್ತೂರು ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ 46 ವಿದ್ಯಾರ್ಥಿಗಳು ಶೈಕ್ಷಣಿಕ ಪ್ರವಾಸಕ್ಕೆಂದು ಮಂಗಳವಾರ ಮುರುಡೇಶ್ವರಕ್ಕೆ ಬಂದಿದ್ದರು. ಸಂಜೆ ಸಮುದ್ರದಂಚಿನಲ್ಲಿ ಆಟವಾಡುತ್ತಿರು ವಾಗ ಒಟ್ಟು ಏಳು ಜನ ಸಮುದ್ರದ ಅಲೆಯ ಹೊಡೆತಕ್ಕೆ ಸಿಲುಕಿದ್ದಾರೆ. ಮೂವರನ್ನು ಸ್ಥಳೀಯರು ಹಾಗೂ ಜೀವರಕ್ಷಕ ಸಿಬಂದಿ ರಕ್ಷಣೆ ಮಾಡಿದರು. ನಾಲ್ವರು ನೀರಿನಲ್ಲಿ ನಾಪತ್ತೆಯಾಗಿದ್ದಾರೆ.

ತೀವ್ರ ಅಸ್ವಸ್ಥಗೊಂಡಿದ್ದ ಶೃವಂತಿ ಗೋಪಾಲಪ್ಪ ಆಸ್ಪತ್ರೆಯಲ್ಲಿ ಮೃತಪಟ್ಟಿ ದ್ದಾಳೆ. ದೀಕ್ಷಾ, ಲಾವಣ್ಯ ಹಾಗೂ ಲಿಪಿಕಾ ಕಣ್ಮರೆಯಾಗಿದ್ದಾರೆ. ಉಳಿದ ಮೂವರು ವಿದ್ಯಾರ್ಥಿನಿಯರಾದ ಯಶೋದಾ, ವೀಕ್ಷಣಾ ಹಾಗೂ ಲಿಪಿಕಾ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next