Advertisement

ಭಟ್ಕಳ: ಪ್ರತಿ ವರ್ಷ ಮಕರ ಸಂಕ್ರಮಣದ ಪುಣ್ಯ ಕಾಲದಲ್ಲಿ ಮುರುಡೇಶ್ವರ ದೇವರ ಮಹಾ ರಥೋತ್ಸವದ ಧಾರ್ಮಿಕ ವಿಧಿ
ವಿಧಾನಗಳು ಆರಂಭವಾಗಿ ಮಂಗಳವಾರ ಸಂಜೆ ಮುರುಡೇಶ್ವರ ದೇವರ ಮಹಾರಥೋತ್ಸವ ನಡೆಯಿತು.

Advertisement

ರಥೋತ್ಸವದ ಅಂಗವಾಗಿ ಬೆಳಗ್ಗೆ ಕಲಶ ಸ್ಥಾಪನೆ, ಅಧಿವಾಸ ಹವನ, ರಥಾಧಿವಾಸ ಹವನ ನಂತರ ದೇವರ ರಥಾರೋಹಣ ನಡೆಯಿತು.

ನಂತರ ಶಾಸಕ ಸುನಿಲ್‌ ನಾಯ್ಕ ಆದಿಯಾಗಿ ಊರಿನ ಮಹಾಜನತೆ ಹಾಗೂ ಭಕ್ತರು ರಥ ಕಾಣಿಕೆ ಸಲ್ಲಿಸಿದರು. ಸಂಜೆ ಸಾವಿರಾರು ಭಕ್ತರ ಸಮ್ಮುಖದಲ್ಲಿ ಮುರುಡೇಶ್ವರ ದೇವರ ಮಹಾ ರಥೋತ್ಸವ ನಡೆಯಿತು. ರಥೋತ್ಸವದಲ್ಲಿ ದೇವಸ್ಥಾನದ ವ್ಯವಸ್ಥಾಪಕರು, ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು, ಜನಪ್ರತಿನಿಧಿಗಳು, ಸ್ಥಳೀಯ ಗ್ರಾಪಂ ಸದಸ್ಯರು, ವಿವಿಧ ಸಮಾಜದ ಮುಖಂಡರು, ಊರಿನ ಗಣ್ಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ಮುಂಜಾಗ್ರತಾ ಕ್ರಮವಾಗಿ ಪೊಲೀಸ್‌ ಬಂದೋಬಸ್ತ್
ಏರ್ಪಡಿಸಲಾಗಿತ್ತು.

ಜ.21 ರಂದು ಚೂರ್ಣೋತ್ಸವ, ಅವಭೃತ ಸ್ನಾನ, ಧ್ವಜಾವರೋಹಣ, ಅಂಕುರಾರ್ಪಣ ನಡೆಯುವ ಮೂಲಕ ರಥೋತ್ಸವದ ಧಾರ್ಮಿಕ ವಿಧಿ ವಿಧಾನಗಳು ಮುಕ್ತಾಯಗೊಳ್ಳಲಿವೆ.

Advertisement

Udayavani is now on Telegram. Click here to join our channel and stay updated with the latest news.

Next