Advertisement

ಮುರುಘಾ ಶ್ರೀ ಬಂಧನ: ಇಕ್ಕಟ್ಟಿಗೆ ಸಿಲುಕಿದ ಕಾಂಗ್ರೆಸ್

10:24 AM Sep 02, 2022 | Team Udayavani |

ಬೆಂಗಳೂರು: ಅಪ್ರಾಪ್ತೆಯರ ಮೇಲೆ ಅತ್ಯಾಚಾರ ನಡೆಸಿದ ಆರೋಪ ಹಿನ್ನೆಲೆಯಲ್ಲಿ ಚಿತ್ರದುರ್ಗದ ಬೃಹನ್ ಮಠದ ಮುರುಘಾ ಶರಣರು ಬಂಧನಕ್ಕೆ ಒಳಗಾಗಿರುವುದು ರಾಜಕೀಯವಾಗಿ ಕಾಂಗ್ರೆಸ್ ಪಕ್ಷವನ್ನು ಇಕ್ಕಟ್ಟಿಗೆ ಸಿಲುಕಿಸಿದೆ.

Advertisement

ರಾಜ್ಯ ರಾಜಕೀಯದ ಮೇಲೆ ತಲತಲಾಂತರದಿಂದ ಮುರುಘಾ ಮಠ ತನ್ನದೇ ಆದ ಪ್ರಭಾವ ಹೊಂದಿದೆ. ಬಹುಸಂಖ್ಯಾತ ವೀರಶೈವ- ಲಿಂಗಾಯತರ ಶ್ರದ್ಧಾಕೇಂದ್ರವಾಗಿರುವುದರಿಂದ ಈ ಪ್ರಕರಣ ಮುಂದಿನ ಚುನಾವಣಾ ದೃಷ್ಟಿಯಿಂದಲೂ ಮಹತ್ವ ಪಡೆದಿದೆ. ಹೀಗಾಗಿ ಕಾಂಗ್ರೆಸ್ ಈ ವಿಚಾರದಲ್ಲಿ ಎಚ್ಚರಿಕೆಯ ಹೆಜ್ಜೆ ಇಡಲು ನಿರ್ಧರಿಸಿದೆ.

ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಈ ಪ್ರಕರಣ ಸಂಬಂಧ ಅಕ್ಷರಶಃ ಮೌನಕ್ಕೆ ಶರಣಾಗಿದ್ದಾರೆ. ಕಾಂಗ್ರೆಸ್ ವರಿಷ್ಠ ನಾಯಕ ರಾಹುಲ್ ಗಾಂಧಿಯವರನ್ನು ಶಿವಕುಮಾರ್ ಮುರುಘಾ ಮಠಕ್ಕೆ ಕರೆದೊಯ್ದು ಇಷ್ಟ ಲಿಂಗ ದೀಕ್ಷೆ ಕೊಡಿಸಿದ ಬಳಿಕ ಈ ಮಠದ ಜತೆಗೆ ಕಾಂಗ್ರೆಸ್ ಸಂಬಂಧ ಇನ್ನಷ್ಟು ಗಾಢವಾಗಿತ್ತು.

ಆದರೆ ಶ್ರೀಗಳಿಂದ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದಾರೆ ಎನ್ನಲಾದ ಮಕ್ಕಳು ದಲಿತ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ದಲಿತ ಪರ ಸಂಘಟನೆಗಳು ಈಗಾಗಲೇ ಪ್ರತಿಭಟನೆ ನಡೆಸಿದ್ದು, ಕ್ರಮಕ್ಕೆ ಆಗ್ರಹಿಸಿವೆ.

ಇದನ್ನೂ ಓದಿ:ಮಂಗಳೂರಿಗೆ ಮೋದಿ ಭೇಟಿ: ಮತ್ತೆ ಅಚ್ಛೇ ದಿನದ ಪ್ರಶ್ನೆ ಮುಂದಿಟ್ಟ ಕಾಂಗ್ರೆಸ್

Advertisement

ಇನ್ನೊಂದೆಡೆ ಸಿದ್ದರಾಮಯ್ಯ ಅವರ ಪ್ರತಿ ನಡೆಯನ್ನೂ ಬೆಂಬಲಿಸುವ ನಾಡಿನ ಪ್ರಗತಿಪರರ ಒಂದು ವರ್ಗ ವಿದ್ಯಾರ್ಥಿನಿಯರ ಪರ ನಿಂತಿದೆ. ಹೀಗಾಗಿ ಈ ಪ್ರಕರಣ ಕಾಂಗ್ರೆಸ್ ಗಿಂತಲೂ ಹೆಚ್ಚಾಗಿ ಸಿದ್ದರಾಮಯ್ಯ ಅವರನ್ನು ಇಕ್ಕಟ್ಟಿಗೆ ಸಿಲುಕಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next