ಕಲಬುರಗಿ: ಗಣಿ ಮತ್ತು ಭೂ ವಿಜ್ಞಾನ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ ನಿರಾಣಿ ಅವರು, ಮಾಜಿ ಸಂಸದ ಪಕ್ಷದ ಹಿರಿಯ ನಾಯಕ ಡಾ. ಬಸವರಾಜ ಪಾಟೀಲ್ ಸೇಡಂ ಅವರೊಂದಿಗೆ ಗೌಪ್ಯ ಮಾತುಕತೆ ನಡೆಸಿದರು.
ಗುರುಪೂರ್ಣಿಮೆ ಹಿನ್ನೆಲೆಯಲ್ಲಿ ಸನ್ಮಾನಿಸಿ ಪಾದಗಳಿಗೆ ನಮಸ್ಕಾರ ಸಲ್ಲಿಸಿ, ಸಿಹಿ ತಿನ್ನಿಸಿ ಆಶೀರ್ವಾದ ಪಡೆದ ಸಚಿವರು ಪ್ರತ್ಯೇಕವಾಗಿ ಹತ್ತು ನಿಮಿಷಗಳ ಕಾಲ ಮಾತುಕತೆ ನಡೆಸಿದರು.
ಈ ಸಂದರ್ಭದಲ್ಲಿ ಶಾಸಕರಾದ ಬಸವರಾಜ ಮತ್ತಿಮಡು, ಶಶೀಲ್ ನಮೋಶಿ, ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ್ ನರಿಬೋಳ ಸೇರಿದಂತೆ ಮುಂತಾದವರಿದ್ದರು.
ಇದನ್ನೂ ಓದಿ:10ನೇ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಗಮನಕ್ಕೆ: ಐಸಿಎಸ್ ಇ, ಐಎಸ್ ಸಿ ಫಲಿತಾಂಶ ಪ್ರಕಟ
ಗುರು ಪೂರ್ಣಿಮೆ ಹಿನ್ನೆಲೆಯಲ್ಲಿ ಗುರುಗಳಿಗೆ ಸನ್ಮಾನಿಸಲಾಗುತ್ತಿದೆ. ಇದರಲ್ಲಿ ಹೊಸದೇನು ಇಲ್ಲ ಎಂದು ಸಚಿವರು ಹೇಳಿದರು. ಈ ಸಂದರ್ಭದಲ್ಲಿ ಹಾಜರಿದ್ದ ಪಕ್ಷದ ಮುಖಂಡರು ಸಾಹೇಬರಿಗೆ ನಿಮ್ಮ ಆಶೀರ್ವಾದ ಬೇಕು ಎಂದರು.
ನಂತರ ಎಲ್ಲರನ್ನು ಹೊರಗೆ ಕಳುಹಿಸಿ ನಿರಾಣಿ ಹಾಗೂ ಸೇಡಂ ಅವರು ಮಾತುಕತೆ ನಡೆಸಿದರು. ನಾಯಕತ್ವ ಬದಲಾವಣೆ ಚರ್ಚೆ ಹಿನ್ನೆಲೆಯಲ್ಲಿ ಈ ಭೇಟಿ ಮಹತ್ವ ಪಡೆದಿದೆ.