ನೀಡಬೇಕು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್ ನಿರಾಣಿ ಅವರು ಸೂಚಿಸಿದ್ದಾರೆ.
Advertisement
ಮಂಗಳವಾರ ವಾಣಿಜ್ಯ ಮತ್ತು ಕೈಗಾರಿಕಾ, ಭಾರತ್ ಗೋಲ್ಡ್ ಮೈನ್ಸ್, ಭೂ ಮಾಪನ ಇಲಾಖೆ, ಗಣಿ ಇಲಾಖೆ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳ ಜೊತೆ ಸಭೆ ನಡೆಸಿದರು.
Related Articles
Advertisement
ಈಗಾಗಲೇ ಸುಮಾರು 2 ಸಾವಿರ ಎಕರೆ ಜಮೀನನ್ನು ಸಮೀಕ್ಷೆ ನಡೆಸಲಾಗಿದ್ದು, ಬಾಕಿ ಇರುವ ಅಂದಾಜು 3 ಸಾವಿರಕ್ಕೂ ಹೆಚ್ಚಿನ ಜಮೀನಿನ ಸಮೀಕ್ಷಾ ಕಾರ್ಯ ಕೈಗೆತ್ತಿಕೊಳ್ಳಬೇಕು ಎಂದು ನಿದೇರ್ಶನ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ : ದನಗಳ್ಳರನ್ನು ಹಿಡಿಯಲು ಹೋದವರ ಮೇಲೆ ವಾಹನ ಚಲಾಯಿಸಿ ಹಲ್ಲೆ: ಇಬ್ಬರಿಗೆ ಗಂಭೀರ ಗಾಯ
ಇದೇ ಪ್ರದೇಶದಲ್ಲಿ ಚೆನ್ನೈ-ಬೆಂಗಳೂರು ಕೈಗಾರಿಕಾ ಕಾರಿಡಾರ್ ಕೂಡ ಇಲ್ಲಿಯೇ ಹಾದು ಹೋಗುವುದರಿಂದ ಕೈಗಾರಿಕಾ ಬೆಳವಣಿಗೆಗೆ ಸಾಕಷ್ಟು ಸಹಕಾರಿಯಾಗಲಿದೆ. ಟೌನ್ ಶಿಪ್ ನಿರ್ಮಾಣ ಮಾಡಲು ಯೋಗ್ಯವಾಗಿರುವುದರಿಂದ ತ್ವರಿತವಾಗಿ ಸಮೀಕ್ಷೆಯನ್ನು ಮುಗಿಸಬೇಕು ಎಂದು ಸಭೆಯಲ್ಲಿ ಹೇಳಿದ್ದಾರೆ ಎಂದು ವಿಶ್ವಸನೀಯ ಮೂಲಗಳ ಖಚಿತಪಡಿಸಿವೆ.
ಈ ಪ್ರದೇಶವನ್ನು ಕೈಗಾರಿಕಾ ಬಳಕೆಗೆ ಬಳಸಿಕೊಳ್ಳುವ ಸಂಬಂಧ ಕರ್ನಾಟಕದವರೇ ಆದ ಕೇಂದ್ರ ಗಣಿ ಮತ್ತು ಕಲ್ಲಿದ್ದಲು ಸಚಿವರಾದ ಪ್ರಹ್ಲಾದ್ ಜೋಶಿ ಅವರದೊಂದಿಗೆ ತಾವು ಮತ್ತೊಮ್ಮೆ ಮಾತುಕತೆ ನಡೆಸುವುದಾಗಿ ಸಚಿವ ನಿರಾಣಿ ಅವರು ತಿಳಿಸಿದರು. ಕಳೆದ ಆಗಸ್ಟ್ ತಿಂಗಳ ನಲ್ಲಿಯೇ ಜೋಷಿ ಅವರನ್ನು ಭೇಟಿಯಾಗಿ ಕೆಜಿಎಪ್ ನಲ್ಲಿ ಟೌನ್‍ಶಿಪ್ ನಿರ್ಮಾಣ ಮಾಡುವ ಬಗ್ಗೆ ಮನವಿ ಪತ್ರದಲ್ಲಿ ಸುದೀರ್ಘವಾಗಿ ವಿವರಿಸಿದ್ದರು.
ಈ ಭೂಮಿಯನ್ನು ಕೇಂದ್ರ ಸರ್ಕಾರ ರಾಜ್ಯಕ್ಕೆ ಹಸ್ತಾಂತರ ಮಾಡಿದರೆ, ಹೆಚ್ಚಿನ ಬಂಡವಾಳ ಹೂಡಿಕೆ, ದೊಡ್ಡ ಮಟ್ಟದ ಕೈಗಾರಿಕೆಗಳು ಸ್ಥಾಪನೆಯಾಗಲಿದ್ದು, ರಾಜಧಾನಿ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ಸೇರಿದಂತೆ ಮತ್ತಿತರ ಭಾಗಗಳಲ್ಲಿ’ ಕೈಗಾರಿಕೆಗಳ ಉತ್ತೇಜನ ಸಾವಿರಾರು ಸ್ಥಳೀಯ ಜನರಿಗೆ ಉದ್ಯೋಗವಕಾಶಗಳು’ ಸೃಷ್ಟಿಯಾಗಲಿವೆ ಎಂದು ತಿಳಿಸಿದರು. ಕೆಜಿಎಪ್ ನಗರವು ರಾಜಧಾನಿ ಬೆಂಗಳೂರಿನಿಂದ ಸುಮಾರು 100 ಕಿ.ಮೀ ವ್ಯಾಪ್ತಿಯಲ್ಲಿದ್ದು, ವಿಶ್ವದರ್ಜೆಯ ರಾಷ್ಟ್ರೀಯ ಹೆದ್ದಾರಿಗಳು, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ಅತ್ಯುತ್ತಮ ರೈಲ್ವೆ ಸಂಪರ್ಕ ಹೊಂದಿದೆ.
ಕೆಜಿಎಪ್ ಚಿನ್ನದ ಗಣಿಯು ಅತ್ಯಂತ ಪುರಾತನವಾದ ಗಣಿ ಪ್ರದೇಶವಾಗಿದ್ದು, ಬ್ರಿಟಿಷರ ಕಾಲದಿಂದಲೇ ಇಲ್ಲಿ ಗಣಿಗಾರಿಕೆಯನ್ನು ನಡೆಸಲಾಗುತ್ತಿತು. 2001 ರಿಂದ ಬಿಜಿಎಂಎಲ್ ಸಂಪೂರ್ಣವಾಗಿ ಬಂದ್ ಆಗಿರುವ ಸ್ಥಗಿತಗೊಂಡಿದೆ.
ಇದನ್ನೂ ಓದಿ : ಗುರುದ್ವಾರದಲ್ಲಿ ಪೋಸ್ ಕೊಟ್ಟು ಪಜೀತಿಗೆ ಸಿಲುಕಿದ ಪಾಕ್ ಮಾಡೆಲ್
ಸಭೆಯಲ್ಲಿ ಹಾಜರಿದ್ದ ಭೂ ಮಾಪನ ಹಾಗೂ ಭೂ ದಾಖಲೆಗಳ ಆಯುಕ್ತ ಮನೀಷ್ ಮೌದ್ಗಲ್ , ಆಧುನಿಕ ತಂತ್ರಜ್ಞಾನದ ನೆರವು ಪಡೆದುಕೊಂಡು ಎಷ್ಟು ಸಾಧ್ಯವೋ, ಅಷ್ಟು ಬೇಗ ಸಮೀಕ್ಷೆಯನ್ನು ನಡೆಸಿ ವರದಿಯನ್ನು ನೀಡುವುದಾಗಿ ಸಭೆಗೆ ತಿಳಿಸಿದರು ಇಲಾಖೆಯ ನಂಬಲರ್ಹ ಮೂಲಗಳಿಂದ ತಿಳಿದು ಬಂದಿದೆ.
ಕೇಂದ್ರ ಸರ್ಕಾರದ ಖನಿಜ ಪರಿಶೋಧನೆ ನಿಗಮದ ವ್ಯವಸ್ಥಾಪಕ ನಿದೇರ್ಶಕ ಡಾ. ರಂಜನ್ ರಾಥ್ ಮಾತನಾಡಿ, ಪ್ರಸ್ತುತ ಸದ್ಯಕ್ಕೆ ಇಲ್ಲಿ ಚಿನ್ನದ ನಿಕ್ಷೇಪ ಸಿಗದಿರುವ ಕಾರಣ, ಯಾವುದೇ ಚಟುವಟಿಕೆಗಳು ನಡೆಯುತ್ತಿಲ್ಲ ಎಂದು ತಿಳಿಸಿದರು.
ಸಭೆಯಲ್ಲಿ ರಾಜ್ಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಇ.ವಿ.ರಮಣರೆಡ್ಡಿ,ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಆಯುಕ್ತೆ ಗುಂಜನ್ ಕೃಷ್ಣ ಗಣಿ ಇಲಾಖೆಯ ಕಾರ್ಯದರ್ಶಿ ಪಂಕಜ್ ಕುಮಾರ್ ಪಾಂಡೆ ಕೆಐಎಡಿಬಿ ಸಿಇಒ ಡಾ.ಶಿವಶಂಕರ್ ಸೇರಿದಂತೆ ಮತ್ತಿತರ ಅಧಿಕಾರಿಗಳು ಹಾಜರಿದ್ದರು.