Advertisement

ನೆಟೆರೋಗದಿಂದ ಹಾಳಾಗಿರುವ ತೊಗರಿಗೆ ಸರ್ಕಾರದಿಂದ ಪರಿಹಾರ: ಸಚಿವ ನಿರಾಣಿ

06:03 PM Dec 30, 2022 | Team Udayavani |

ಕಲಬುರಗಿ: ನೆಟೆರೋಗದಿಂದ ಹಾಳಾಗಿರುವ ತೊಗರಿಗೆ ರಾಜ್ಯ ಸರ್ಕಾರದಿಂದ ಪರಿಹಾರ ನೀಡಲಾಗುವುದು ಎಂದು ಬೃಹತ್ ಕೈಗಾರಿಕಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ ನಿರಾಣಿ ಹೇಳಿದರು.

Advertisement

ಬಿಜೆಪಿಯ ಬೂತ್ ವಿಜಯ ಅಭಿಯಾನದಲ್ಲಿ ಪಾಲ್ಗೊಳ್ಳಲು ಆಗಮಿಸಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ತೊಗರಿ ನೆಟೆರೋಗ ಕುರಿತು ಬೆಳಗಾವಿ ಅಧಿವೇಶನದಲ್ಲಿ ಚರ್ಚೆಯಾಗಿದೆ.‌ ಆದರೆ ಯಾವುದೇ ಅಂತೀಮ ನಿರ್ಧಾರವಾಗಿಲ್ಲ.‌ ವಿಶೇಷ ಪ್ಯಾಕೇಜ್ ಕೊಡಬೇಕೋ ಇಲ್ಲವೇ ಪರಿಹಾರ ನೀಡಬೇಕೆಂಬುದನ್ನು ಇನ್ನೊಂದು ಸುತ್ತಿನ ಮಾತುಕತೆ ನಡೆಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸ್ಪಷ್ಟ ಪಡಿಸಿದರು.

ನೆಟೆರೋಗ ದಿಂದ ತೊಗರಿ ಹಾನಿಯಾಗಿರುವುದನ್ನು ಅಧಿಕಾರಿಗಳು ಪ್ರಾಥಮಿಕ ವರದಿ ನೀಡಿದ್ದಾರೆ. ಇನ್ನೊಮ್ಮೆ ವರದಿ ತರಿಸಿಕೊಳ್ಳಲಾಗುವುದು. ಈ ಭಾಗದಲ್ಲಿ ಬೆಳೆಯುವುದು ತೊಗರಿವಂದೇ ಅದೇ ಬೆಳೆ ಹಾನಿ ಯಾಗಿರುವುದರಿಂದ ರೈತ ಸಂಕಷ್ಟಕ್ಕೆ ಒಳಗಾಗಿರುವುದು ಸರ್ಕಾರದ ಗಮನಕ್ಕಿದೆ ಎಂದು ಸಚಿವ ನಿರಾಣಿ ಹೇಳಿದರು.

ವೀರಶೈವ- ಲಿಂಗಾಯತ ಎಲ್ಲ ಒಳಪಂಗಡಗಳು ಅಂದರೆ 3 ಬಿ.ದಲ್ಲಿದ್ದ ಸಮುದಾಯಗಳು ಹೊಸ ಕೆಟೆಗರಿ 2ಡಿಯಲ್ಲಿ ಸೇರಲಿವೆ. ಈ ಮೊದಲು ಒಂದೇ ಸಮುದಾಯ ಎರಡು ಕೆಟೆಗರಿಯಲ್ಲಿ ಬರುತ್ತವೆ ಎಂಬ ಗೊಂದಲವಿತ್ತು.‌ ಆದರೆ ಹೊಸ ಕೆಟಗೇರಿಯಲ್ಲಿ ಇದಕ್ಕೆ ಅವಕಾಶವಿಲ್ಲ.‌ ಒಟ್ಟಾರೆ ಹೊಸ ಕೆಟಗೇರಿಯಿಂದ ವೀರಶೈವ- ಲಿಂಗಾಯತ ಮೀಸಲಾತಿ ಪ್ರಮಾಣ 6ರಿಂದ 7ಕ್ಕೆ ಹೆಚ್ಚಳವಾಗಲಿದೆ ಎಂದು ಅಭಿಪ್ರಾಯಿಸಿದರು.

ಪ್ರಿಯಾಂಕ್ ಸೋಲ್ತಾರೆ: ನಮಗೀಗ ಪರೀಕ್ಷೆ ಸಮಯ.‌ಇದಕ್ಕಾಗಿಯೇ ಪಕ್ಷದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾಯದರ್ಶಿ ಬಿ.ಎಲ್. ‌ಸಂತೋಷ ಸಭೆ ನಡೆಸಲು ಕಲಬುರಗಿ ಗೆ ಆಗಮಿಸಿದ್ದಾರೆ. ಎಲ್ಲ 224 ಕ್ಷೇತ್ರಗಳನ್ನು ಪಕ್ಷ ಗಂಭೀರವಾಗಿ ತೆಗೆದುಕೊಂಡಿದೆ. ಜಿಲ್ಲೆಯ ಚಿತ್ತಾಪುರದಲ್ಲಿ ಈ ಸಲ ಪ್ರಿಯಾಂಕ್ ಖರ್ಗೆ ಸೋಲ್ತಾರೆ. ಅವರ ತಂದೆಗೆ ಸೋಲಿಸಿರುವಾಗ ಇವರಿಗೆ ಸೋಲಿಸುವುದು ದೊಡ್ಡದಲ್ಲ ಎಂದು ಸಚಿವ ನಿರಾಣಿ ಇದೇ ಸಂದರ್ಭದಲ್ಲಿ ಕೇಳಲಾದ ಪ್ರಶ್ನೆಗೆ ಉತ್ತರಿಸಿದರು.

Advertisement

ಇದನ್ನೂ ಓದಿ: ಭರದಿಂದ ಸಾಗುತ್ತಿರುವ ಕಾಮಗಾರಿ: ಹೊಸ ಸಂಸತ್ ಕಟ್ಟಡದಲ್ಲಿ ಬಜೆಟ್ ಅಧಿವೇಶನ ಸಾಧ್ಯತೆ

Advertisement

Udayavani is now on Telegram. Click here to join our channel and stay updated with the latest news.

Next