Advertisement

ಕ್ವಾರಿಗಳಲ್ಲಿ ಅನಧಿಕೃತ ಸ್ಫೋಟಕಗಳನ್ನು ಪತ್ತೆಹಚ್ಚಲು ಅಧಿಕಾರಿಗಳಿಗೆ ಸಚಿವ ನಿರಾಣಿ ಸೂಚನೆ

10:56 PM Feb 23, 2021 | Team Udayavani |

ಚಿಕ್ಕಬಳ್ಳಾಪುರ (ಗುಡಿಬಂಡೆ) : ಕಲ್ಲುಕ್ವಾರಿ ಹಾಗೂ ಗಣಿಗಾರಿಕೆ ಪ್ರದೇಶಗಳಲ್ಲಿ ಕಾನೂನುಬಾಹಿರವಾಗಿ ಸ್ಟೋಟಕ ವಸ್ತುಗಳನ್ನು ಯಾರಾದರೂ ಸಂಗ್ರಹಿಸಿಟ್ಟಿದ್ದರೆ, ತಕ್ಷಣವೇ ಪತ್ತೆ ಹಚ್ಚಬೇಕೆಂದು ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ್ ಆರ್.ನಿರಾಣಿ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

Advertisement

ಮಂಗಳವಾರ ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ಹಿರೇನಾಗವಲ್ಲಿಯ ಘಟನಾ ಸ್ಥಳಕ್ಕೆ ಭೇಟಿ ನೀಡಿ ಅಧಿಕಾರಿಗಳಿಂದ ಮಾಹಿತಿ ಪಡೆದು ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು ರಾಜ್ಯದ ನಾನಾ ಭಾಗಗಳಲ್ಲಿ ಕಲ್ಲುಕ್ವಾರಿ ಹಾಗೂ ಗಣಿಗಾರಿಕೆ ಪ್ರದೇಶಗಳಲ್ಲಿ ಕಾನೂನುಬಾಹಿರವಾಗಿ ಸ್ಟೋಟಕ ವಸ್ತುಗಳನ್ನು ಸಂಗ್ರಹಿಸಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬಂದಿದ್ದು ಅಂಥವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು.

ಇನ್ನು ಮುಂದೆ ರಾಜ್ಯದ ಯಾವುದೇ ಭಾಗದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಮುನ್ನಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು. ಇಲಾಖೆಯಿಂದ ಅನುಮತಿ ಪಡೆಯದೆ, ಸ್ಟೋಟಕ ವಸ್ತುಗಳನ್ನು ಬಳಸಿದರೆ ಅಂತಹವರ ಮೇಲೆ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಜರುಗಿಸಲಾಗುವುದೆಂದು ಎಚ್ಚರಿಸಿದರು.

ಇದನ್ನೂ ಓದಿ:ಪ್ರೇಮಿಗಳ ದಿನಕ್ಕೆ ಜಿರಾಫೆ ಹೃದಯ ಗಿಫ್ಟ್…ಪತಿಗಾಗಿ ಮೂಕಜೀವಿ ಬಲಿ ಪಡೆದ ಪ್ರಾಣಿಹಂತಕಿ  

ಸ್ಟೋಟಕ ವಸ್ತುಗಳನ್ನು ಬಳಕೆ ಮಾಡಬೇಕಾದರೆ, ಸರಕಾರದಿಂದ ಲೈಸೆನ್ಸ್ ಪಡೆದಿರಬೇಕು.ಇನ್ನು ಮುಂದೆ ಇಂತಹ ಘಟನೆಗಳಿಗೆ ಕಾರಣರಾದವರ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದೆಂದು ಗುಡುಗಿದರು.

Advertisement

ಸಾರಿಗೆ ಹಾಗೂ ಗೃಹ ಇಲಾಖೆಯ ಸಹಭಾಗಿತ್ವದಲ್ಲಿ ರಾಜ್ಯದ ಪ್ರತಿಯೊಂದು ಚಕ್ ಪೋಸ್ಟ್‌ ಗಳಲ್ಲಿ ಬಿಗಿಯಾದ ತಪಾಸಣೆ ನಡೆಸಲಾಗುವುದು. ಹೊರರಾಜ್ಯಗಳಿಂದ ಬರುವ ಹಾಗೂ ಇಲ್ಲಿಂದ ಹೋಗುವ ವಾಹನಗಳ ಮೇಲೆ ಹದ್ದಿನ ಕಣ್ಣಿಡಲಾಗುವುದೆಂದು ತಿಳಿಸಿದರು.

ಮುಂದಿನ ದಿನಗಳಲ್ಲಿ ಸ್ಟೋಟಕ ವಸ್ತುಗಳನ್ನು ಬಳಕೆಯನ್ನು ಅನುಮತಿ ಪಡೆದವರು ಮಾತ್ರ ಬಳಸಬೇಕೆಂಬ ಕಾನೂನು ಜಾರಿಮಾಡಲಿದ್ದೇವೆ.ಇದರಿಂದ ಇಂತಹ ಅನಾಹುತಗಳನ್ನು ತಡೆಯಲು ಸಾಧ್ಯವಾಗುತ್ತದೆಂದು ತಿಳಿಸಿದರು.

ಅಧಿಕಾರಿಗಳಿಗೆ ಎಚ್ಚರಿಕೆ
ರಾಜ್ಯದಲ್ಲಿ ಮತ್ತೆ ಮತ್ತೆ ಇಂತಹ ಘಟನೆಗಳು ನಡೆಯುತ್ತಿರುವುದು ಅತ್ಯಂತ ದುರದೃಷ್ಟಕರ. ತಕ್ಷಣವೇ ಅಧಿಕಾರಿಗಳು ಎಚ್ಚೆತ್ತುಕೊಂಡು ಅನಾಹುತ ತಡೆಯದಿದ್ದರೆ, ಅಂತಹವರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ಕೊಟ್ಡರು.

Advertisement

Udayavani is now on Telegram. Click here to join our channel and stay updated with the latest news.

Next