Advertisement

ಮುರುಗೇಶ್‌ ನಿರಾಣಿ ದಿಢೀರ್‌ ದೆಹಲಿ ಭೇಟಿ : ರಾಜ್ಯ ಬಿಜೆಪಿಯಲ್ಲಿ ಹೆಚ್ಚಿದ ಕುತೂಹಲ

08:02 PM Jul 06, 2021 | Team Udayavani |

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ನಿರಂತರ ಚರ್ಚೆಗೆ ಗ್ರಾಸವಾಗಿರುವ ನಾಯಕತ್ವ ಬದಲಾವಣೆಯ ವಿಚಾರಕ್ಕೆ ತೆರೆ ಬಿದ್ದಿದೆ ಎನ್ನುವಷ್ಟಲ್ಲಿ ಮತ್ತೆ ಬೆಳವಣಿಗೆಗಳು ನಡೆಯುತ್ತಿವೆ.

Advertisement

ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿ ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ್‌ ನಿರಾಣಿ ದಿಢೀರ್‌ ದೆಹಲಿಗೆ ತೆರಳಿರುವುದು ರಾಜ್ಯ ಬಿಜೆಪಿಯಲ್ಲಿ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರ ಕರೆಯ ಮೇರೆಗೆ ದೆಹಲಿಗೆ ಭೇಟಿ ನೀಡಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿದ್ದು, ಮಂಗಳವಾರ ಸಂಜೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ನಿರಾಣಿ ಭೇಟಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಅಮಿತ್‌ ಶಾ ಅವರೊಂದಿಗೆ ಮುರುಗೇಶ್‌ ನಿರಾಣಿ ಉತ್ತಮ ಬಾಂಧವ್ಯ ಇಟ್ಟುಕೊಂಡಿದ್ದು, ರಾಜ್ಯದಲ್ಲಿ ಹೊಸ ನಾಯಕತ್ವಕ್ಕೆ ಅವಕಾಶ ಕೊಡುವ ವಿಚಾರದಲ್ಲಿ ಅಮಿತ್‌ ಶಾ ಮುರುಗೇಶ್‌ ನಿರಾಣಿ ಅವರ ಪರ ಒಲವು ಹೊಂದಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ಆದರೆ, ಸಚಿವ ಮರುಗೇಶ್‌ ನಿರಾಣಿ, ದೆಹಲಿ ವಿಮಾನ ನಿಲ್ದಾಣದಲ್ಲಿ ಬೆಳಿಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿ, ತಾವು ವಯಕ್ತಿಕ ಕಾರಣಕ್ಕೆ ದೆಹಲಿಗೆ ಆಗಮಿಸಿದ್ದು, ಯಾವುದೇ ನಾಯಕರ ಭೇಟಿಗೆ ಬಂದಿಲ್ಲ ಎಂದು ಹೇಳಿಕೆ ನೀಡಿದ್ದಾರೆ. ಆದರೆ, ಅವರ ಆಪ್ತ ಮೂಲಗಳ ಪ್ರಕಾರ ಸಂಜೆ ಪಕ್ಷದ ಹೈಕಮಾಂಡ್‌ ನಾಯಕರಾದ ಅಮಿತ್‌ ಶಾ ಅವರನ್ನು ಭೇಟಿ ಮಾಡಿ ರಾಜ್ಯ ರಾಜಕೀಯದ ಪ್ರಸಕ್ತ ವಿದ್ಯಮಾನಗಳ ಕುರಿತು ಚರ್ಚೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ :ಐಟಿ ಪೋರ್ಟಲ್‌ ಸಮಸ್ಯೆ ಶೀಘ್ರ ಇತ್ಯರ್ಥ : ಸಚಿವ ಅನುರಾಗ್‌ ಠಾಕೂರ್‌

Advertisement

ರಾಜ್ಯದಲ್ಲಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ಬದಲಾವಣೆಯಾದರೆ, ಲಿಂಗಾಯತ ಸಮುದಾಯದವರಿಗೆ ವಿಶೇಷವಾಗಿ ಪಂಚಮಸಾಲಿ ಸಮುದಾಯದವರಿಗೆ ನೀಡಬೇಕೆಂಬ ಒತ್ತಡ ಹೆಚ್ಚಿರುವುದರಿಂದ ಪಂಚಮಸಾಲಿ ಸಮುದಾಯದಲ್ಲಿ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಗಳಲ್ಲಿ ಸಚಿವ ಮುರುಗೇಶ್‌ ನಿರಾಣಿ ವರ ಹೆಸರೂ ಕೇಳಿ ಬರುತ್ತಿರುವುದರಿಂದ ಅವರ ದೆಹಲಿ ಭೇಟಿ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.

ಗುರುವಾರ ಕೇಂದ್ರ ಸಚಿವ ಸಂಪುಟ ಪುನಾರಚನೆಯಾಗುವುದರಿಂದ ಕೇಂದ್ರ ಸಚಿವ ಸಂಪುಟದಲ್ಲಿ ರಾಜ್ಯ ಯಾವ ಸಂಸದರಿಗೆ ಸಚಿವ ಸ್ಥಾನ ಸಿಗುತ್ತದೆ ಎನ್ನುವದರ ಮೇಲೆಯೇ ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಗೆ ಪ್ರಾಧಾನ್ಯತೆ ದೊರೆಯಲಿದೆ ಎಂಬ ಮಾತುಗಳು ರಾಜ್ಯ ಬಿಜೆಪಿ ವಲಯದಲ್ಲಿ ಕೇಳಿ ಬರುತ್ತಿವೆ.

Advertisement

Udayavani is now on Telegram. Click here to join our channel and stay updated with the latest news.

Next