Advertisement

59 ಯೋಜನೆಗಳ 3,455.39 ಕೋಟಿ ರೂ. ಬಂಡವಾಳ ಹೂಡಿಕೆ ಪ್ರಸ್ತಾವನೆಗೆ ಸಮಿತಿ ಅನುಮೋದನೆ

05:16 PM Jan 25, 2023 | Team Udayavani |

ಬೆಂಗಳೂರು: ರಾಜ್ಯದಲ್ಲಿ ಬಂಡವಾಳ ಹೂಡಿಕೆ ಮತ್ತು ಉದ್ಯೋಗ ಸೃಜನೆಗೆ ಮತ್ತಷ್ಟು ಗಮನಹರಿಸಿರುವ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ 59 ಯೋಜನೆಗಳ 3,455.39 ಕೋಟಿ ರೂ. ಬಂಡವಾಳಹೂಡಿಕೆಗೆ ಅನುಮೋದನೆ ನೀಡಿದೆ.

Advertisement

ಮಂಗಳವಾರ ಸಂಜೆ ಬೆಂಗಳೂರಿನ ಕರ್ನಾಟಕ ಉದ್ಯೋಗ ಮಿತ್ರ ಕಚೇರಿಯಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ ಆರ್ ನಿರಾಣಿ ಅವರ ಅಧ್ಯಕ್ಷತೆಯಲ್ಲಿ ನಡೆದ 137ನೇ ರಾಜ್ಯಮಟ್ಟದ ಏಕಗವಾಕ್ಷಿ ಸಮಿತಿ ಸಭೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.

ಒಟ್ಟು 59 ಯೋಜನೆಗಳಿಂದ 3,455.39 ಕೋಟಿ ರೂ. ಬಂಡವಾಳ ಹೂಡಿಕೆಯಾಗಲಿದ್ದು, 18,567 ಜನರಿಗೆ ಉದ್ಯೋಗ ಅವಕಾಶಗಳು ಲಭಿಸಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ ಆರ್ ನಿರಾಣಿ ತಿಳಿಸಿದ್ದಾರೆ.

ಅನುಮೋದನೆ ನೀಡಿರುವ ಪ್ರಸ್ತಾವನೆಗಳಲ್ಲಿ 50 ಕೋಟಿ ರೂ. ಅಧಿಕ ಹೆಚ್ಚು ಬಂಡವಾಳ ಹೂಡಿಕೆಯ 11 ಪ್ರಮುಖ ಬೃಹತ್ ಮತ್ತು ಮಧ್ಯಮ ಯೋಜನೆಗಳಿಗೆ ಸಮಿತಿಯು ಅನುಮೋದನೆ ನೀಡಿದೆ. ಇದರಿಂದ 2186.70 ಕೋಟಿ ರೂ. ಬಂಡವಾಳ ಹೂಡಿಕೆಯಾಗಿ 10,559 ಜನರಿಗೆ ಉದ್ಯೋಗ ಲಭಿಸಲಿದೆ ಎಂದು ಹೇಳಿದ್ದಾರೆ.

15 ಕೋಟಿ ರೂ. ಯಿಂದ 50 ಕೋಟಿ ರೂ. ಒಳಗಿನ ಬಂಡವಾಳ ಹೂಡಿಕೆಯ 46 ಹೊಸ ಯೋಜನೆಗಳಿಗೆ ಸಮಿತಿ ಹಸಿರು ನಿಶಾನೆ ನೀಡಿದೆ. ಒಟ್ಟು 1049.19 ಕೋಟಿ ರೂ. ಬಂಡವಾಳ ಹೂಡಿಕೆಯಾಗಿ ಅಂದಾಜು 8,008 ಜನರಿಗೆ ಉದ್ಯೋಗ ಸೃಜನೆಯಾಗಲಿದೆ.

Advertisement

ಹೆಚ್ಚುವರಿ ಬಂಡವಾಳ ಹೂಡಿಕೆಯ ಎರಡು ಯೋಜನೆಗಳಿಗೆ ಏಕಗವಾಕ್ಷಿ ಸಮಿತಿಯು ಅನುಮೋದಿಸಿದ್ದು, 219.50 ಕೋಟಿ ರೂ. ಹೂಡಿಕೆಯಾಗಲಿದೆ.

ಅನುಮೋದನೆ ನೀಡಿರುವ ಪ್ರಸ್ತಾವನೆಗಳು:

ಮೈಸೂರ್ ಸ್ಟೀಲ್ಸ್ ಲಿಮಿಟೆಡ್

ಸ್ಥಳ: ಮೇಟಗಾನಹಳ್ಳಿ. ಮೈಸೂರು -ಹೂಡಿಕೆ 405.43 ಕೋಟಿ ರೂ, ಉದ್ಯೋಗ 200

ಎನ್.?ಐ.ಡಿ.ಸಿ ಇಂಡಸ್ಟ್ರೀಯಲ್ ಆಟೋಮೋಷನ್ ಇಂಡಿಯಾ ಲಿಮಿಟೆಡ್

ಸ್ಥಳ: ಕೋಟುರ್ ಬೇಲೂರ್ ಇಎಂಸಿ ಕೈಗಾರಿಕಾ ಪ್ರದೇಶ- ಹೂಡಿಕೆ 350 ಕೋಟಿ ರೂ, ಉದ್ಯೋಗ 730

ಸಿಲಾನ್ ಬಿವೆರೇಜ್ ಲಿಮಿಟೆಡ್

ಸ್ಥಳ: ಎಪ್ ಎಮ್ ಸಿ ಜಿ ಕ್ಲಸ್ಟರ್ ಧಾರವಾಡ- ಹೂಡಿಕೆ 256.3 ಕೋಟಿ ರೂ, ಉದ್ಯೋಗ 200.

ಬಾಲಾಜಿ ವೇರರ್ಸ್ ಪ್ರೈ ಲಿಮೆಟೆಡ್

ಸ್ಥಳ: ಕಣಗಲ್ ಕೈಗಾರಿಕಾ ಪ್ರದೇಶ ಬೆಳಗಾವಿ ಜಿಲ್ಲೆ – ಹೂಡಿಕೆ 251.25 ಕೋಟಿ ರೂ, ಉದ್ಯೋಗ 500

ಮಂಜುಶ್ರೀ ಟೆಕ್ನೋಪಾರ್ಕ್ ಲಿಮೆಟೆಡ್

ಸ್ಥಳ: ಬಡಗುಪ್ಪೆ, ಕೆಲ್ಲಂಬಳ್ಳಿ, ಕೈಗಾರಿಕಾ ಪ್ರದೇಶ ಚಾಮರಾಜನಗರ – ಹೂಡಿಕೆ 253 ಕೋಟಿ ರೂ, ಉದ್ಯೋಗ 500

ಕ್ಸಿಸೋಡ ಇಂಡಿಯಾ ಪ್ರೈ ಲಿಮೆಟೆಡ್

ಸ್ಥಳ: ಶಿರಾ ಕೈಗಾರಿಕಾ ಪ್ರದೇಶ ತುಮಕೂರು – ಹೂಡಿಕೆ 138 ಕೋಟಿ ರೂ, ಉದ್ಯೋಗ 160

ಮಹಾಮಾನವ್ ಇನ್‍ಸ್ಪಾಟ್ ಪ್ರೈ ಲಿಮೆಟೆಡ್

ಸ್ಥಳ: ಬೆಳಗಲ್ ಗ್ರಾಮ, ಬಳ್ಳಾರಿ – ಹೂಡಿಕೆ 90 ಕೋಟಿ ರೂ, ಉದ್ಯೋಗ 90

ಎ.ಸಿ.ಆರ್ ಪ್ರಾಜೆಕ್ಟ್

ಸ್ಥಳ: ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ, – ಹೂಡಿಕೆ 85 ಕೋಟಿ ರೂ, ಉದ್ಯೋಗ 350

ನಿಯೋಬಿ ಸಲ್ಯೂಷನ್ ಪ್ರೈ ಲಿಮಿಟೆಡ್

ಸ್ಥಳ: ಎಎಲ್‍ಜಿಸಿ ಕ್ಲಸ್ಟರ್, ಮಮ್ಮಿಗಟ್ಟಿ ಕೈಗಾರಿಕಾ ಪ್ರದೇಶ, ಧಾರವಾಡ, ಹೂಡಿಕೆ -50 ಕೋಟಿ ರೂ, ಉದ್ಯೋಗ 563

ಅಭಯ್ ಆಗ್ರೋ ಫುಡ್ ಪ್ರೈಲಿಮಿಟೆಡ್

ಸ್ಥಳ: ಗಬಾರ ಗ್ರಾಮ, ಕೊಪ್ಪಳ ಜಿಲ್ಲೆ- ಹೂಡಿಕೆ 32.65 ಕೋಟಿ ರೂ, ಉದ್ಯೋಗ -35

Advertisement

Udayavani is now on Telegram. Click here to join our channel and stay updated with the latest news.

Next