Advertisement

ಅಕ್ರಮ ಗಣಿಗಾರಿಕೆ ತಡೆಗೆ ಅಗತ್ಯ ಕ್ರಮ: ಸಚಿವ ಮುರುಗೇಶ್ ನಿರಾಣಿ

03:43 PM Jan 26, 2021 | Team Udayavani |

ಯಾದಗಿರಿ: ರಾಜ್ಯ ಮಾ ದೇಶಾದ್ಯಂತ ಅಕ್ರಮ ಗಣಿಗಾರಿಕೆ ನಡೆಯುತ್ತಿದೆ. ಲೈಸನ್ಸ್ ಪಡೆದು ಗಣಿಗಾರಿಕೆ ಮಾಡುತ್ತಿದ್ದಾರೆ. ಆದರೆ ಕೆಲವು ಕಡೆ ಅಕ್ರಮವಾಗಿ ಮಾಡುತ್ತಿರುವುದು ಗಮನಕ್ಕೆ ಬಂದಿದೆ. ಅಭಿವೃದ್ಧಿ ದೃಷ್ಟಿಯಿಂದ ಸಿಮೆಂಟ್, ಕಲ್ಲು ಹಾಗೂ ಮರಳು ಬೇಕು. ಅಕ್ರಮ ಗಣಿಗಾರಿಕೆ ತಡೆಯಲು ಕಾನೂನು ರೀತಿ ನಿಯಮಗಳನ್ನು ಬಿಗಿಗೊಳಿಸಿ ಅಗತ್ಯ ಕ್ರಮವಹಿಸಲಾಗುವುದು ಎಂದು ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ ಆರ್.ನಿರಾಣಿ ಹೇಳಿದರು.

Advertisement

72ನೇ ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ಯಾದಗಿರಿಯಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಕ್ರಮ ಗಣಿಗಾರಿಕೆ ವಿಷಯವನ್ನು ಮುಖ್ಯಮಂತ್ರಿ ಯಡಿಯೂರಪ್ಪ ನವರು ಗಂಭೀರವಾಗಿ ಪರಿಗಣಿಸಿದ್ದು, ಗ್ರಾಮದಿಂದ ಗಣಿಗಾರಿಕೆ ಎಷ್ಟು ದೂರದಲ್ಲಿ ನಡೆಸಬೇಕು ಮತ್ತು ಯಾವ ನಿಯಮ ಪಾಲಿಸಬೇಕು ಎನ್ನುವ ರೂಪರೇಷೆ ತಯಾರಿಸಲಾಗುದು. ಯಾರೇ ಇರಲಿ, ಎಷ್ಟೇ ಪ್ರಭಾವಿಗಳಿರಲಿ ಅಕ್ರಮ ಎಸಗಿದವರ ಮೇಲೆ ಕಾನೂನು ರೀತಿ ಕ್ರಮ ವಹಿಸಲಾಗುವುದು ಎಂದರು.

ಅಕ್ರಮಗಳನ್ನು ತಡೆಯಲು ಬೆಂಗಳೂರಿನಲ್ಲಿ ಉನ್ನತ ಅಧಿಕಾರಿಗಳ ಸಭೆ ಕರೆಯಲಾಗಿದ್ದು ವಿಷಯಗಳ ಕುರಿತು ಸಮಗ್ರ ಚರ್ಚೆ ನಡೆಸಿ, ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಲಾಗುವುದು ಎಂದರು.

ಇದನ್ನೂ ಓದಿ:ರೈತರ ಹೆಸರಿನಲ್ಲಿ ಗಲಭೆ ಮಾಡಿದ್ದು ಯಾರೆಂದು ಗೊತ್ತಿದೆ: ಭಾರತೀಯ ಕಿಸಾನ್ ಸಂಘ

ಯಾದಗಿರಿ ಜಿಲ್ಲೆಯ ಕೆಲವು ಸಮಸ್ಯೆಗಳ ಕುರಿತು ಶಾಸಕರು ಗಮನಕ್ಕೆ ತಂದಿದ್ದಾರೆ. ಮುಖ್ಯಮಂತ್ರಿಗಳು ಹಾಗೂ ಸಚಿವರ ಗಮನಕ್ಕೆ ತಂದು ಜಿಲ್ಲೆಯ ಅಗತ್ಯತೆಗಳನ್ನು ಪೂರೈಸಲು ಕ್ರಮವಹಿಸಲಾಗುವುದು ಎಂದು ಭರವಸೆ ನೀಡಿದರು.

Advertisement

ರೈತರ ಟ್ರ್ಯಾಕ್ಟರ್ ರ‍್ಯಾಲಿ ಕುರಿತು ಪ್ರತಿಕ್ರಿಯಿಸಿ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತರ ಆದಾಯ ದುಪ್ಪಟ್ಟುಗೊಳಿಸಲು ಕಾಯ್ದೆಗಳನ್ನು ಜಾರಿಗೆ ತಂದಿದ್ದು, ಈಗಿನ ಸಂದರ್ಭದಲ್ಲಿ ತಕ್ಕಂತೆ ಬದಲಾಯಿಸಿದ್ದಾರೆ. ರೈತನ ಟ್ರ್ಯಾಕ್ಟರ್ ರ‍್ಯಾಲಿ ರಾಜಕೀಯ ದುರುದ್ದೇಶದಿಂದ ಕೂಡಿದೆ. ವಿಪಕ್ಷಗಳು ರೈತರಿಗೆ ತಪ್ಪು ದಾರಿಗೆ ಎಳೆಯುತ್ತಿದ್ದಾರೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next