Advertisement

ಸಚಿವ ಮುರುಗೇಶ್ ನಿರಾಣಿ ಟ್ವಿಟ್ಟರ್ ಖಾತೆ ಹ್ಯಾಕ್!

02:34 PM Sep 21, 2021 | Team Udayavani |

ಬೆಂಗಳೂರು: ಬೃಹತ್ ಮತ್ತು ಮಧ್ಯಮ ಕೈಗಾರಿಕಾ ‌ಸಚಿವ ಮುರುಗೇಶ್ ಆರ್ ನಿರಾಣಿ ಅವರ ಟ್ವಿಟ್ಟರ್ ಖಾತೆ (@NiraniMurugesh) ಹ್ಯಾಕ್ ಮಾಡಲಾಗಿದೆ.

Advertisement

ಈ ಬಗ್ಗೆ ಪ್ರಕಟಣೆ ನೀಡಿರುವ ಸಚಿವರು, ನನ್ನ ಟ್ವಿಟರ್ ಖಾತೆ @NiraniMurugesh  ಯನ್ನು ಕೆಲವರು ‌ಇಂದು ಅಜ್ಞಾತ ವಿದೇಶಿ ಸ್ಥಳದಿಂದ ಹ್ಯಾಕ್ ಮಾಡಲಾಗಿದೆ. ಆರೋಪಿಗಳ ನಿಖರವಾದ ಮೂಲ ಮತ್ತು ಗುರುತು ನಮಗೆ ತಿಳಿದಿಲ್ಲ ಎಂದಿದ್ದಾರೆ.

ಹ್ಯಾಕರ್‌ಗಳು ಪೋಸ್ಟ್ ಮಾಡುವ ಯಾವುದೇ ಮೋಸದ ಸಂದೇಶಗಳಿಗೆ ಬಲಿಯಾಗಬೇಡಿ. ನನ್ನ ಖಾತೆಯಲ್ಲಿರುವ ಯಾವುದೇ ಅವಹೇಳನಕಾರಿ ಮತ್ತು ಅಸಂಸದೀಯ ಸಂದೇಶಗಳನ್ನು ನಿರ್ಲಕ್ಷಿಸಿ ಎಂದು ಸಚಿವ ನಿರಾಣಿ ಮನವಿ ಮಾಡಿದ್ದಾರೆ.

ಇದನ್ನೂ ಓದಿ:ಶಾರುಖ್ ಸಿನಿಮಾ ಟ್ರೈಲರ್ ನೋಡಿ ಮೋಸಹೋದ ಪ್ರೇಕ್ಷಕಳಿಗೆ ಸುಪ್ರೀಂ ಕೋರ್ಟ್ ನಲ್ಲಿ ಜಯ

ಈ ಬಗ್ಗೆ ಟ್ವಿಟರ್‌ ಗೆ ದೂರು ನೀಡಿದ್ದು, ಶೀಘ್ರದಲ್ಲೇ ಬೆಂಗಳೂರಿನ ಸೈಬರ್ ಸೆಲ್ ಪೊಲೀಸರಿಗೆ ದೂರು ನೀಡುತ್ತೇವೆ. ಈ ಹಿಂದೆಯು ಇದೇ ರೀತಿ ಕೆಲವು ದುಷ್ಕರ್ಮಿಗಳು ನನ್ನ ಫೇಸ್ ಬುಕ್ ಹ್ಯಾಕ್ ಮಾಡಿದ್ದರು ಎಂದು ಮುರುಗೇಶ್ ನಿರಾಣಿ ಅವರು ತಿಳಿಸಿದ್ದಾರೆ.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next