ಬೆಂಗಳೂರು: ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ದೌರ್ಜನ್ಯ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗದ ಮುರುಘಾ ಮಠದ ಡಾ. ಶಿವಮೂರ್ತಿ ಮುರುಘಾ ಶ್ರೀಗಳಿಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಆದರೆ ಜಾಮೀನು ಸಿಕ್ಕರೂ ಶ್ರೀಗಳಿಗೆ ಬಿಡುಗಡೆ ಭಾಗ್ಯ ಮಾತ್ರ ಸಿಗಲಿಲ್ಲ ಕಾರಣ ಪೋಕ್ಸೋ ಪ್ರಕರಣದಲ್ಲಿ ಜೈಲುಪಾಲಾಗಿದ್ದ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಶ್ರೀಗಳಿಗೆ ಹೈಕೋರ್ಟ್ ಒಂದು ಪ್ರಕರಣದಲ್ಲಿ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದ್ದು ಇನ್ನೊಂದು ಪ್ರಕರಣ ಬಾಕಿ ಉಳಿದಿದೆ.
ಮುರುಘಾಶ್ರೀ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಶ್ರೀಗಳಿಗೆ ಏಳು ಷರತ್ತನ್ನು ವಿಧಿಸಿ ಜಾಮೀನು ನೀಡಿದೆ. ಅದರಂತೆ ಮುರುಘಾ ಶ್ರೀಗಳು ತಮ್ಮ ಪಾಸ್ ಪೋರ್ಟ್ ಅನ್ನು ಕೋರ್ಟ್ ವಶಕ್ಕೆ ನೀಡಬೇಕಿದೆ. ಇಬ್ಬರು ಶ್ಯೂರಿಟಿಗಳನ್ನು ಒದಗಿಸಬೇಕು. ಇನ್ನು ಚಿತ್ರದುರ್ಗಕ್ಕೆ ಹೋಗದಂತೆ ಷರತ್ತು ವಿಧಿಸಿದೆ. ಮುಂದೆ ಇಂತಹ ಕೃತ್ಯಗಳು ಮತ್ತೆ ಪುನರಾವರ್ತನೆ ಆಗಬಾರದು. ಕೋರ್ಟ್ ವಿಚಾರಣೆಗೆ ವಿಡಿಯೋ ಕಾನ್ಫರೇನ್ಸ್ ಮೂಲಕ ಹಾಜರಾಗಬೇಕು ಎಂದು ಕೋರ್ಟ್ ಹೇಳಿದೆ.
ಲೈಂಗಿಕ ದೌರ್ಜನ್ಯ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ಕಳೆದ ಒಂದು ವರ್ಷದಿಂದ ಚಿತ್ರದುರ್ಗ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ.
ಇದನ್ನೂಓದಿ: Battery Car: ಮಡಗಾಂವ್ ರೈಲು ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಬ್ಯಾಟರಿ ಚಾಲಿತ ಕಾರು ಸೌಲಭ್ಯ