ಚಿತ್ರದುರ್ಗ: ಮುರುಘಾ ಮಠದ ಪೀಠಾಧಿಪತಿ ಡಾ.ಶ್ರೀ.ಶಿವಮೂರ್ತಿ ಮುರುಘಾ ಶರಣರನ್ನು ಪೋಕ್ಸೊ ಕಾಯ್ದೆ ಅಡಿ ಪೊಲೀಸರು ಬಂಧಿಸಿದ್ದಾರೆ.
ಅಪ್ರಾಪ್ತೆಯರ ಮೇಲಿನ ಲೈಂಗಿಕ ಕಿರುಕುಳದ ಹಿನ್ನೆಲೆಯಲ್ಲಿ ಕಳೆದ ಐದು ದಿನಗಳಿಂದ ಶ್ರೀಗಳ ಬಂಧನದ ಕುರಿತು ಸುದ್ದಿಗಳು ಹಬ್ಬಿದ್ದವು.
ಗುರುವಾರ ತಡರಾತ್ರಿ ಪೊಲೀಸರು ಶ್ರೀಗಳನ್ನು ಬಂಧಿಸಿದ್ದಾರೆ. ಈ ಕುರಿತು ರಾಜ್ಯಾದ್ಯಂತ ಪರ-ವಿರೋಧ ಪ್ರತಿಭಟನೆಗಳು ತೀವ್ರಗೊಂಡಿದ್ದವು.
ಭವ್ಯ ಪರಂಪರೆ ಹಾಗೂ ಐತಿಹಾಸಿಕ ಹಿನ್ನೆಲೆ ಹೊಂದಿ, ನಾಡಿನ ವಿಶಿಷ್ಟ ಮಠವಾಗಿದ್ದ ಮುರುಘಾ ಮಠಕ್ಕೆ ಈ ಪ್ರಕರಣ ಒಂದು ಕಪ್ಪು ಚುಕ್ಕೆಯಾಗಿ ದಾಖಲಾಗಿದೆ.
ಪ್ರಕರಣದ ಹಿನ್ನೆಲೆ: ಮುರುಘಾ ಮಠದ ವಸತಿ ನಿಲಯದಲ್ಲಿ ಅಧ್ಯಯನ ನಡೆಸುತ್ತಿದ್ದ ಇಬ್ಬರು ಅಪ್ರಾಪ್ತ ಬಾಲಕಿಯರು ಮೈಸೂರಿನ ಒಡನಾಡಿ ಸಂಸ್ಥೆಯ ಮೂಲಕ ಶ್ರೀಗಳ ವಿರುದ್ಧ ತಮಗೆ ಲೈಂಗಿಕ ಕಿರುಕುಳವನ್ನು ನೀಡುತ್ತಿದ್ದಾರೆ ಎಂದು ದೂರಿದ್ದರು.
ಮೈಸೂರಿನ ನಜರಬಾದ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದಾಖಲಾಗಿದ್ದ ಪ್ರಕರಣವನ್ನು ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿತ್ತು. ಚಿತ್ರದುರ್ಗ ಡಿವೈಎಸ್ಪಿ ಅನಿಲ್ ಕುಮಾರ್ ತನಿಖಾಧಿಕಾರಿಯಾಗಿದ್ದರು.