Advertisement
ಹಾಗಾಗಿ, ಶರಣರ ವಿರುದ್ಧ ಪ್ರಕರಣದ ಹಿಂದೆ ಸಾಕಷ್ಟು ಪೂರ್ವನಿಯೋಜಿತ ಪಿತೂರಿ ಇದೆ ಎಂದು ಮುರುಘಾ ಶರಣರ ಪರ ವಕೀಲರು ಹೈಕೋರ್ಟ್ ನಲ್ಲಿ ವಾದ ಮಂಡಿಸಿದ್ದಾರೆ.
Related Articles
Advertisement
ಸಂತ್ರಸ್ತ ಬಾಲಕಿಯರು ಮಠದ ಆವರಣದಲ್ಲಿನ ಹಾಸ್ಟೆಲ್‌ನಲ್ಲಿ ಇದ್ದರಾದರೂ ಅದಕ್ಕೆ ಸೂಕ್ತ ಮಹಿಳಾ ವಾರ್ಡನ್ ಇದ್ದರು. ಸ್ವಾಮೀಜಿ ಹದಿನೈದು ದಿನಕ್ಕೋ ಅಥವಾ ತಿಂಗಳಿಗೆ ಒಮ್ಮೆಯೋ ಬಾಲಕಿಯರಿಗೆ ಇಂಗ್ಲಿಷ್ ಮತ್ತು ಸಂಸ್ಕೃತದ ತರಗತಿಗಳನ್ನು ತೆಗೆದುಕೊಳ್ಳುತ್ತಿದ್ದರು. ಆಗಾಗ್ಗೆ ಮಕ್ಕಳಿಗೆ ಚಾಕೊಲೆಟ…, ಮೂಸಂಬಿ ಮತ್ತು ದ್ರಾಕ್ಷಿಹಣ್ಣು ಕೊಟ್ಟು ತಮ್ಮ ಪ್ರೇಮ ಮೆರೆಯುತ್ತಿದ್ದರು. ಎಲ್ಲ ಮಕ್ಕಳೂ ಅವರನ್ನು ಅಪ್ಪಾಜಿ ಎಂದೇ ಕರೆಯುತ್ತಿದ್ದರು.
ಇಬ್ಬರೂ ಬಾಲಕಿಯರು ಚಿತ್ರದುರ್ಗದಿಂದ 2022ರ ಜುಲೈ 24ರಂದು ಕೆಎಸ್‌ಆರ್‌ಟಿಸಿ ಬಸ್ ಹತ್ತಿ ಬೆಂಗಳೂರಿಗೆ ಬಂದು ಕಾಟನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪೊಲೀಸರ ಎದುರು ನಮಗೆ ಅನ್ಯಾಯವಾಗಿದೆ ಎಂದು ಹೇಳಿಕೊಂಡರು. ಮರುದಿನವೇ ಬಸವರಾಜನ್ ಹಾಗೂ ಅವರ ಪತ್ನಿ ಬೆಂಗಳೂರಿಗೆ ಬಂದು ಮಕ್ಕಳನ್ನು ತಮ್ಮೊಟ್ಟಿಗೆ ಕರೆದೊಯ್ದರು. ಬಾಲಕಿಯರಿಗೆ ನ್ಯಾಯ ಕೊಡಿಸುವುದಾಗಿ ಹೇಳಿದರು. ಆದರೆ, ಏನು ಅನ್ಯಾಯವಾಗಿದೆ ಎಂದು ಹೇಳಿಲ್ಲ.
ಒಂದು ತಿಂಗಳ ನಂತರ ಮೈಸೂರಿನ ಒಡನಾಡಿ ಸಂಸ್ಥೆಯ ಆಶ್ರಯದಲ್ಲಿ ಮಕ್ಕಳಿಂದ ದೂರು ದಾಖಲಿಸಿದರು. ಆದರೆ, ವೈದ್ಯಕೀಯ ಪರೀಕ್ಷೆಯಲ್ಲಿ ಮಕ್ಕಳ ಮೇಲೆ ಉದ್ರೇಕಿತ ಲೈಂಗಿಕ ದೌರ್ಜನ್ಯ ನಡೆದಿಲ್ಲ ಎಂಬುದು ಸಾಬೀತಾಗಿದೆ. ಈ ಮಕ್ಕಳೇನೂ ಅಶಿಕ್ಷಿತರಲ್ಲ. ಮುರುಘಾಮಠ ಹಾಗೂ ಶಿಕ್ಷಣ ಸಂಸ್ಥೆಗಳಿಗೆ ಮಸಿ ಬಳಿಯಲೆಂದೇ ಇಂತಹ ಸುಳ್ಳು ಪ್ರಕರಣವನ್ನು ಸ್ವಾಮೀಜಿ ವಿರುದ್ಧ ಹೆಣೆಯಲಾಗಿದೆ. ಪೋಕ್ಸೋ, ಎಸ್ಸಿ-ಎಸ್ಟಿ ದೌರ್ಜನ್ಯ ತಡೆ, ಧಾರ್ಮಿಕ ಸಂಸ್ಥೆಗಳ ದುರುಪಯೋಗ ತಡೆ, ಬಾಲನ್ಯಾಯ ಅಪರಾಧಗಳಡಿ ಗುರುತರ ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ನಾಗೇಶ್ ವಿವರಿಸಿದರು.