ಮಂಡ್ಯ: ಅಲ್ಲಾಹು ಅಕ್ಬರ್ ಎಂದು ಕೂಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿದ್ದ ಮುಸ್ಕಾನ್ ಕುಟುಂಬ ಪೊಲೀಸರಿಗೆ ಯಾವುದೇ ಮಾಹಿತಿ ನೀಡದೆ ವಿದೇಶಕ್ಕೆ ತೆರಳಿರುವ ಕುರಿತು ತನಿಖೆ ನಡೆಸುವಂತೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರಿಗೆ ದೂರು ನೀಡಲಾಗಿದೆ.
ಹಿಂದೂಪರ ಸಂಘಟನೆಯ ಕಾರ್ಯಕರ್ತರಾದ ಮಂಡ್ಯದ ಮರಿಗೌಡ ಮತ್ತು ಧನಿ ಗೌಡ, ಉಮ್ರಾಕ್ಕಾಗಿ ಸೌದಿ ಅರೇಬಿಯಾಕ್ಕೆ ತೆರಳಿರುವ ಮುಸ್ಕಾನ್ ಖಾನ್ ಮತ್ತು ಅವರ ಕುಟುಂಬದ ಕುರಿತು ತನಿಖೆ ಮಾಡುವಂತೆ ದೂರು ನೀಡಿದ್ದಾರೆ.
ಇದನ್ನೂ ಓದಿ : ಅಲ್ಪಸಂಖ್ಯಾತರ ಮೇಲೆ ದಬ್ಬಾಳಿಕೆ, ಗಾಂಧಿ ಕೊಂದವರ ವೈಭವೀಕರಣ; ಬಿಜೆಪಿ ವಿರುದ್ಧ ಸೋನಿಯಾ ಟೀಕೆ
ನಗರದ ಪಿಇಎಸ್ ಕಾಲೇಜಿನಲ್ಲಿ ಹಿಜಾಬ್ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದವರ ವಿರುದ್ಧ ಅಲ್ಲಾಹು ಅಕ್ಬರ್ ಎಂದು ಕೂಗುವ ಮೂಲಕ ಮುಸ್ಕಾನ್ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿದ್ದರು.ಆಕೆಗೆ ಮುಸ್ಲಿಂ ಸಂಘಟನೆಗಳಿಂದ ಭಾರಿ ಪ್ರಮಾಣದಲ್ಲಿ ಬೆಂಬಲ ಮತ್ತು ಹಣಕಾಸಿನ ನೆರವು ಹರಿದು ಬಂದಿತ್ತು.
Related Articles
ಮೆಕ್ಕಾಗೆ ಧಾರ್ಮಿಕ ಪ್ರವಾಸಕ್ಕಾಗಿ ತೆರಳಲು ಕಳೆದ ಏ.25ರಂದೇ ಸೌದಿಗೆ ತೆರಳಿದ್ದಾರೆ ಎಂದು ತಿಳಿದು ಬಂದಿದೆ.