Advertisement

ಮುಸ್ಲಿಂ ಸೆಂಟ್ರಲ್‌ ಕಮಿಟಿ ನೇತೃತ್ವದಲ್ಲಿ ಇಂದು ಬೃಹತ್‌ ಸಮಾವೇಶ

10:07 AM Jan 15, 2020 | sudhir |

ಮಂಗಳೂರು: ಕೇಂದ್ರ ಸರಕಾರವು ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ದಕ್ಷಿಣಕನ್ನಡ ಮತ್ತು ಉಡುಪಿ ಜಿಲ್ಲಾ ಮುಸ್ಲಿಂ ಸೆಂಟ್ರಲ್‌ ಕಮಿಟಿಯ ನೇತೃತ್ವದಲ್ಲಿ ವಿವಿಧ ಸಮಾನ ಮನಸ್ಕ ಸಂಘಟನೆಗಳ ಸಹಯೋಗದೊಂದಿಗೆ ಬುಧವಾರ ಮಧ್ಯಾಹ್ನ 2.30ಕ್ಕೆ ನಗರದ ಅಡ್ಯಾರ್‌ ಕಣ್ಣೂರು ರಾಷ್ಟ್ರೀಯ ಹೆದ್ದಾರಿ ಬಳಿಯ ಶಹಾ ಗಾರ್ಡನ್‌ ಮೈದಾನದಲ್ಲಿ ಸಮಾವೇಶ ಆಯೋಜಿಸಲಾಗಿದ್ದು, ಸುಮಾರು ಒಂದು ಲಕ್ಷಕ್ಕಿಂತ ಅಧಿಕ ಜನರು ಭಾಗವಹಿಸುವ ನಿರೀಕ್ಷೆಯಿದೆ.

Advertisement

ಮುಸ್ಲಿಂ ಸೆಂಟ್ರಲ್‌ ಕಮಿಟಿ ಅಧ್ಯಕ್ಷ ಹಾಜಿ ಕೆ.ಎಸ್‌. ಮುಹಮ್ಮದ್‌ ಮಸೂದ್‌ ಅಧ್ಯಕ್ಷತೆಯಲ್ಲಿ ಸಮಾವೇಶ ನಡೆಯಲಿದ್ದು, “ನಾವು ಭಾರತೀಯರು ತಂಡ’ದ ವಿಶ್ರಾಂತ ಐಎಎಸ್‌ ಅಧಿಕಾರಿಗಳಾದ ಹರ್ಷ್‌ ಮಂದರ್‌ ಹಾಗೂ ಕಣ್ಣನ್‌ ಗೋಪಿನಾಥನ್‌, ವಿಶ್ರಾಂತ ನ್ಯಾಯಮೂರ್ತಿ ಗೋಪಾಲಗೌಡ, ಮಾನವ ಹಕ್ಕುಗಳ ಹೋರಾಟಗಾರ ಶಿವಸುಂದರ್‌, ನ್ಯಾಯವಾದಿ ಸುಧೀರ್‌ ಕುಮಾರ್‌ ಮುಖ್ಯ ಭಾಷಣಕಾರರಾಗಿ ಭಾಗವಹಿಸಲಿದ್ದಾರೆ.

ದ.ಕ. ಜಿಲ್ಲಾ ಖಾಝಿ ಅಲ್‌ಹಾಜ್‌ ತ್ವಾಖಾ ಅಹ್ಮದ್‌ ಮುಸ್ಲಿಯಾರ್‌, ಉಡುಪಿ ಜಿಲ್ಲಾ ಖಾಝಿ ಅಲ್‌ಹಾಜ್‌ ಬೇಕಲ ಇಬ್ರಾಹಿಂ ಮುಸ್ಲಿಯಾರ್‌, ಉಳ್ಳಾಲ ಖಾಝಿ ಸೆಯ್ಯದ್‌ ಪಝಲ್‌ ಕೋಯಮ್ಮ ತಂಗಳ್‌, ವಕ್ಫ್ ಸಲಹಾ ಸಮಿತಿ ಅಧ್ಯಕ್ಷ ಯು.ಕೆ. ಮೋನು, ಮೈಸೂರು ಹುರಿಲಿಂಗ ಪೆದ್ದಿಮಠದ ಶ್ರೀ ಜ್ಞಾನಪ್ರಕಾಶ ಸ್ವಾಮೀಜಿ, ಮಂಗಳೂರು ಬಿಷಪ್‌ ಡಾ| ಪೀಟರ್‌ ಪಾವ್‌É ಸಲ್ಡಾನ್ಹಾ, ಪ್ರಮುಖರಾದ ಪಾವ್‌É ರೂಫಿ ಡಿ ಕಾಸ್ತಾ, ಯು.ಟಿ. ಖಾದರ್‌, ಬಿ.ಎಂ. ಫಾರೂಕ್‌, ಬಿ.ಎ. ಮೊದಿನ್‌ ಬಾವಾ, ಡಾ| ಅಬ್ದುಲ್‌ ರಶೀದ್‌ ಝೈನಿ, ಯು.ಕೆ. ಅಬ್ದುಲ್‌ ಅಝೀಝ್ ದಾರಿಮಿ, ಮುಹಮ್ಮದ್‌ ಕುಂಞಿ, ಮುಹಮ್ಮದ್‌ ಶಾಕಿಬ್‌, ಎಂ.ಜಿ. ಮುಹಮ್ಮದ್‌, ರಫೀವುದ್ದೀನ್‌ ಕುದ್ರೋಳಿ, ಬಿ.ಕೆ. ಇಮಿ¤ಯಾಝ್ ಮುಂತಾದ ಗಣ್ಯರು ಭಾಗವಹಿಸಲಿದ್ದಾರೆ ಎಂದು ಕೆ.ಎಸ್‌. ಮುಹಮ್ಮದ್‌ ಮಸೂದ್‌ ತಿಳಿಸಿದ್ದಾರೆ.

ಕಾಂಗ್ರೆಸ್‌ ಬೆಂಬಲ
ಮುಸ್ಲಿಂ ಸೆಂಟ್ರಲ್‌ ಕಮಿಟಿ ನೇತೃತ್ವದಲ್ಲಿ ನಡೆಯುವ ಪ್ರತಿಭಟನೆಗೆ ದ.ಕ. ಜಿಲ್ಲಾ ಕಾಂಗ್ರೆಸ್‌ ಸಮಿತಿ ಬೆಂಬಲ ಘೋಷಿಸಿದೆ. ಪ್ರತಿಭಟನೆಯಲ್ಲಿ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷರು, ಸದಸ್ಯರು ಸೇರಿದಂತೆ ಕಾರ್ಪೊರೇಟರ್‌ಗಳು, ಜಿಲ್ಲಾ, ತಾಲೂಕು ಮತ್ತು ಗ್ರಾ.ಪಂ. ಸದಸ್ಯರು, ಪಕ್ಷದ ಮುಖಂಡರು, ಪದಾಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ಜಿಲ್ಲಾಧ್ಯಕ್ಷ ಕೆ. ಹರೀಶ್‌ ಕುಮಾರ್‌ ತಿಳಿಸಿದ್ದಾರೆ.

ರಾಷ್ಟ್ರಧ್ವಜಕ್ಕೆ ಮಾತ್ರ ಅವಕಾಶ; ಶಾಂತಿ ಸಂಯಮಕ್ಕೆ ಕರೆ
ಒಂದು ಕೈಯಲ್ಲಿ ರಾಷ್ಟ್ರಧ್ವಜ, ಮತ್ತೂಂದರಲ್ಲಿ ಸಂವಿಧಾನ, ಮನದಲ್ಲಿ ಅಹಿಂಸೆ, ಬಾಯಲ್ಲಿ ಜನಗಣ ಮನ ಇದು ಸಮಾವೇಶದ ಧ್ಯೇಯವಾಕ್ಯ. ಸಮಾವೇಶದಲ್ಲಿ ಭಾಗವಹಿಸುವವರು ರಾಷ್ಟ್ರಧ್ವಜ ಮತ್ತು ಮುಸ್ಲಿಮ್‌ ಸೆಂಟ್ರಲ್‌ ಕಮಿಟಿ ಸಿದ್ಧಪಡಿಸಿರುವ ಪ್ಲಕಾರ್ಡ್‌, ಘೋಷಣೆಗಳಿಗೆ ಮಾತ್ರ ಅವಕಾಶವಿದೆ. ಯಾವುದೇ ಪಕ್ಷ, ಸಂಘಟನೆಯ ಧ್ವಜ, ಘೋಷಣೆಗಳಿಗೆ ಅವಕಾಶವಿರುವುದಿಲ್ಲ. ಸಮಾವೇಶದಲ್ಲಿ ಭಾಗವಹಿಸುವವರು ಶಾಂತಿ, ಸಂಯಮ ಪಾಲಿಸಬೇಕು ಮತ್ತು ಸಾರ್ವಜನಿಕರಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಮಹಿಳೆಯರು ಮತ್ತು ಮಕ್ಕಳು ಸಮಾವೇಶದಲ್ಲಿ ಭಾಗವಹಿಸುವ ಆವಶ್ಯಕತೆಯಿಲ್ಲ ಎಂದು ಕೆ.ಎಸ್‌. ಮುಹಮ್ಮದ್‌ ಮಸೂದ್‌ ತಿಳಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next