Advertisement

Ram temple; ಪ್ರಾಣ ಪ್ರತಿಷ್ಠೆ ಸಮಾರಂಭದಲ್ಲಿ ಭಾಗಿಯಾದ ಪ್ರಮುಖ ಮೌಲ್ವಿ ವಿರುದ್ಧ ಫತ್ವಾ

10:15 PM Jan 29, 2024 | Team Udayavani |

ಅಯೋಧ್ಯೆ: ಜನವರಿ 22 ರಂದು ಅಯೋಧ್ಯೆಯ ರಾಮ ಮಂದಿರ ‘ಪ್ರಾಣ ಪ್ರತಿಷ್ಠಾ’ ಸಮಾರಂಭದಲ್ಲಿ ಪಾಲ್ಗೊಂಡಿದ್ದ ಪ್ರಮುಖ ಮುಸ್ಲಿಂ ಧರ್ಮಗುರುವೊಬ್ಬರ ವಿರುದ್ಧ ‘ಫತ್ವಾ’ ಹೊರಡಿಸಲಾಗಿದೆ.

Advertisement

ಆಲ್ ಇಂಡಿಯಾ ಇಮಾಮ್ ಆರ್ಗನೈಸೇಶನ್‌ನ ಮುಖ್ಯ ಇಮಾಮ್ ಡಾ. ಇಮಾಮ್ ಉಮರ್ ಅಹ್ಮದ್ ಇಲ್ಯಾಸಿ ಅವರು ತನ್ನ ವಿರುದ್ಧ ‘ಫತ್ವಾ’ ಹೊರಡಿಸಿರುವುದನ್ನು ಖಚಿತಪಡಿಸಿದ್ದಾರೆ. “ಮುಖ್ಯ ಇಮಾಮ್ ಆಗಿ, ನಾನು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರದಿಂದ ಆಹ್ವಾನವನ್ನು ಸ್ವೀಕರಿಸಿದ್ದೇನೆ. ನಾನು ಎರಡು ದಿನ ಆಲೋಚಿಸಿ ನಂತರ ದೇಶಕ್ಕಾಗಿ ಸೌಹಾರ್ದತೆಗಾಗಿ ಅಯೋಧ್ಯೆಗೆ ಹೋಗಲು ನಿರ್ಧರಿಸಿದೆ ಎಂದು ಎಎನ್‌ಐಗೆ ಪ್ರತಿಕ್ರಿಯಿಸಿದ್ದಾರೆ.

“ನಿನ್ನೆ ಫತ್ವಾ ಹೊರಡಿಸಲಾಗಿದೆ, ಆದರೆ ಜನವರಿ 22 ರ ಸಂಜೆಯಿಂದ ನನಗೆ ಬೆದರಿಕೆ ಕರೆಗಳು ಬರುತ್ತಿವೆ … ನಾನು ಕೆಲವು ಕರೆಗಳನ್ನು ರೆಕಾರ್ಡ್ ಮಾಡಿದ್ದೇನೆ, ಅದರಲ್ಲಿ ಕರೆ ಮಾಡಿದವರು ನನಗೆ ಜೀವ ಬೆದರಿಕೆ ಹಾಕಿದ್ದಾರೆ. ನನ್ನನ್ನು ಪ್ರೀತಿಸುವವರು, ರಾಷ್ಟ್ರವನ್ನು ಪ್ರೀತಿಸುವವರು ನನ್ನನ್ನು ಬೆಂಬಲಿಸುತ್ತಾರೆ. ಸಮಾರಂಭದಲ್ಲಿ ಭಾಗವಹಿಸಿದ್ದಕ್ಕಾಗಿ ನನ್ನನ್ನು ದ್ವೇಷಿಸುವವರು ಬಹುಶಃ ಪಾಕಿಸ್ಥಾನಕ್ಕೆ ಹೋಗಬೇಕು. ನಾನು ಪ್ರೀತಿಯ ಸಂದೇಶವನ್ನು ನೀಡಿದ್ದೇನೆ, ನಾನು ಯಾವುದೇ ಅಪರಾಧ ಮಾಡಿಲ್ಲ. ನಾನು ಕ್ಷಮೆಯಾಚಿಸುವುದಿಲ್ಲ ಅಥವಾ ರಾಜೀನಾಮೆ ನೀಡುವುದಿಲ್ಲ, ಅವರು ಏನು ಬೇಕಾದರೂ ಮಾಡಬಹುದು”ಎಂದು ಇಲ್ಯಾಸಿ ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next