Advertisement

ಮುಸ್ಲಿಂ ಸಮಾಜ ಶೈಕ್ಷಣಿಕ ಪ್ರಗತಿ ಸಾಧಿಸಲಿ: ರಾಜಾ ವೆಂಕಟಪ್ಪ

03:32 PM Nov 11, 2018 | Team Udayavani |

ಮಾನ್ವಿ: ಮುಸ್ಲಿಂ ಸಮಾಜ ಶಿಕ್ಷಣಕ್ಕೆ ಆದ್ಯತೆ ನೀಡುವ ಮೂಲಕ ಶೈಕ್ಷಣಿಕ ರಾಜಕೀಯ, ಸಾಮಾಜಿಕ ಮತ್ತು ಆರ್ಥಿಕವಾಗಿ ಪ್ರಗತಿ ಸಾಧಿಸಬೇಕಿದೆ ಎಂದು ಶಾಸಕ ರಾಜಾ ವೆಂಕಟಪ್ಪ ನಾಯಕ ಹೇಳಿದರು.

Advertisement

ಪಟ್ಟಣದ ಎಪಿಎಂಸಿ ಕಲ್ಯಾಣ ಮಂಟಪದಲ್ಲಿ ತಾಲೂಕು ಆಡಳಿತದಿಂದ ಹಮ್ಮಿಕೊಡಿದ್ದ ಹಜರತ್‌ ಟಿಪ್ಪು ಸುಲ್ತಾನ್‌ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಟಿಪ್ಪು ಮಹಾನ್‌ ಸೈನಿಕನಾಗಿದ್ದನು. ಮೈಸೂರು ಸಾಮ್ರಾಜ್ಯದ ಉಳಿವಿಗಾಗಿ ತನ್ನ ಜೀವನವನ್ನು ಮುಡಿಪಾಗಿಟ್ಟು ಬ್ರಿಟಿಷರ ವಿರುದ್ಧ ವೀರಾವೇಶದಿಂದ ಹೋರಾಡಿದ. ಇವರ ಆದರ್ಶಗಳ ಪಾಲನೆಯಾಗಬೇಕು ಎಂದರು.

ಮಾನ್ವಿ ತಾಲೂಕು ಸೌಹಾರ್ದತೆಗೆ ಹೆಸರಾಗಿದೆ. ಅನೇಕ ವರ್ಷಗಳಿಂದ ಇಲ್ಲಿ ವಿವಿಧ ಧರ್ಮ, ಜಾತಿಯ ಜನರು ತುಂಬಾ
ಅನ್ಯೋನ್ಯವಾಗಿ ವಾಸಿಸುತ್ತಿದ್ದೇವೆ. ಇದು ಹೀಗೇ ಮುಂದುವರಿಯಬೇಕು. ಹಣ ಮತ್ತು ಅಧಿಕಾರ ಶಾಶ್ವತವಲ್ಲ. ಮಾನವೀಯತೆ ತಳಹದಿಯ ಮೇಲೆ ನಾವೆಲ್ಲ ಒಂದಾಗಿ ಬದುಕೋಣ ಎಂದ ಅವರು, ಮುಸ್ಲಿಂ ಸಮುದಾಯದ ಅಭಿವೃದ್ಧಿಗೆ ಸಹಕಾರ ನೀಡುವುದಾಗಿ ಹೇಳಿದರು.

ಮುಸ್ಲಿಂ ಸಮುದಾಯದ ಅಭಿವೃದ್ಧಿಯಾಗಬೇಕಾದರೆ ಯುವಕರು, ಮಕ್ಕಳು ಸರಕಾರದ ಯೋಜನೆಗಳನ್ನು
ಬಳಸಿಕೊಂಡು ಉತ್ತಮ ಶಿಕ್ಷಣ ಪಡೆಯಬೇಕು. ಅಲ್ಪಸಂಖ್ಯಾತರ ಯೋಜನೆಗಳ ಸದುಪಯೋಗ ಮಾಡಿಕೊಳ್ಳಬೇಕು ಎಂದರು.

ಸೈಯ್ಯದ್‌ ಹುಸೇನ್‌ ಉಪನ್ಯಾಸ ನೀಡಿದರು. ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಗಣ್ಯರನ್ನು ಹಾಗೂ ಎಸ್‌ಎಸ್‌ಎಲ್‌ಸಿಯಲ್ಲಿ ಅಧಿಕ ಅಂಕ ಗಳಿಸಿದ ಮುಸ್ಲಿಂ ಸಮುದಾಯದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

Advertisement

ಮೆರವಣಿಗೆ: ಕಾರ್ಯಕ್ರಮಕ್ಕೂ ಮುನ್ನ ಪಟ್ಟಣದ ಟಿಪ್ಪು ಸುಲ್ತಾನ್‌ ವೃತ್ತದಿಂದ ತಹಶೀಲ್ದಾರ್‌ ಕಚೇರಿ ಮಾರ್ಗವಾಗಿ ಎಪಿಎಂಸಿ ಕಲ್ಯಾಣ ಮಂಟಪದವರೆಗೆ ಮೆರವಣಿಗೆ ಮಾಡಲಾಯಿತು.

ಜಿಪಂ ಸದಸ್ಯ ಗಂಗಣ್ಣ ನಾಯಕ, ತಹಶೀಲ್ದಾರ್‌ ಅಮರೇಶ ಬಿರಾದಾರ, ಪಿಕಾರ್ಡ್‌ ಬ್ಯಾಂಕ್‌ ಅಧ್ಯಕ್ಷ ಅಬೀಬ್‌ ಖಾದ್ರಿ,
ಪುರಸಭೆ ಮುಖ್ಯಾಧಿಕಾರಿ ವಿಜಯಲಕ್ಷ್ಮೀ, ಸಿಪಿಐ ಚಂದ್ರಶೇಖರ, ಪಿಎಸ್‌ಐ ರಂಗಪ್ಪ ದೊಡ್ಮನಿ, ಎಪಿಎಂಸಿ ಅಧ್ಯಕ್ಷ ಅಯ್ಯಣ್ಣ ನಾಯಕ, ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟೇಶ ಗುಡಿಹಾಳ ಇತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next