ಬೆಂಗಳೂರು: ಬೆಂಗಳೂರಿನಲ್ಲಿ ರಾಮನವಮಿ ದಿನ ಜೈ ಶ್ರೀರಾಮ್ ಘೋಷಣೆಗೆ ಅಡ್ಡಿಪಡಿಸಿ ಬೆದರಿಕೆ ಹಾಕಿದ ಮುಸ್ಲಿಂ ಮೂಲಭೂತವಾದಿಗಳ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಿ ಕಠಿನ ಕ್ರಮ ವಹಿಸಬೇಕು. ಇಲ್ಲವಾದರೆ, ಕಾಂಗ್ರೆಸ್ ಸರಕಾರದ ವಿರುದ್ಧ ತೀವ್ರ ಪ್ರತಿಭಟನೆ ನಡೆಸಲಾಗುವುದು ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ ಎಚ್ಚರಿಕೆ ನೀಡಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು, ಪಾಕಿಸ್ಥಾನ ಬೆಂಬಲಿಗರು, ಟಿಪ್ಪು ಸಿದ್ಧಾಂತವಾದಿಗಳು ಹೆಚ್ಚಾಗಿದ್ದಾರೆ. ಭಯೋತ್ಪಾದನೆ ಹಾಗೂ ಬಾಂಬ್ ಸ್ಫೋಟದಂತಹ ಘಟನೆಗಳು ನಡೆಯುತ್ತಿವೆ ಎಂದರು.
ಹಿರಿಯ ನಾಯಕ ಲಕ್ಷ್ಮಣ ಸವದಿ ಭಾರತಮಾತೆಗೆ ಜೈ ಎನ್ನಲು ಅನುಮತಿ ಕೇಳುತ್ತಾರೆ. ಡಿ.ಕೆ.ಸುರೇಶ್ ಮನೆಯಲ್ಲಿ ರಾಮನ ಪೂಜೆ ಮಾಡುವುದಿಲ್ಲ ಎನ್ನುತ್ತಾರೆ. ಅವರು ಕಲ್ಲು ಬಂಡೆಯನ್ನೇ ಪೂಜೆ ಮಾಡಲು ಇಟ್ಟುಕೊಳ್ಳಬಹುದು. ರಾಮ ಇಲ್ಲದೆ ಹನುಮನಿಲ್ಲ, ಹನುಮ ಇಲ್ಲದೆ ರಾಮನಿಲ್ಲ ಎಂದರು.
ಹಿಂದೂಗಳಿಗೆ ಬಹಿರಂಗವಾಗಿ ಬೆದರಿಕೆ:
ಹಿಂದೂಗಳು ಕರ್ನಾಟಕದಲ್ಲಿ ಭಯದಿಂದ ಬದುಕುವ ವಾತಾವರಣ ಸೃಷ್ಟಿಯಾಗಿದೆ. ಚಿಕ್ಕಪೇಟೆಯಲ್ಲಿ ಅಂಗಡಿ ಮಾಲಕರೊಬ್ಬರು ಹನುಮಾನ್ ಚಾಲೀಸಾ ಹಾಕಿದ್ದಕ್ಕೆ ಮುಸ್ಲಿಮರು ಥಳಿಸಿದ್ದಾರೆ. ಕಾಂಗ್ರೆಸ್ ಸರಕಾರ ಮೂಲಭೂತವಾದಿಗಳ ಪರ ಇರುವುದರಿಂದಲೇ ಹಿಂದೂಗಳನ್ನು ಬಹಿರಂಗವಾಗಿ ಬೆದರಿಸಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇಸ್ಲಾಮಿಕ್ ಮೂಲಭೂತವಾದಿಗಳ ಕೈಗೆ ರಾಜ್ಯ ಧಾರೆ:
ಇಡೀ ದೇಶದಲ್ಲಿ ಶ್ರೀ ರಾಮನವಮಿ ಆಚರಣೆ ಮಾಡುತ್ತಿರುವ ಸಂದರ್ಭದಲ್ಲಿ ಜೈ ಶ್ರೀರಾಮ್ ಹೇಳಬಾರದು, ಅÇÉಾಹು ಅಕºರ್ ಎನ್ನಬೇಕು ಎಂದು ಮುಸ್ಲಿಂ ಮೂಲಭೂತವಾದಿಗಳು ಹಿಂದೂಗಳಿಗೆ ಬೆಂಗಳೂರಿನಲ್ಲಿ ಕೊಲೆ ಬೆದರಿಕೆ ಹಾಕಿ¨ªಾರೆ. ಸಿಎಂ ಸಿದ್ದರಾಮಯ್ಯ ರಾಜ್ಯವನ್ನು ಇಸ್ಲಾಮಿಕ್ ಮೂಲಭೂತವಾದಿಗಳ ಕೈಗೆ ಧಾರೆ ಎರೆದುಕೊಟ್ಟಿ¨ªಾರೆ ಎಂದು ಆರ್.ಅಶೋಕ್ ದೂರಿದರು.