Advertisement

High Court: ಮುಸ್ಲಿಂ ವಿವಾಹ ನೋಂದಣಿ ಅಧಿಕಾರ ವಕ್ಫ್ ಮಂಡಳಿಗೆ: ಕೋರ್ಟ್‌ ನೋಟಿಸ್‌

12:47 AM Oct 17, 2024 | Team Udayavani |

ಬೆಂಗಳೂರು: ಮುಸ್ಲಿಂ ಸಮುದಾಯದ ವಿವಾಹಿತ ದಂಪತಿಗೆ ವಿವಾಹ ನೋಂದಣಿ ಪ್ರಮಾಣಪತ್ರ ನೀಡುವ ಅಧಿಕಾರವನ್ನು ವಕ್ಫ್ ಮಂಡಳಿಗೆ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿ ಸಂಬಂಧ ರಾಜ್ಯ ಸರಕಾರಕ್ಕೆ ಹೈಕೋರ್ಟ್‌ ನೋಟಿಸ್‌ ಜಾರಿಗೊಳಿಸಿದೆ.

Advertisement

ಈ ವಿಚಾರವಾಗಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ಆಲಿಸಿದ ನ್ಯಾಯಪೀಠ, ರಾಜ್ಯ ಸರಕಾರ, ಅಲ್ಪಸಂಖ್ಯಾಕರ ಕಲ್ಯಾಣ ಇಲಾಖೆಯ ಅಧೀನ ಕಾರ್ಯದರ್ಶಿ, ರಾಜ್ಯ ವಕ್ಫ್ ಮಂಡಳಿಗೆ ನೋಟಿಸ್‌ ಜಾರಿಗೊಳಿಸಿ, ಅರ್ಜಿಗೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸಲು ಪ್ರತಿವಾದಿಗಳಿಗೆ ಸೂಚಿಸಿ ವಿಚಾರಣೆಯನ್ನು ನವೆಂಬರ್‌ 12ಕ್ಕೆ ಮುಂದೂಡಿತು.

Advertisement

Udayavani is now on Telegram. Click here to join our channel and stay updated with the latest news.

Next