Advertisement

Muslim quota cancellation: ವಿಚಾರಣೆ 25ಕ್ಕೆ ಮುಂದೂಡಿದ Supreme Court

07:58 PM Apr 18, 2023 | Team Udayavani |

ನವದೆಹಲಿ: ಕರ್ನಾಟಕದಲ್ಲಿ ಮುಸ್ಲಿಮರಿಗಿದ್ದ ಶೇ.4ರ ಮೀಸಲಾತಿ ರದ್ದು ಮಾಡಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳಿಗೆ ಸಂಬಂಧಿಸಿ ಪ್ರತಿಕ್ರಿಯೆ ನೀಡಲು ರಾಜ್ಯ ಸರ್ಕಾರ ಕಾಲಾವಕಾಶ ಕೇಳಿದೆ. ಈ ಹಿನ್ನೆಲೆಯಲ್ಲಿ ಮಂಗಳವಾರ ಸುಪ್ರೀಂಕೋರ್ಟ್‌ ವಿಚಾರಣೆಯನ್ನು ಏ.25ಕ್ಕೆ ಮುಂದೂಡಿದೆ.

Advertisement

ಲಿಂಗಾಯತರು ಮತ್ತು ಒಕ್ಕಲಿಗರಿಗೆ ಶೈಕ್ಷಣಿಕ ಸಂಸ್ಥೆಗಳು ಮತ್ತು ಸರ್ಕಾರಿ ಉದ್ಯೋಗದಲ್ಲಿ ನೀಡಲಾಗಿರುವ ಮೀಸಲಾತಿ ಸೌಲಭ್ಯವನ್ನು ಏ.25ರವರೆಗೆ ತಡೆ ಹಿಡಿಯುತ್ತೇವೆಂದು ಕರ್ನಾಟಕ ಸರ್ಕಾರ ಏ.13ರಂದೇ ಸ್ಪಷ್ಟಪಡಿಸಿದೆ. ಹೀಗಾಗಿ, ಮುಂದಿನ ವಿಚಾರಣೆಯನ್ನು ಏ.25ರಂದು ನಿಗದಿಪಡಿಸುತ್ತಿದ್ದೇವೆ ಎಂದು ನ್ಯಾ.ಕೆ.ಎಂ.ಜೋಸೆಫ್ ಮತ್ತು ನ್ಯಾ.ಬಿ.ವಿ. ನಾಗರತ್ನ ಅವರಿದ್ದ ನ್ಯಾಯಪೀಠ ಹೇಳಿದೆ.

ಸರ್ಕಾರದ ಪರವಾಗಿ ಕೋರ್ಟ್‌ಗೆ ಹಾಜರಾಗಿದ್ದ ಸಾಲಿಸಿಟರ್‌ ಜನರಲ್‌ ತುಷಾರ್‌ ಮೆಹ್ತಾ, ಸಲಿಂಗ ವಿವಾಹಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಸಂವಿಧಾನ ಪೀಠದ ಮುಂದೆ ವಾದ ಮಂಡಿಸಬೇಕಾಗಿರುವ ಕಾರಣ, ಮೀಸಲಾತಿ ಪ್ರಕರಣದಲ್ಲಿ ಪ್ರತಿಕ್ರಿಯೆ ಒದಗಿಸಲು ಒಂದು ವಾರ ಕಾಲಾವಕಾಶ ನೀಡಿ ಎಂದು ಕೋರಿದರು. ಇದಕ್ಕೆ ಅರ್ಜಿದಾರರ ಪರ ವಕೀಲ ಕಪಿಲ್‌ ಸಿಬಲ್‌ ಅವರೂ ಆಕ್ಷೇಪ ವ್ಯಕ್ತಪಡಿಸಲಿಲ್ಲ. ಹೀಗಾಗಿ, ನ್ಯಾಯಪೀಠವು ವಿಚಾರಣೆಯನ್ನು ಮುಂದೂಡಿತು.

Advertisement

Udayavani is now on Telegram. Click here to join our channel and stay updated with the latest news.

Next