Advertisement
ಕೋಲಾರದ ಜೂನಿಯರ್ ಕಾಲೇಜು ಮೈದಾನದಲ್ಲಿ ಆ.28 ರಂದು ನಡೆಯಲಿರುವ ಜೆಡಿಎಸ್ ಪಕ್ಷದ ಅಲ್ಪಸಂಖ್ಯಾತರ ಸಮಾವೇಶದ ಕುರಿತಾಗಿ ನಗರದ ಹೊರವಲಯದ ಕಲ್ಯಾಣ ಮಂಟಪದಲ್ಲಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸಮಾವೇಶವು ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ಆ.28 ರಂದು ನಡೆಯಲಿದ್ದು, 10 ಸಾವಿರಕ್ಕೂ ಹೆಚ್ಚು ಮುಸ್ಲಿಮರು ಸೇರಲಿದ್ದಾರೆ. ಅಂದು ಮಾಜಿ ಮುಖ್ಯಮಂತ್ರಿ ಎಚ್ .ಡಿ.ಕುಮಾರಸ್ವಾಮಿ, ಪಕ್ಷದ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಸೇರಿ ರಾಜ್ಯದ ಹಲವಾರು ನಾಯಕರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.
Related Articles
Advertisement
ಎಚ್‌ಡಿಕೆ ಮತ್ತೆ ಸಿಎಂ: ಜೆಡಿಎಸ್ ತಾಲೂಕು ಅಧ್ಯಕ್ಷೆ ಕುರ್ಕಿ ರಾಜರಾಜೇಶ್ವರಿ ಮಾತನಾಡಿ, ಮುಂಬರುವ ದಿನಗಳಲ್ಲಿ ರಾಜ್ಯದ ಜನತೆ ರಾಷ್ಟ್ರೀಯ ಪಕ್ಷಗಳನ್ನು ತಿರಸ್ಕರಿಸಿ ಪ್ರಾದೇಶಿಕ ಪಕ್ಷವನ್ನು ಬೆಂಬಲಿಸುವುದು ಶತಸಿದ್ಧ. ಎಚ್ .ಡಿ.ಕುಮಾರಸ್ವಾಮಿ ಅವರು ಮತ್ತೆ ರಾಜ್ಯದ ಮುಖ್ಯಮಂತ್ರಿ ಆಗುವುದು ಖಚಿತ. ಅಲ್ಪಸಂಖ್ಯಾತರನ್ನು ತನ್ನೊಟ್ಟಿಗೆ ಕೊಂಡೊಯ್ಯುವ ಏಕೈಕ ಪಕ್ಷವೆಂದರೆ ಅದು ಜೆಡಿಎಸ್ ಮಾತ್ರ ಎಂದು ಹೇಳಿದರು.
ವಿಧಾನ ಪರಿಷತ್ ಸದಸ್ಯ ಇಂಚರ ಗೋವಿಂದರಾಜು, ಮಾಲೂರಿನ ಚಂದ್ರಶೇಖರ್‌ಗೌಡ, ಸಿ.ಎಂ.ಆರ್. ಶ್ರೀನಾಥ್, ಬಂಗಾರಪೇಟೆ ಕ್ಷೇತ್ರದ ಮಲ್ಲೇಶ್‌ಬಾಬು, ಕೆಜಿಎಫ್ ದಯಾನಂದ್ ಮಾತನಾಡಿ, ಮುಂಬರುವ ವಿಧಾನಸಭಾ ಚುನಾವಣೆ ನಮ್ಮ ಅಸ್ತಿತ್ವದ ಅಳಿವು ಉಳಿವಿನ ಪ್ರಶ್ನೆಯಾಗಿದ್ದು, ಈ ಬಾರಿ ನಾವು ಶತಾಯಗತಾಯ ಕೋಲಾರ ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳಲ್ಲಿ ಗೆಲುವು ಸಾಧಿ ಸುವ ಮೂಲಕ ಎಚ್.ಡಿ. ಕುಮಾರಸ್ವಾಮಿ ಅವರ ಕೈ ಬಲಪಡಿಸಬೇಕು ಎಂದರು.
ಜೆಡಿಎಸ್ ಜಿಲ್ಲಾ ಕಾರ್ಯಾಧ್ಯಕ್ಷ ಬಣಕನಹಳ್ಳಿ ನಟರಾಜ್, ಅಂಜುಮನ್ ಸಂಸ್ಥೆ ಅಧ್ಯಕ್ಷ ಸೈಯದ್ ಜಮೀರ್ ಪಾಷಾ, ನಗರಸಭಾ ಸದಸ್ಯ ರಾಕೇಶ್, ಮುಖಂಡರಾದ ವಡಗೂರು ರಾಮು, ಜನಪನಹಳ್ಳಿ ಆನಂದ್, ದಿಂಬ ನಾಗರಾಜಗೌಡ, ನಾರಾಯಣಸ್ವಾಮಿ ಮುಂತಾದವರು ಇದ್ದರು.