Advertisement

ಜೆಡಿಎಸ್‌ ಪಕ್ಷಕ್ಕೆ ಮುಸ್ಲಿಮರ ಬೆಂಬಲ; ಮಾಜಿ ಶಾಸಕ ಜಿ.ಕೆ ವೆಂಕಟಶಿವಾರೆಡ್ಡಿ

06:19 PM Aug 19, 2022 | Team Udayavani |

ಕೋಲಾರ: ರಾಜ್ಯದಲ್ಲಿ ಮುಸ್ಲಿಂ ಸಮುದಾಯದ ರಕ್ಷಣೆ ಪ್ರಾದೇಶಿಕ ಪಕ್ಷ ಜೆಡಿಎಸ್‌ನಿಂದ ಮಾತ್ರ ಸಾಧ್ಯವಿದೆ. ರಾಜ್ಯಾದ್ಯಂತ ಅಭೂತಪೂರ್ವವಾಗಿ ಮುಸ್ಲಿಮರು ಪಕ್ಷ ಬೆಂಬಲಿಸುತ್ತಿದ್ದಾರೆ ಎಂದು ಜಿಲ್ಲಾ ಜೆಡಿಎಸ್‌ ಅಧ್ಯಕ್ಷ ಹಾಗೂ ಮಾಜಿ ಶಾಸಕ ಜಿ.ಕೆ ವೆಂಕಟಶಿವಾರೆಡ್ಡಿ ಹೇಳಿದರು.

Advertisement

ಕೋಲಾರದ ಜೂನಿಯರ್‌ ಕಾಲೇಜು ಮೈದಾನದಲ್ಲಿ ಆ.28 ರಂದು ನಡೆಯಲಿರುವ ಜೆಡಿಎಸ್‌ ಪಕ್ಷದ ಅಲ್ಪಸಂಖ್ಯಾತರ ಸಮಾವೇಶದ ಕುರಿತಾಗಿ ನಗರದ ಹೊರವಲಯದ ಕಲ್ಯಾಣ ಮಂಟಪದಲ್ಲಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಮುಂದಿನ ವಿಧಾನಸಭಾ ಚುನಾವಣೆಯ ದಿಕ್ಸೂಚಿಯಾಗಿ ಈ ಸಮಾವೇಶವನ್ನು ಸಂಘಟಿಸಬೇಕಾಗಿದೆ. ಸಮಾವೇಶದಲ್ಲಿ ಯಾವುದೇ ಅಡೆತಡೆಗಳು ಆಗದಂತೆ ನಮ್ಮ ಪಕ್ಷದ ನಾಯಕರು ನೋಡಿಕೊಳ್ಳಬೇಕು ಎಂದರು.

10 ಸಾವಿರಕ್ಕೂ ಹೆಚ್ಚು ಮಂದಿ ಭಾಗಿ:
ಸಮಾವೇಶವು ನಗರದ ಜೂನಿಯರ್‌ ಕಾಲೇಜು ಮೈದಾನದಲ್ಲಿ ಆ.28 ರಂದು ನಡೆಯಲಿದ್ದು, 10 ಸಾವಿರಕ್ಕೂ ಹೆಚ್ಚು ಮುಸ್ಲಿಮರು ಸೇರಲಿದ್ದಾರೆ. ಅಂದು ಮಾಜಿ ಮುಖ್ಯಮಂತ್ರಿ ಎಚ್‌ .ಡಿ.ಕುಮಾರಸ್ವಾಮಿ, ಪಕ್ಷದ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಸೇರಿ ರಾಜ್ಯದ ಹಲವಾರು ನಾಯಕರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.

ಒಗ್ಗೂಟ್ಟಿನಿಂದ ಅಧಿಕಾರಕ್ಕೆ ತನ್ನಿ: ಜೆಡಿಎಸ್‌ ರಾಜ್ಯ ಕೋರ್‌ ಕಮಿಟಿ ಸದಸ್ಯ ಸಮೃದ್ಧಿ ಮಂಜುನಾಥ್‌ ಮಾತನಾಡಿ, ಕೆಲವು ಚುನಾವಣೆಯಲ್ಲಿ ಅಲ್ಪಸಂಖ್ಯಾತರು ಮೋಸ ಮಾಡಿದ್ದಾರೆ ಅಂತ ಹೇಳಿಕೊಳ್ಳುವುದಲ್ಲ. ನಾವು ಅಲ್ಪಸಂಖ್ಯಾತರಿಗೆ ಏನು ಮಾಡಿದ್ದೇವೆ ಎಂಬುದು ಮುಖ್ಯ. ಹಿಂದೆ ಆಗಿರೋದು ಬಿಟ್ಟು ಮುಂದೆ ಆಗೋದು ನೋಡೋಣ. ನಮ್ಮಲ್ಲಿನ ತಪ್ಪುಗಳನ್ನು ಸರಿಪಡಿಸಿಕೊಂಡು ಒಗ್ಗಟ್ಟಿನಿಂದ ಪಕ್ಷವನ್ನು ಸಂಘಟಿಸಿ ಅಧಿಕಾರಕ್ಕೆ ತರಬೇಕಾಗಿದೆ ಎಂದು ಹೇಳಿದರು.

Advertisement

ಎಚ್‌ಡಿಕೆ ಮತ್ತೆ ಸಿಎಂ: ಜೆಡಿಎಸ್‌ ತಾಲೂಕು ಅಧ್ಯಕ್ಷೆ ಕುರ್ಕಿ ರಾಜರಾಜೇಶ್ವರಿ ಮಾತನಾಡಿ, ಮುಂಬರುವ ದಿನಗಳಲ್ಲಿ ರಾಜ್ಯದ ಜನತೆ ರಾಷ್ಟ್ರೀಯ ಪಕ್ಷಗಳನ್ನು ತಿರಸ್ಕರಿಸಿ ಪ್ರಾದೇಶಿಕ ಪಕ್ಷವನ್ನು ಬೆಂಬಲಿಸುವುದು ಶತಸಿದ್ಧ. ಎಚ್‌ .ಡಿ.ಕುಮಾರಸ್ವಾಮಿ ಅವರು ಮತ್ತೆ ರಾಜ್ಯದ ಮುಖ್ಯಮಂತ್ರಿ ಆಗುವುದು ಖಚಿತ. ಅಲ್ಪಸಂಖ್ಯಾತರನ್ನು ತನ್ನೊಟ್ಟಿಗೆ ಕೊಂಡೊಯ್ಯುವ ಏಕೈಕ ಪಕ್ಷವೆಂದರೆ ಅದು ಜೆಡಿಎಸ್‌ ಮಾತ್ರ ಎಂದು ಹೇಳಿದರು.

ವಿಧಾನ ಪರಿಷತ್‌ ಸದಸ್ಯ ಇಂಚರ ಗೋವಿಂದರಾಜು, ಮಾಲೂರಿನ ಚಂದ್ರಶೇಖರ್‌ಗೌಡ, ಸಿ.ಎಂ.ಆರ್‌. ಶ್ರೀನಾಥ್‌, ಬಂಗಾರಪೇಟೆ ಕ್ಷೇತ್ರದ ಮಲ್ಲೇಶ್‌ಬಾಬು, ಕೆಜಿಎಫ್‌ ದಯಾನಂದ್‌ ಮಾತನಾಡಿ, ಮುಂಬರುವ ವಿಧಾನಸಭಾ ಚುನಾವಣೆ ನಮ್ಮ ಅಸ್ತಿತ್ವದ ಅಳಿವು ಉಳಿವಿನ ಪ್ರಶ್ನೆಯಾಗಿದ್ದು, ಈ ಬಾರಿ ನಾವು ಶತಾಯಗತಾಯ ಕೋಲಾರ ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳಲ್ಲಿ ಗೆಲುವು ಸಾಧಿ ಸುವ ಮೂಲಕ ಎಚ್‌.ಡಿ. ಕುಮಾರಸ್ವಾಮಿ ಅವರ ಕೈ ಬಲಪಡಿಸಬೇಕು ಎಂದರು.

ಜೆಡಿಎಸ್‌ ಜಿಲ್ಲಾ ಕಾರ್ಯಾಧ್ಯಕ್ಷ ಬಣಕನಹಳ್ಳಿ ನಟರಾಜ್‌, ಅಂಜುಮನ್‌ ಸಂಸ್ಥೆ ಅಧ್ಯಕ್ಷ ಸೈಯದ್‌ ಜಮೀರ್‌ ಪಾಷಾ, ನಗರಸಭಾ ಸದಸ್ಯ ರಾಕೇಶ್‌, ಮುಖಂಡರಾದ ವಡಗೂರು ರಾಮು, ಜನಪನಹಳ್ಳಿ ಆನಂದ್‌, ದಿಂಬ ನಾಗರಾಜಗೌಡ, ನಾರಾಯಣಸ್ವಾಮಿ ಮುಂತಾದವರು ಇದ್ದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next