Advertisement

ಅತ್ಯಾಚಾರ,ಡಕಾಯಿತಿ, ಲೂಟಿಯಲ್ಲಿ ಮುಸ್ಲಿಮರೇ ನಂಬರ್ 1: ಮುಸ್ಲಿಂ ಮುಖಂಡನ ವಿವಾದಾತ್ಮಕ ಹೇಳಿಕೆ

10:06 AM Oct 28, 2023 | Team Udayavani |

ಗುವಾಹಟಿ: ಇತ್ತೀಚಿನ ದಿನಗಳಲ್ಲಿ ಕೆಲವೊಂದು ರಾಜಕಾರಣಿಗಳು ವಿವಾದಾತ್ಮಕ ಹೇಳಿಕೆಯಿಂದಲೇ ಜನಪ್ರಿಯತೆ ಗಳಿಸುತ್ತಿದ್ದಾರೆ ಅದ್ರ ಮುಂದುವರೆದ ಭಾಗವಾಗಿ ಆಲ್ ಇಂಡಿಯಾ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಎಐಯುಡಿಎಫ್) ಮುಖ್ಯಸ್ಥ ಬದ್ರುದ್ದೀನ್ ಅಜ್ಮಲ್, ಮುಸ್ಲಿಮರಲ್ಲಿ ಅಪರಾಧ ಪ್ರಮಾಣಗಳು ಹೆಚ್ಚಿವೆ ಎಂದು ಹೇಳುವ ಮೂಲಕ ವಿವಾದವನ್ನು ಹುಟ್ಟುಹಾಕಿದ್ದಾರೆ.

Advertisement

ಅಜ್ಮಲ್ ಇತ್ತೀಚೆಗೆ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ, “ನಾವು (ಮುಸ್ಲಿಮರು) ದರೋಡೆ, ಡಕಾಯಿತಿ, ಅತ್ಯಾಚಾರ, ಲೂಟಿಯಂತಹ ಎಲ್ಲಾ ಅಪರಾಧಗಳಲ್ಲಿ ನಂ.1 ಆಗಿದ್ದೇವೆ. ಜೈಲಿಗೆ ಹೋಗುವುದರಲ್ಲಿಯೂ ನಾವೇ ನಂ.1” ಎಂದು ಹೇಳಿದ್ದಾರೆ.

ಅಲ್ಲದೆ ಅಜ್ಮಲ್ ತಾನು ನೀಡಿರುವ ಹೇಳಿಕೆಯನ್ನು ಒಪ್ಪಿಕೊಂಡಿದ್ದು ನನ್ನ ಹೇಳಿಕೆಯಿಂದ ಯಾವುದೇ ತಪ್ಪಿಲ್ಲ ಎಂದು ಹೇಳಿಕೊಂಡಿದ್ದಾರೆ. ಶಿಕ್ಷಣ ಕೊರತೆಯಿಂದ ಜನ ಈ ರೀತಿಯ ಕೃತ್ಯಗಳಿಗೆ ಮುಂದಾಗುತ್ತಿದ್ದಾರೆ ಎಂದು ಹೇಳಿದ್ದಾರೆ.

ಅಜ್ಮಲ್ ಹೇಳಿಕೆಗೆ ಖಂಡನೆ
ಇತ್ತ ಅಜ್ಮಲ್ ವಿವಾದಾತ್ಮಕ ಹೇಳಿಕೆ ನೀಡಿರುವ ಬೆನ್ನಲ್ಲೇ ಭಾರಿ ಆಕ್ರೋಶ ವ್ಯಕ್ತವಾಗಿದ್ದು ಮುಸ್ಲಿಂ ಸಂಘಟನೆಗಳ ನಾಯಕರು, ಧಾರ್ಮಿಕ ಗುರುಗಳೇ ಬದ್ರುದ್ದೀನ್‌ ಅಜ್ಮಲ್‌ ಅವರ ಹೇಳಿಕೆಯನ್ನು ಖಂಡಿಸಿದ್ದಾರೆ.

ಇದನ್ನೂ ಓದಿ: Karnataka Politics: ಸರ್ಕಾರ ಬೀಳಿಸಲು ಬಿಜೆಪಿ ನಡೆಸುತ್ತಿರುವ ಷಡ್ಯಂತ್ರ ಫಲಿಸಲ್ಲ: ಡಿಕೆಶಿ

Advertisement
Advertisement

Udayavani is now on Telegram. Click here to join our channel and stay updated with the latest news.

Next