Advertisement

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

11:20 PM Apr 23, 2024 | Team Udayavani |

ಹೊಸದಿಲ್ಲಿ: ಮುಸ್ಲಿಂ ಸಮುದಾಯವನ್ನು ಹಿಂದುಳಿದ ವರ್ಗಕ್ಕೆ ಸೇರಿದವರು ಎಂದು ವರ್ಗೀಕರಿಸಿರುವ ಕರ್ನಾಟಕ ಸರಕಾರದ ಕ್ರಮಕ್ಕೆ ರಾಷ್ಟ್ರೀಯ ಹಿಂದುಳಿದ ವರ್ಗಗಳ ಆಯೋಗ (ಎನ್‌ಸಿಬಿಸಿ) ಆಕ್ಷೇಪ ವ್ಯಕ್ತಪಡಿಸಿದೆ.

Advertisement

ಇಂಥ ವರ್ಗೀಕರಣವು ಸಾಮಾಜಿಕ ನ್ಯಾಯದ ಸ್ಪಷ್ಟ ಉಲ್ಲಂಘನೆಯಾಗುತ್ತದೆ ಎಂದು ಆಯೋಗ ಅಭಿಪ್ರಾಯಪಟ್ಟಿದೆ. ಇಂಥ ಕ್ರಮ ಸಾಮಾಜಿಕ ನ್ಯಾಯ ನೀಡುವ ಸಂವಿಧಾನದ ಆಶಯದ ಸ್ಪಷ್ಟ ಉಲ್ಲಂಘನೆ ಎಂದೂ ಹೇಳಿದೆ.

ಕರ್ನಾಟಕ ಹಿಂದುಳಿದ ವರ್ಗಗಳ ಅಭಿವೃದ್ಧಿ ಇಲಾಖೆ ಸಲ್ಲಿಸಿದ ಮಾಹಿತಿಯ ಪ್ರಕಾರ ಮುಸ್ಲಿಂ ಸಮುದಾಯದ ಎಲ್ಲ ಉಪ ಪಂಗಡಗಳನ್ನು ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದ ವರ್ಗಕ್ಕೆ ಸೇರ್ಪಡೆ ಮಾಡಲಾಗಿದೆ. ಅಂದರೆ ಅವರನ್ನು ರಾಜ್ಯ ಹಿಂದುಳಿದ ವರ್ಗಗಳ 2ಬಿ ಗುಂಪಿಗೆ ಸೇರ್ಪಡೆ ಮಾಡಲಾಗಿದೆ. ರಾಷ್ಟ್ರೀಯ ಹಿಂದುಳಿದ ವರ್ಗಗಳ ಆಯೋಗ ಕಳೆದ ವರ್ಷ ಕರ್ನಾಟಕಕ್ಕೆ ಭೇಟಿ ನೀಡಿದ್ದ ವೇಳೆ ಮೀಸಲು ಪಟ್ಟಿಯನ್ನು ಪರಿಶೀಲನೆ ನಡೆಸಿತ್ತು.

 

Advertisement

Udayavani is now on Telegram. Click here to join our channel and stay updated with the latest news.

Next