ನೀಡುವಂತೆ ರಾಜ್ಯ ಉಪ ಲೋಕಾಯುಕ್ತ ನ್ಯಾ| ಬಿ.ಎಸ್.ಪಾಟೀಲ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
Advertisement
ಸೋಮವಾರ ನಗರದ ಜಿಪಂ ಸಭಾಂಗಣದಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ಜರುಗಿದ ವಿವಿಧ ಇಲಾಖೆಗಳ ಬಾಕಿ ಪ್ರಕರಣಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು. ಶೌಚಾಲಯ ನಿರ್ಮಾಣದಲ್ಲಿ ಅನುದಾನ ದುರ್ಬಳಕೆಯನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಈ ಕುರಿತು ಸ್ವಯಂ ಪ್ರೇರಿತ ದೂರುದಾಖಲು ಮಾಡಿ, ಅನುದಾನ ದುರ್ಬಳಕೆ ಮಾಡಿದ ಸಿಬ್ಬಂದಿಯಿಂದ ಬಡ್ಡಿ ಸಮೇತ ಮರುಪಾವತಿಗೆ ಕ್ರಮ ಕೈಗೊಳ್ಳಬೇಕು. ಇದಕ್ಕಾಗಿ ಲೋಕಾಯುಕ್ತ ಅಧಿಕಾರಿ ಸೂಕ್ತ ಕ್ರಮಕ್ಕೆ ತಾಪಂ ಇಒಗಳಿಗೆ ಹೊಣೆ ನಿರ್ವಹಿಸಬೇಕು ಎಂದು ಸೂಚಿಸಿದರು.
Related Articles
Advertisement
ಜಿಲ್ಲೆಯಲ್ಲಿ ಬೃಹತ್-ಸಣ್ಣ ನೀರಾವರಿ ಯೋಜನೆಗಳು ವ್ಯಾಪ್ತಿಯಲ್ಲಿ ಗಣನೀಯ ಪ್ರಗತಿ ಸಾಧಿಸಿದ್ದು, ವಿವಿಧ ಕಾಲುವೆಗಳ ಮೂಲಕ ನೀರು ಹರಿದು ಕೆರೆಗಳಭರ್ತಿಯಾಗಿ ನೀರು ಪೋಲಾಗದಂತೆ ತಡೆಗಟ್ಟಲು ಈವರೆಗೆ ನಿರ್ಮಿಸಿದ ಬ್ಯಾರೇಜ್, ಚೆಕ್‌ಡ್ಯಾಮ್ ನಿರ್ಮಾಣ ವಿವರ ನೀಡುವಂತೆ ಸೂಚಿಸಿದ ಅವರು, ಈ ಕುರಿತು ಸೂಕ್ತ ಕ್ರಮ ಕೈಗೊಳ್ಳವಂತೆ ಸರ್ಕಾರಕ್ಕೆ ನಿರ್ದೇಶನ ನಿಡಿವುದಾಗಿಯೂ ಸೂಚಿಸಿದರು. ನೀರಾವರಿ ಯೋಜನೆಗಳ ವ್ಯಾಪ್ತಿಯಲ್ಲಿ ಕಾಲುವೆ ನಿರ್ಮಾಣ ಮತ್ತು ಇತರೆ ಕಾಮಗಾರಿಗಳಿಗೆ ಸ್ವಾಧೀನ ಪಡಿಸಿಕೊಂಡ ಭೂಮಿಗೆ ಸಂತ್ರಸ್ತರಿಗೆ ನಿಗದಿತ ಪರಿಹಾರ ನೀಡಿ, ಯೋಜನೆ ಜಾರಿಗೆ ತರುವಂತೆ ಅಧಿಕಾರಿಗಳಿಗೆ ಸೂಚಿಸಿದರು. ವಿಜಯಪುರ ಜಿಲ್ಲೆಯಲ್ಲಿ ಪ್ರವಾಹ ಸಂದರ್ಭದಲ್ಲಿ ಜಿಲ್ಲಾಡಳಿತ ಕೈಗೊಂಡ ಕ್ರಮಗಳ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿ, ಅದರಂತೆ ಕೋವಿಡ್ ಹಿನ್ನೆಲೆಯಲ್ಲಿ ಪರಿಣಾಮಕಾರಿಯಾಗಿ ಕ್ರಮಗಳನ್ನು ಕೈಗೊಂಡಿರುವುದಕ್ಕೆ ಹಾಗೂ ಕೋವಿಡ್-19 ಪಾಸಿಟಿವ್ ಪ್ರಮಾಣ ಕಡಿಮೆ ಮಾಡಿರುವುದಕ್ಕೆ ಜಿಲ್ಲಾಡಳಿತ
ಹಾಗೂ ಆರೋಗ್ಯ ಇಲಾಖೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಅವರು ಕೋವಿಡ್ ಎರಡನೇ ಅಲೆ ಬಗ್ಗೆ ಸೂಕ್ತ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಬೇಕು. ಸಾಮಾಜಿಕ ಅಂತರ, ಮಾಸ್ಕ್ ಧರಿಸುವ ಕುರಿತು ಆರೋಗ್ಯ ಕಾರ್ಯಕರ್ತರಿಂದ ಸೂಕ್ತ ಅರಿವು ಮೂಡಿಸಬೇಕು. ವಿವಿಧ ಗ್ರಾಮಗಳಲ್ಲಿ ಬಹಿರ್ದೆಸೆ ಪದ್ಧತಿಯಿಂದ ಹರಡುವ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು. ವಿಜಯಪುರ ನಗರದ ಸ್ವತ್ಛತೆ ಬಗ್ಗೆ ವಿಶೇಷ ಕ್ರಮ ಕೈಗೊಳ್ಳಬೇಕು. ಮಧ್ಯಪ್ರದೇಶದ ಇಂದೋರ್ ಮತ್ತು ಮೈಸೂರು ಮಾದರಿಯಲ್ಲಿ ಸಮಗ್ರ ಸ್ವತ್ಛತೆಗೆ ವಿಶೇಷ ಯೋಜನೆ ರೂಪಿಸಿ ವರದಿ ಸಲ್ಲಿಸುವಂತೆ ಸೂಚನೆ ನೀಡಿದರು. ಪೊಲೀಸ್ ಇಲಾಖೆ ವ್ಯಾಪ್ತಿಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದೆ, ಮಾನವ ಹಕ್ಕುಗಳ ಉಲ್ಲಂಘನೆಯಾಗದ ರೀತಿಯಲ್ಲಿ ಕ್ರಮಗಳನ್ನು ಕೈಗೊಳ್ಳಬೇಕು. ಅದರಂತೆ ವಿವಿಧ ಇಲಾಖೆಗಳ ವ್ಯಾಪ್ತಿಯಲ್ಲಿ ಸಾರ್ವಜನಿಕ ದೂರುಗಳಿಗೆ ಸ್ಪಂದಿಸದ, ಭ್ರಷ್ಟಾಚಾರದಲ್ಲಿ ತೊಡಗಿರುವಂತಹ ಅ ಧಿಕಾರಿ ಮತ್ತು ಸಿಬ್ಬಂದಿಗಳ ವಿರುದ್ಧ ಕರ್ನಾಟಕ ಲೋಕಾಯುಕ್ತ ಕಾಯ್ದೆಯಡಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಅವರು ಎಚ್ಚರಿಕೆ ನೀಡಿದರು. ವಿವಿಧ ವಸತಿ ಯೋಜನೆಗಳಡಿ ಅರ್ಹರಿಗೆ ಸೌಲಭ್ಯ ಕಲ್ಪಿಸಬೇಕು. ಅನರ್ಹರಿಗೆ ಈ ಸೌಲಭ್ಯ ದೊರೆಯಬಾರದು. ಅಧಿಕಾರಿಗಳು ಸಾಮಾಜಿಕ ಬದ್ಧತೆಯೊಂದಿಗೆ ಜನರಿಗಾಗಿ ಸೇವೆ ಕಲ್ಪಿಸಬೇಕು. ಕರ್ತವ್ಯದಲ್ಲಿ ಬದ್ಧತೆ ಮತ್ತು ತಕ್ಷಣ ಸ್ಪಂದಿಸಬೇಕು. ಮುಂಬರುವ ದಿನಗಳಲ್ಲಿ ಜಿಲ್ಲೆಯಲ್ಲಿ ಕೈಗೊಂಡ ಕ್ರಮಗಳ ಬಗ್ಗೆ ಗಂಭೀರವಾಗಿ ಪರಿಶೀಲಿಸುವ ಜೊತೆಗೆ ಹಾಗೂ ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವುದಾಗಿ ಅವರು ತಿಳಿಸಿದರು. ಸಭೆಯಲ್ಲಿ ಜಿಲ್ಲಾಧಿಕಾರಿ ಪಿ.ಸುನೀಲಕುಮಾರ, ಜಿಪಂ ಸಿಇಒ ಲಕ್ಷ್ಮೀಕಾಂತರೆಡ್ಡಿ, ಎಡಿಸಿ ಡಾ| ಔದ್ರಾಮ್, ಲೋಕಾಯುಕ್ತ ಪೊಲೀಸ್ ಅಧೀಕ್ಷಕಿ ಯಶೋಧಾ ಒಂಟಗೋಡಿ, ಎಎಸ್ಪಿ ರಾಮ ಅರಿಸಿದ್ದಿ ಇದ್ದರು.