ಮಂಗಳೂರು: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾರ್ಕಳ ಕ್ಷೇತ್ರದಲ್ಲಿ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ. ಹಿಂದೂ ಸಮಾಜದ ಶ್ರೇಯಸ್ಸಿಗಾಗಿ ಬಿಜೆಪಿಯು ಅಲ್ಲಿ ಅಭ್ಯರ್ಥಿ ಯನ್ನು ಕಣಕ್ಕಿಳಿಸದೆ ಮುತಾಲಿಕ್ ಅವರನ್ನು ಬೆಂಬಲಿಸಬೇಕು ಎಂದು ಶ್ರೀರಾಮಸೇನೆ ಆಗ್ರಹಿಸಿದೆ.
ಶ್ರೀರಾಮಸೇನೆ ರಾಜ್ಯ ಪ್ರಧಾನ ಕಾರ್ಯದರ್ಶಿ ಆನಂದ ಶೆಟ್ಟಿ ಅಡ್ಯಾರ್ ಪತ್ರಿಕಾಗೋಷ್ಠಿಯಲ್ಲಿ ಮಾತ ನಾಡಿ, ಮುತಾಲಿಕ್ 47 ವರ್ಷಗಳಿಂದ ಮನೆ, ಕುಟುಂಬವನ್ನು ತ್ಯಜಿಸಿ ದೇಶ, ಧರ್ಮಕ್ಕಾಗಿ ಹೋರಾಡುತ್ತಿದ್ದಾರೆ. ಈ ಹಿಂದೆ ಸಾಕಷ್ಟು ರಾಜಕೀಯ ಅವಕಾಶಗಳು ಇದ್ದಾಗಲೂ ತಿರಸ್ಕರಿಸಿ ಸಂಘಟನೆಯಲ್ಲಿ ತೊಡಗಿಸಿಕೊಂಡ ವರು ಅವರು ಎಂದರು.
ಜಿಲ್ಲಾಧ್ಯಕ್ಷ ಪ್ರದೀಪ್ ಮೂಡುಶೆಡ್ಡೆ, ಉಪಾಧ್ಯಕ್ಷ ಹರೀಶ್ ಬೊಕ್ಕಪಟ್ಣ, ಕಿಶೋರ್ ನೀರುಮಾರ್ಗ, ವೆಂಕಟೇಶ್ ಪಡಿಯಾರ್ ಉಪಸ್ಥಿತರಿದ್ದರು.