ನವದೆಹಲಿ/ಬೀಜಿಂಗ್: ಲಡಾಖ್ ನ ಗಾಲ್ವಾನ್ ಕಣಿವೆ ಪ್ರದೇಶದಲ್ಲಿ ನಡೆದ ಸಂಘರ್ಷ ವಿಚಾರಕ್ಕೆ ಸಂಬಂಧಿಸಿದಂತೆ ಉಭಯ ದೇಶಗಳ ನಡುವಿನ ಉದ್ವಿಗ್ನತೆ ಶಮನಗೊಳಿಸುವ ನಿಟ್ಟಿನಲ್ಲಿ ಭಾರತ ಮತ್ತು ಚೀನಾ ಸೇನಾಪಡೆಯ ಉನ್ನತ ಅಧಿಕಾರಿಗಳು ಒಮ್ಮತದ ನಿರ್ಧಾರಕ್ಕೆ ಬಂದಿರುವುದಾಗಿ ಸೇನಾ ಮೂಲಗಳು ತಿಳಿಸಿವೆ.
ಭಾರತ, ಚೀನಾ ಸೇನಾ ಉನ್ನತ ಕಮಾಂಡರ್ ಮಟ್ಟದಲ್ಲಿ ಸೌಹಾರ್ದಯುತ, ಪಾಸಿಟಿವ್ ಹಾಗೂ ರಚನಾತ್ಮಕ ನೆಲೆಯಲ್ಲಿ ಮಾತುಕತೆ ನಡೆದಿರುವುದಾಗಿ ವರದಿ ವಿವರಿಸಿದೆ.
ಪೂರ್ವ ಲಡಾಖ್ ನಲ್ಲಿ ಸಂಘರ್ಷಕ್ಕೊಳಗಾದ ಎಲ್ಲಾ ಪ್ರದೇಶಗಳ ಬಗ್ಗೆಯೂ ಸುದೀರ್ಘವಾಗಿ ಚರ್ಚೆ ನಡೆದಿದ್ದು, ಈ ಬಗ್ಗೆ ಉಭಯ ದೇಶಗಳು ಒಮ್ಮತದ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ ಇದ್ದಿರುವುದಾಗಿ ಮೂಲಗಳು ತಿಳಿಸಿವೆ.
ಗಡಿ ಉದ್ವಿಗ್ನತೆ ತಣ್ಣಗಾಗಿಸಲು ಎಲ್ಲಾ ರೀತಿಯ ಅಗತ್ಯ ಕ್ರಮವನ್ನು ಉಭಯ ದೇಶಗಳ ಮಾತುಕತೆಯಲ್ಲಿ ತೆಗೆದುಕೊಳ್ಳಲಾಗುತ್ತಿದೆ ಎಂದು ಚೀನಾ ವಿದೇಶಾಂಗ ಸಚಿವಾಲಯದ ವಕ್ತಾರ ಝಾವೋ ಲಿಜಿಯಾನ್ ತಿಳಿಸಿದ್ದಾರೆ.
ಜೂನ್ 15ರಂದು ಗಾಲ್ವಾನ್ ಕಣಿವೆ ಪ್ರದೇಶದಲ್ಲಿ ನಡೆದ ಘರ್ಷಣೆಯಲ್ಲಿ ಚೀನಾ ಸೈನಿಕರ ಕುತಂತ್ರದ ದಾಳಿಗೆ 20 ಮಂದಿ ಭಾರತೀಯ ಯೋಧರು ಹುತಾತ್ಮರಾಗಿದ್ದರು.