Advertisement
ಒಕ್ಕೂಟದ ರಾಜ್ಯಾಧ್ಯಕ್ಷ ಹಾಗೂ ಆರೋಗ್ಯ ಸಚಿವ ದಿನೇಶ್ ಗುಂಡೂ ರಾವ್ ಮತ್ತು ಒಕ್ಕೂಟದ ಅಧ್ಯಕ್ಷ ಪ್ರೊ| ಡಾ| ಕೆ.ಇ. ರಾಧಾಕೃಷ್ಣ ನೇತೃತ್ವದಲ್ಲಿ ಪದಾಧಿಕಾರಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮನವಿ ಸಲ್ಲಿಸಿದ್ದಾರೆ.ದೇವಸ್ಥಾನದ ಒಳಾಂಗಣ ನೌಕರರನ್ನು 65 ವರ್ಷಕ್ಕೆ ನಿವೃತ್ತಿಗೊಳಿಸುವ ನಿಯಮ ರೂಪಿಸಿದ್ದು ಅದನ್ನು ರದ್ದುಪಡಿಸಬೇಕೆಂದು ಕೋರಿದ್ದಾರೆ. ಜತೆಗೆ “ಎ’ ಹಾಗೂ “ಬಿ’ ವರ್ಗದ ಮುಜರಾಯಿ ದೇವಾಲಯಗಳಿಗೆ ಪ್ರಾಧಿಕಾರ ರಚನೆಯಾಗಿದ್ದು ಮತ್ತಷ್ಟು ಅಭಿವೃದ್ಧಿಗೆ ಒತ್ತು ನೀಡಬೇಕೆಂದು ಮನವಿ ಮಾಡಲಾಗಿದೆ.