Advertisement

ಸಕಲ ಸರ್ಕಾರಿ ಗೌರವಗಳೊಂದಿಗೆ ಎಂ.ವಿ. ರಾಜಶೇಖರನ್ ಅಂತ್ಯಕ್ರಿಯೆ

09:08 AM Apr 14, 2020 | keerthan |

ಬೆಂಗಳೂರು: ಕೆಲವು ಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಕೇಂದ್ರ ಸಚಿವ ಎಂ. ವಿ ರಾಜಶೇಖರನ್ ಅವರು ಸೋಮವಾರ ಬೆಳಿಗ್ಗೆ ನಿಧನರಾಗಿದ್ದಾರೆ. ಅವರ ನಿಧನಕ್ಕೆ ಸರ್ಕಾರದಿಂದ ಸಂತಾಪ ವ್ಯಕ್ತಪಡಿಸಿದ್ದು, ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನಡೆಸಲು ತೀರ್ಮಾನಿಸಿದೆ.

Advertisement

ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡು ಕಡಿಮೆ ಪೊಲೀಸರನ್ನು ನಿಯೋಜಿಸಿ ಅಂತ್ಯಕ್ರಿಯೆ ನಡೆಸಲು ತೀರ್ಮಾನ ಮಾಡಲಾಗಿದೆ.

ಮಾಜಿ ಮುಖ್ಯಮಂತ್ರಿ ಎಸ್. ನಿಜಲಿಂಗಪ್ಪ ಅವರ ಅಳಿಯನಾದ ರಾಜಶೇಖರನ್ ಅವರು ಡಾ.  ಮನಮೋಹನ್ ಸಿಂಗ್ ಸರ್ಕಾರದಲ್ಲಿ ಕೇಂದ್ರ ಯೋಜನೆ ಮತ್ತು ಅಂಕಿ ಅಂಶ ಖಾತೆಯ ರಾಜ್ಯ ಸಚಿವರಾಗಿ ಕರ್ತವ್ಯ ನಿರ್ವಹಿಸಿದ್ದರು.

ರಾಜಶೇಖರನ್ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸೇರಿದಂತೆ ರಾಜ್ಯ ಸಚಿವ ಸಂಪುಟದ ಸದಸ್ಯರು, ವಿರೋಧ ಪಕ್ಷಗಳ ಮುಖಂಡರು ಸಂತಾಪ ಸೂಚಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next