ಮುಂಬಯಿ: ಶಿವಸೇನೆ-ಬಿಜೆಪಿ ಮೈತ್ರಿಕೂಟವನ್ನು ಸೋಲಿಸಲು ಮಹಾ ವಿಕಾಸ್ ಅಘಾಡಿ (ಎಂವಿಎ) ಮಹಾರಾಷ್ಟ್ರ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಯಲ್ಲಿ ಒಟ್ಟಾಗಿ ಸ್ಪರ್ಧಿಸಲಿದೆ ಎಂದು ವಿಧಾನಸಭೆ ವಿಪಕ್ಷ ನಾಯಕ ಎನ್‌ಸಿಪಿಯ ಅಜಿತ್ ಪವಾರ್ ಹೇಳಿದ್ದಾರೆ.
ಪುಣೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂಬರುವ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಯಲ್ಲಿ ಒಟ್ಟಾಗಿ ಸ್ಪರ್ಧಿಸಲು ಮಹಾ ವಿಕಾಸ್ ಅಘಾಡಿ (ಎಂವಿಎ) ಯ ನಮ್ಮ ಉನ್ನತ ನಾಯಕರು ಮನಸ್ಸು ಮಾಡಿದ್ದಾರೆ. ನಮ್ಮ ಹಿರಿಯರನ್ನು ಅನುಸರಿಸಿ ನಾವು ಅದನ್ನು ಬೆಂಬಲಿಸುತ್ತೇವೆ. ಎಂವಿಎ ನಾಯಕರು ತಮ್ಮ ವೈಯಕ್ತಿಕ ಪಕ್ಷದ ಹಿತಾಸಕ್ತಿಗಳನ್ನು ಪರಿಗಣಿಸದೆ ಅರ್ಹತೆಯ ಆಧಾರದ ಮೇಲೆ ಚುನಾವಣೆಯಲ್ಲಿ ಸ್ಪರ್ಧಿಸಲು ಅಭ್ಯರ್ಥಿಯನ್ನು ಸಾಮೂಹಿಕವಾಗಿ ನಿರ್ಧರಿಸುತ್ತಾರೆ.
ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಮತ್ತು ಬಿಜೆಪಿ ಮೈತ್ರಿಯನ್ನು ಸೋಲಿಸಲು ಆಂತರಿಕ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಒಗ್ಗಟ್ಟಿನ ಶಕ್ತಿಯಾಗಿ ಚುನಾವಣೆಯನ್ನು ಎದುರಿಸಲಾಗುವುದು ಎಂದು ಹೇಳಿದರು.