ಮೈಸೂರು : ’12 ವರ್ಷಗಳ ಹಿಂದೆಯೇ ಹೇಳಿದ್ದೆ, ನನ್ನ ಡೆಡ್ ಬಾಡಿಯೂ ಬಿಜೆಪಿಗೆ ಹೋಗುವುದಿಲ್ಲ ಎಂದು. ಈಗಲೂ ಅದನ್ನೇ ಹೇಳುತ್ತೇನೆ, ಎಂದು ಮಾಜಿ ಸಚಿವ ಎಚ್.ಸಿ.ಮಹದೇವಪ್ಪ ಹೇಳಿಕೆ ನೀಡಿದ್ದಾರೆ.
ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ ‘ನಾನು ಬಿಜೆಪಿಗೆ ಹೋಗುತ್ತಿಲ್ಲ. ಕಾಂಗ್ರೆಸ್ ಬಿಟ್ಟು ಬಿಜೆಪಿಗೆ ಹೋದವರು ನನಗೆ ಅಪಖ್ಯಾತಿ ತರಲು ಪಿತೂರಿ ಮಾಡಿದ್ದಾರೆ’ ಎಂದರು.
ಇಲ್ಲಿ ಸೋತು ಅಲ್ಲಿಗೆ ಹೋಗುವುದು. ಅಲ್ಲಿ ಸೋತಾಗ ಇಲ್ಲಿಗೆ ಬರುವವ ನಾನಲ್ಲ. ನಾನು ಕಾಂಗ್ರೆಸ್ ಪಕ್ಷದ ತತ್ವ ಸಿದ್ಧಾಂತಕ್ಕೆ ಬದ್ಧನಾಗಿರುವವನು ಎಂದರು.
ಸಿದ್ದರಾಮಯ್ಯ ಅವರ ಪರಮಾಪ್ತರಾಗಿರುವ ಮಹದೇವಪ್ಪ ಅವರು ಬಿಜೆಪಿ ಸೇರುತ್ತಾರೆ ಎಂದು ಕಳೆದ ಕೆಲ ದಿನಗಳಿಂದ ಸುದ್ದಿಯಾಗಿತ್ತು.
ವಿಧಾನಸಭಾ ಚುನಾವಣೆಯಲ್ಲಿ ಮಹದೇವಪ್ಪ ಅವರು ಟಿ.ನರಸೀಪುರದಲ್ಲಿ ಜೆಡಿಎಸ್ ಅಭ್ಯರ್ಥಿ ಅಶ್ವಿನ್ ಕುಮಾರ್ ಎದುರು ಹೀನಾಯ ಸೋಲು ಅನುಭವಿಸಿದ್ದರು.