Advertisement
ತಾಲೂಕಿನ ಬೊಮ್ಮಲಾಪುರ ಗ್ರಾಮದಲ್ಲಿ ರೋಡ್ ಶೋ ನಡೆಸಿ ಮಾತನಾಡಿದ ಸಚಿವರು, ರಾಜ್ಯದಲ್ಲಿಯೇ ತಮ್ಮ ಕ್ಷೇತ್ರವನ್ನು ಮಾದರಿ ಯಾಗಿಸುವುದು ತನ್ನ ಪತಿ ಮಹದೇವಪ್ರಸಾದ್ ಕನಸಾಗಿತ್ತು. ದುರ್ದೈವದಿಂದ ಅವರು ತಮ್ಮನ್ನು ಅಗಲಿದ್ದಾರೆ. ಅವರ ಆಶೀರ್ವಾದದೊಂದಿಗೆ ತಾನು ಉಪಚುನಾವಣೆಯಲ್ಲಿ ಸ್ಪರ್ಧಿಸಿ 10 ಸಾವಿರ ಮತಗಳ ಅಂತರದಲ್ಲಿ ಗೆದ್ದು ಸಚಿವೆ ಯಾಗಿದ್ದೇನೆ ಎಂದು ಹೇಳಿದರು.
Related Articles
Advertisement
ತಾಲೂಕಿನ ಹರವೆ ಹೋಬಳಿ ವ್ಯಾಪ್ತಿಯ ಸಾಗಡೆ, ಬೆಟ್ಟದಪುರ, ಕುಲಗಾಣ, ಮೂಡ್ನಾಕೂಡು ಗ್ರಾಮಗಳಲ್ಲಿ ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಹಾಗೂ ಸಚಿವೆ ಡಾ.ಎಂ.ಸಿ. ಮೋಹನಕುಮಾರಿ ಪರ ಪಕ್ಷದ ಕಾರ್ಯಕರ್ತರು ಹಾಗೂ ಖಂಡರೊಂದಿಗೆ ಮನೆ ಮನೆಗೆ ತೆರಳಿ ಶನಿವಾರ ಮತಯಾಚನೆ ಮಾಡಿ ಅವರು ಮಾತನಾಡಿದರು.
ಸಾಗಡೆ ಗ್ರಾಮದಲ್ಲಿ ಪ್ರೌಢಶಾಲೆ ಆರಂಭ, ವಿಶೇಷ ಘಟಕ ಯೋಜನೆಯಡಿಯಲ್ಲಿ ಪರಿಶಿಷ್ಟ ಹಾಗೂ ವರ್ಗಗಳ ಕಾಲೋನಿಗಳಿಗೆ ಸಿಮೆಂಟ್ ರಸ್ತೆ, ಚರಂಡಿ ನಿರ್ಮಾಣ, ಸಾಗಡೆ ಗ್ರಾಮದ ಪರಿ ಶಿಷ್ಟ ಪಂಗಡದವರ ಕಾಲೋನಿಯಲ್ಲಿ ಸಿಮೆಂಟ್ ರಸ್ತೆ ನಿರ್ಮಾಣಕ್ಕಾಗಿ ಒಂದೂವರೆ ಕೋಟಿ ರೂ. ಅನುದಾನ ನೀಡಲಾಗಿದೆ. ಸಮುದಾಯ ಭವನಗಳ ನಿರ್ಮಾಣ, 2 ಕೋಟಿ ರೂ. ವೆಚ್ಚದಲ್ಲಿ ಕುಮಚಹಳ್ಳಿ ಕೆಂಗಾಕಿ ರಸ್ತೆಯ ಅಭಿವೃದ್ಧಿಗೆ ಭೂಮಿ ಪೂಜೆ ಮಾಡಿದ್ದು, ಹರವೆ ಭಾಗದ 5 ಪಂಚಾಯ್ತಿಗಳ ಅಭಿವೃದ್ಧಿಗೆ ಸಮಗ್ರ ಯೋಜನೆ ಜಾರಿ ಮಾಡಲಾಗಿದೆ. ಹೀಗಾಗಿ ಕ್ಷೇತ್ರದ ಮತದಾರರು ಕಾಂಗ್ರೆಸ್ ಬೆಂಬಲಿಸಬೇಕು ಎಂದು ಮನವಿ ಮಾಡಿದರು.
ಎಚ್.ಎಸ್.ಮಹದೇವ ಪ್ರಸಾದ್ ಜಿಲ್ಲಾ ಉಸ್ತುವಾರಿ ಸಚಿವರಾಗಿ, ಕ್ಷೇತ್ರವಲ್ಲದೇ ಜಿಲ್ಲೆಯ ಅಭಿವೃದ್ಧಿಗಾಗಿ ಅವಿರತವಾಗಿ ಶ್ರಮಿಸಿದರು. ಅವರ ಅವಧಿಯಲ್ಲಿ ಗುಂಡ್ಲುಪೇಟೆ ಕ್ಷೇತ್ರ ಮಾದರಿ ಕ್ಷೇತ್ರವಾಗಿ ಅಭಿವೃದ್ಧಿಯಾಯಿತು. ಬಹುಗ್ರಾಮ ಕುಡಿಯುವ ನೀರಿನ ಯೋಜನೆಯನ್ನು ಜಾರಿಗೊಳಿಸಿದರು. ಇದರಿಂದ ನೂರಾರು ಹಳ್ಳಿಗಳಿಗೆ ನದಿ ಮೂಲದಿಂದ ಕುಡಿಯುವ ನೀರಿನ ಸೌಲಭ್ಯ ದೊರಕಿದೆ. ಇದೆಲ್ಲಕ್ಕೂ ಕಾಂಗ್ರೆಸ್ ಸರ್ಕಾರದ ಕಾಳಜಿ ಕಾರಣ ಎಂದರು ನವೀನ್ ಹೇಳಿದರು.
ಕಾಂಗ್ರೆಸ್ ಸರ್ಕಾರ ಹಾಡಿಗಳಿಗೆಮೂಲ ಸೌಲಭ್ಯ ಕಲ್ಪಿಸಿದೆ ಗುಂಡ್ಲುಪೇಟೆ: ಕಾಂಗ್ರೆಸ್ ಸರ್ಕಾರ ತಾಲೂಕಿನ ಗಿರಿಜನ ಹಾಡಿಗಳಲ್ಲಿ ಉತ್ತಮ ರಸ್ತೆ ಮತ್ತು ಮೂಲಸೌಕರ್ಯ ಕಲ್ಪಿಸಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಸಚಿವೆ ಡಾ.ಎಂ.ಸಿ. ಮೋಹನಕುಮಾರಿ ಹೇಳಿದರು.
ತಾಲೂಕಿನ ಕಾಡಂಚಿನ ಬಂಡೀಪುರ, ಕಾರೇಮಾಳ, ಲೊಕ್ಕೆರೆ, ಚೆನ್ನಿಕಟ್ಟೆ, ಮಂಗಲ, ಜಕ್ಕಳ್ಳಿ, ಕಾರ್ರಾಗಿಹುಂಡಿ, ಕಣಿಯನಪುರ ಕಾಲೋನಿ, ಎಲ್ಚೆಟ್ಟಿ, ಬಾಚಹಳ್ಳಿ, ಅಂಕಹಳ್ಳಿ, ವಡೆಯನಪುರ ಗ್ರಾಮಗಳಲ್ಲಿ ಮತಯಾಚನೆ ಮಾಡಿ ಮಾತನಾಡಿದ ಅವರು, ತಮ್ಮ ಪತಿ ದಿ.ಎಚ್.ಎಸ್.ಮಹದೇವಪ್ರಸಾದ್ ಕಾಡಂಚಿನ ಗ್ರಾಮಗಳಿಗೂ ರಸ್ತೆ, ಕುಡಿವ ನೀರು ಸೇರಿದಂತೆ ಮೂಲಸೌಕರ್ಯ ಕಲ್ಪಿಸಿದ್ದರು. ಅಲ್ಲದೆ, ಮಕ್ಕಳಿಗೆ ಶಿಕ್ಷಣ ನೀಡಲು ಎಲ್ಲಾ ಗ್ರಾಮಗಳಿಗೂ ಪ್ರಾಥಮಿಕ ಶಾಲೆ ತೆರೆದು ಪ್ರೌಢಶಿಕ್ಷಣಕ್ಕೆ ವಸತಿ ಶಾಲೆ ಪ್ರಾರಂಭಿಸಿದ್ದರು.
ಉಪಚುನಾವಣೆಯಲ್ಲಿ ತಾವು ಜಯಗಳಿಸಿದ ನಂತರ ಬಹುಗ್ರಾಮ ಕುಡಿಯುವ ನೀರು ಯೋಜನೆ ಅನುಷ್ಠಾನಗೊಳಿಸಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಿದ್ದೇನೆ ಎಂದು ಹೇಳಿದರು.
ಅದೇ ರೀತಿಯಾಗಿ ತಾನೂ ಕ್ಷೇತ್ರ ವ್ಯಾಪ್ತಿಯಲ್ಲಿ ಹಾಡಿಗಳಲ್ಲಿ ಉತ್ತಮ ಕಾಂಕ್ರೀಟ್ ರಸ್ತೆ, ಕುಡಿಯುವ ನೀರು ಮತ್ತಿತರೆ ಮೂಲ ಸೌಕರ್ಯವನ್ನು ಕಲ್ಪಿಸಲು ಶ್ರಮಿಸಿದ್ದೇನೆ. ಅಭಿವೃದ್ಧಿಗೆ ಸ್ಪಂದಿಸಿರುವ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಗಿರಿಜನರ ಹಿತಕಾಪಾಡುತ್ತಿದೆ. ಆದ್ದರಿಂದ ಇನ್ನೂ ಹೆಚ್ಚಿನ ಅಭಿವೃದ್ಧಿಗೆ ಕಾಂಗ್ರೆಸ್‌ಗೆ ಮತನೀಡಿ ಎಂದು ಮತದಾರರಲ್ಲಿ ಮನವಿ ಮಾಡಿದರು.
ಕಾಡಾ ಅಧ್ಯಕ್ಷ ನಂಜಪ್ಪ, ಜಿಪಂ ಸದಸ್ಯ ಬೊಮ್ಮಯ್ಯ, ತಾಪಂ ಅಧ್ಯಕ್ಷ ಜಗದೀಶಮೂರ್ತಿ, ಮಂಗಲ ಗ್ರಾಪಂ ಅಧ್ಯಕ್ಷಲಿಂಗರಾಜು, ಚಾಮುಲ್ ನಿರ್ದೇಶಕ ನಂಜುಂಡಪ್ರಸಾದ್ ಇತರರು ಉಪಸ್ಥಿತರಿದ್ದರು.