Advertisement

“ಕೈ”ಗೆ ಟರ್ನಿಂಗ್ ಪಾಯಿಂಟ್…ರಾಜಕೀಯ ನಿವೃತ್ತಿಯ ಸುಳಿವು ನೀಡಿದ ಸೋನಿಯಾ ಗಾಂಧಿ

01:56 PM Feb 25, 2023 | Team Udayavani |

ನವದೆಹಲಿ: “ಭಾರತ್ ಜೋಡೋ ಯಾತ್ರೆಯೊಂದಿಗೆ ನನ್ನ ಇನ್ನಿಂಗ್ಸ್ ಮುಕ್ತಾಯವಾಗಬಹುದು ಎಂದು ಕಾಂಗ್ರೆಸ್ ಸಂಸದೆ, ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಹೇಳುವ ಮೂಲಕ ಪರೋಕ್ಷವಾಗಿ ರಾಜಕೀಯ ನಿವೃತ್ತಿ ಬಗ್ಗೆ ಸುಳಿವು ನೀಡಿದ್ದಾರೆಂದು ಮಾಧ್ಯಮಗಳು ವಿಶ್ಲೇಷಿಸುತ್ತಿವೆ.

Advertisement

ಇದನ್ನೂ ಓದಿ:ಭಟ್ಕಳ: ಒಂದೇ ಕುಟುಂಬದ ನಾಲ್ವರ ಹತ್ಯೆ; ತೀವ್ರಗೊಂಡ ತನಿಖೆ, ಇಬ್ಬರು ವಶಕ್ಕೆ

ರಾಯ್ ಪುರದಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಮಹಾಅಧಿವೇಶನದ ಎರಡನೇ ದಿನ, ಪಕ್ಷದ ಮುಖಂಡರನ್ನು ಉದ್ದೇಶಿಸಿ ಮಾತನಾಡಿದ ಸೋನಿಯಾ, 2004, 2009ರಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿರುವುದು ನನಗೆ ತುಂಬಾ ತೃಪ್ತಿ ಕೊಟ್ಟಿದೆ. ಅದೇ ರೀತಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನೇತೃತ್ವದಲ್ಲಿ ಒಂದು ದಶಕಗಳ ಕಾಲದ ಆಡಳಿತವನ್ನು ಅವರು ಈ ಸಂದರ್ಭದಲ್ಲಿ ಶ್ಲಾಘಿಸಿದ್ದಾರೆ.

ತಾನು ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಂಡಿರುವುದು ತನ್ನ ರಾಜಕೀಯದ ಕೊನೆಯ ಇನ್ನಿಂಗ್ಸ್ ಎಂದು ತಿಳಿಸಿರುವ ಸೋನಿಯಾ ಇದು ಕಾಂಗ್ರೆಸ್ ಗೆ ಟರ್ನಿಂಗ್ ಪಾಯಿಂಟ್ ಎಂದು ಬಣ್ಣಿಸಿರುವುದಾಗಿ ವರದಿಯಾಗಿದೆ.

ಮಹಾಧೀವೇಶನದಲ್ಲಿ ಮಾತನಾಡಿದ ಸೋನಿಯಾ ಆಡಳಿತಾರೂಢ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದು, ಕೇಸರಿ ಪಕ್ಷ ದೇಶದಲ್ಲಿರುವ ಪ್ರತಿಯೊಂದು ಸಂಸ್ಥೆಗಳನ್ನು ತನ್ನ ತೆಕ್ಕೆಗೆ ತೆಗೆದುಕೊಂಡು ಅದನ್ನು ನಾಶಗೊಳಿಸುತ್ತಿದೆ ಎಂದು ಟೀಕಿಸಿದ್ದಾರೆ.

Advertisement

ಬಿಜೆಪಿ ಆಡಳಿತ ವೈಖರಿಯ ಈ ಸಮಯ ಕಾಂಗ್ರೆಸ್ ಮತ್ತು ಇಡೀ ದೇಶಕ್ಕೆ ಸವಾಲಿನದ್ದಾಗಿದೆ. ಬಿಜೆಪಿ ಮತ್ತು ರಾಷ್ಟ್ರೀಯ ಸ್ವಯಂ ಸೇವಕ ಸಂಘ ದೇಶದಲ್ಲಿರುವ ಪ್ರತಿಯೊಂದು ಸಂಸ್ಥೆಗಳನ್ನು ವ್ಯವಸ್ಥಿತವಾಗಿ ಹಿಡಿತಕ್ಕೆ ತೆಗೆದುಕೊಂಡು ಬುಡಮೇಲು ಮಾಡಿದೆ. ಇದರ ಪರಿಣಾಮ ಕೆಲವು ಉದ್ಯಮಿಗಳಿಗೆ ಮಾತ್ರ ಅವಕಾಶ ನೀಡುವ ಮೂಲಕ ಆರ್ಥಿಕ ವಿನಾಶಕ್ಕೆ ಕಾರಣವಾಗುತ್ತಿದೆ ಎಂದು ದೂರಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next