ಹೊಸದಿಲ್ಲಿ: ಮುಖ್ಯಮಂತ್ರಿ ಹುದ್ದೆಯ ರೇಸ್ ನಲ್ಲಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ದೆಹಲಿ ತಲುಪಿದ್ದಾರೆ. ಇಂದು ದೆಹಲಿಗೆ ತೆರಳಿ, ಅಲ್ಲಿ ಡಿಕೆ ಸುರೇಶ್ ನಿವಾಸದಲ್ಲಿ ಸಭೆ ನಡೆಸಿ ಬಳಿಕ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸಕ್ಕೆ ತೆರಳಿದ್ದಾರೆ.
ಡಿಕೆ ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂಬ ಸುದ್ದಿಗೆ ಪ್ರತಿಕ್ರಿಯೆ ನೀಡಿದ ಅವರು, ‘ಯಾವುದಾದರೂ ಚಾನೆಲ್ ನಾನು ಹುದ್ದೆಗೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ವರದಿ ಮಾಡುತ್ತಿದ್ದರೆ ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುತ್ತೇನೆ’ ಎಂದು ಗುಡುಗಿದರು.
ಇದನ್ನೂ ಓದಿ:Rozgar Mela: 71 ಸಾವಿರ ಯುವಕರಿಗೆ ಉದ್ಯೋಗ ನೇಮಕಾತಿ ಪತ್ರ ವಿತರಿಸಿದ ಪ್ರಧಾನಿ ಮೋದಿ
“ಕೆಲವರು ನಾನು ರಾಜೀನಾಮೆ ನೀಡುತ್ತೇನೆ ಎಂದು ವರದಿ ಮಾಡುತ್ತಿದ್ದಾರೆ. ನನ್ನ ತಾಯಿ ನನ್ನ ಪಕ್ಷ, ನಾನು ಈ ಪಕ್ಷವನ್ನು ಕಟ್ಟಿದ್ದೇನೆ. ಇದು ನನ್ನ ಹೈಕಮಾಂಡ್, ನನ್ನ ಶಾಸಕ, ನನ್ನ ಪಕ್ಷವಿದೆ” ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.
ಸಿಎಂ ಆಯ್ಕೆ ಕಗ್ಗಂಟು ಮುಂದುವರಿದಿದ್ದು, ಇಂದು ಮಧ್ಯಾಹ್ನ ಖರ್ಗೆ ನಿವಾಸದಲ್ಲಿ ರಾಹುಲ್ ಗಾಂಧಿ ಸೇರಿದಂತೆ ಹಿರಿಯ ನಾಯಕರ ಸಭೆ ನಡೆದಿದೆ.