Advertisement

“ಮೈ ನೇಮ್‌ ಇಸ್‌ ರಾಜ್‌’ಸಂಗೀತ ಸಂಜೆ

10:41 AM Apr 24, 2022 | Team Udayavani |

ಏಪ್ರಿಲ್‌ 24 ವರನಟ ಡಾ.ರಾಜ್‌ ಕುಮಾರ್‌ ಹುಟ್ಟುಹಬ್ಬ. ಈ ಸಂದರ್ಭದಲ್ಲಿ ಏ. 28 ಗುರುವಾರ ನಗರದ ಚೌಡಯ್ಯ ಸಭಾಂಗಣದಲ್ಲಿ ಸಂಜೆ 6.30ಕ್ಕೆ ರಾಜ್‌ ನೆನಪಿನಲ್ಲಿ ”ಮೈ ನೇಮ್‌ ಇಸ್‌ ರಾಜ್‌ ’ ಎಂಬ ಸಂಗೀತ ಸಂಜೆ ಕಾರ್ಯಕ್ರಮ ನಡೆಯಲಿದೆ.

Advertisement

ಕೆಲವು ವರ್ಷಗಳ ಹಿಂದೆ ಸರಿಗಮಪ ಮೂಲಕ ಮರಿ ಅಣ್ಣಾವ್ರು ಅಂತಲೇ ಹೆಸರಾಗಿದ್ದ ಮನೋಜವಂ ಅತ್ರೇಯ ಸಾರಥ್ಯದಲ್ಲಿ ಈ ಸಂಗೀತ ಕಾರ್ಯಕ್ರವ ನಡೆಯಲಿದೆ. ರಾಜ್‌ ಅವರ ಆದರ್ಶಮಯ ವ್ಯಕ್ತಿತ್ವವನ್ನು ಸಂಗೀತದ ಮೂಲಕ ಪ್ರೇಕ್ಷಕರಿಗೆ ಉಣಬಡಿಸುವ ಕಾರ್ಯಕ್ರಮ ಇದಾಗಲಿದೆ ಎಂಬುದು ತಂಡದ ಮಾತು.

ಇದನ್ನೂ ಓದಿ:ಇಂದು ವರನಟ ಡಾ.ರಾಜ್‌ಕುಮಾರ್‌ 94ನೇ ಜನ್ಮದಿನ

ನಾಡಿನ ಜನಪ್ರಿಯ ಗಾಯಕರು ಹಾಗೂ ವಾದ್ಯಗಾರರ ಸಮ್ಮಿಲನದಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ಹಿರಿಯ ನಿರ್ದೇಶಕ ಭಗವಾನ್‌ ಸೇರಿದಂತೆ ಚಿತ್ರರಂಗದ ಹಾಗೂ ವಿವಿಧ ಕ್ಷೇತ್ರದ ಗಣ್ಯರು ಈ ಸಮಾರಂಭಕ್ಕೆ ಸಾಕ್ಷಿಯಾಗಲಿದ್ದಾರೆ.

ಗಣ್ಯರ ಸ್ಮರಣೆ

Advertisement

ನಟಸಾರ್ವಭೌಮ ಡಾ. ರಾಜ್‌ಕುಮಾರ್ ಜನ್ಮದಿನದ ಅಂಗವಾಗಿ ಮುಖ್ಯಮಂತ್ರಿ ಸೇರಿ ವಿವಿಧ ಗಣ್ಯರು ಸ್ಮರಣೆ ಮಾಡಿದ್ದಾರೆ.

‘ನಟಸಾರ್ವಭೌಮ, ಕನ್ನಡಿಗರ ಆರಾಧ್ಯ ದೈವ, ಪ್ರತಿಷ್ಠಿತ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಪುರಸ್ಕೃತ, ವರನಟ ಡಾ.ರಾಜ್ ಕುಮಾರ್ ರವರ ಜನ್ಮದಿನದಂದು ಅವರಿಗೆ ಅಭಿಮಾನಪೂರ್ವಕ ನಮನಗಳು. ಕನ್ನಡ ಹಾಗೂ ಕನ್ನಡಿಗರ ಅಸ್ಮಿತೆಯಾಗಿ, ತೆರೆಯ ಮೇಲೆ ತಮ್ಮ ಅದ್ಭುತ ನಟನೆಯಿಂದ, ತೆರೆಯ ಹಿಂದೆ ತಮ್ಮ ಹೃದಯ ವೈಶಾಲ್ಯತೆಯಿಂದ ಜನಮಾನಸದಲ್ಲಿ ಶಾಶ್ವತವಾಗಿ ಉಳಿದಿರುವ ಡಾ.ರಾಜ್ ಅವರು ಈ ನಾಡು, ನುಡಿಗೆ ಸಲ್ಲಿಸಿದ ಸೇವೆ ಅವಿಸ್ಮರಣೀಯವಾದುದು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಮರಿಸಿದ್ದಾರೆ.

Koo App

ನಟಸಾರ್ವಭೌಮ, ಕನ್ನಡಿಗರ ಆರಾಧ್ಯ ದೈವ, ಪ್ರತಿಷ್ಠಿತ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಪುರಸ್ಕೃತ, ವರನಟ ಡಾ.ರಾಜ್ ಕುಮಾರ್ ರವರ ಜನ್ಮದಿನದಂದು ಅವರಿಗೆ ಅಭಿಮಾನಪೂರ್ವಕ ನಮನಗಳು. ಕನ್ನಡ ಹಾಗೂ ಕನ್ನಡಿಗರ ಅಸ್ಮಿತೆಯಾಗಿ, ತೆರೆಯ ಮೇಲೆ ತಮ್ಮ ಅದ್ಭುತ ನಟನೆಯಿಂದ, ತೆರೆಯ ಹಿಂದೆ ತಮ್ಮ ಹೃದಯ ವೈಶಾಲ್ಯತೆಯಿಂದ ಜನಮಾನಸದಲ್ಲಿ ಶಾಶ್ವತವಾಗಿ ಉಳಿದಿರುವ ಡಾ.ರಾಜ್ ಅವರು ಈ ನಾಡು, ನುಡಿಗೆ ಸಲ್ಲಿಸಿದ ಸೇವೆ ಅವಿಸ್ಮರಣೀಯವಾದುದು.

Basavaraj Bommai (@bsbommai) 24 Apr 2022

‘ಕನ್ನಡನಾಡಿನ ಹೆಮ್ಮೆಯ ವರನಟ, ನಟಸಾರ್ವಭೌಮ ಶ್ರೀ ಡಾ.ರಾಜ್‍ಕುಮಾರ್ ಅವರ ಪುಣ್ಯಸ್ಮರಣೆಯಂದು ಕೋಟಿ ನಮನಗಳು. 200 ಕ್ಕೂ ಅಧಿಕ ಚಲನಚಿತ್ರಗಳನ್ನು ನೀಡಿ ಕಲಾ ರಸಿಕರ ಮನ ರಂಜಿಸಿದ ಅದ್ಭುತ ಕಲಾವಿದ ಅಣ್ಣಾವ್ರು. ಮನೋಜ್ಞ ಅಭಿನಯ, ಸರಳ ವ್ಯಕ್ತಿತ್ವದ ಜನ ಒಡನಾಟದೊಂದಿಗೆ ಅವರು ಎಲ್ಲರ ಮನದಾಳದಲ್ಲಿ ನೆಲೆಸಿದ್ದಾರೆ’ ಎಂದು ಸಚಿವ ಬಿ.ಸಿ.ನಾಗೇಶ್ ಸ್ಮರಿಸಿದ್ದಾರೆ.

Koo App

ವರನಟ, ನಟಸಾರ್ವಭೌಮ ಡಾ. ರಾಜ್‌ಕುಮಾರ್ ಅವರ ಜನ್ಮದಿನದಂದು ನನ್ನ ಗೌರವ ನಮನಗಳು. ಗೋಕಾಕ್ ಚಳುವಳಿಯ ಮೂಲಕ ಕನ್ನಡದ ಬಗ್ಗೆ ಹೆಚ್ಚಿನ ಅರಿವು ಮೂಡಿಸಲು, ಅಭಿಮಾನ ಬೆಳೆಸಲು ಶ್ರಮಿಸುವ ಜತೆ ಅನೇಕ ಸುಪ್ರಸಿದ್ಧ ಪೌರಾಣಿಕ, ಸಾಮಾಜಿಕ, ಕೌಟುಂಬಿಕ ಚಲನಚಿತ್ರ ನೀಡಿದ ಕನ್ನಡದ ಕಣ್ಮಣಿ ಅಣ್ಣಾವ್ರ ಸರಳ ಸಜ್ಜನಿಕೆಯ ವ್ಯಕ್ತಿತ್ವ ನಮ್ಮೆಲ್ಲರಿಗೂ ಆದರ್ಶ.

Dr. Ashwathnarayan C. N. | ಡಾ. ಅಶ್ವಥ್ ನಾರಾಯಣ್ ಸಿ.ಎನ್. (@drashwathnarayan) 24 Apr 2022

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next