Advertisement

ಚುನಾವಣೆಗೆ ನನ್ನದೇ ನೇತೃತ್ವ: ಸಿಎಂ ಬೊಮ್ಮಾಯಿ

11:43 PM Oct 08, 2021 | Team Udayavani |

ಬೆಂಗಳೂರು: ಮುಂದಿನ ವಿಧಾನಸಭೆ ಚುನಾವಣೆ ರಾಷ್ಟ್ರೀಯ ಮತ್ತು ರಾಜ್ಯ ನಾಯಕರ ಮಾರ್ಗದರ್ಶನದಲ್ಲಿ ನನ್ನ ನೇತೃತ್ವದಲ್ಲಿಯೇ ನಡೆಯಲಿದೆ. ಎಷ್ಟು ಸಮಯ ಮುಖ್ಯಮಂತ್ರಿಯಾಗಿ ಇರುತ್ತೇನೆ ಎಂಬುದು ಮುಖ್ಯವಲ್ಲ. ಈ ಅವಧಿಯಲ್ಲಿ ಏನು ಮಾಡುತ್ತೇನೆ ಎಂಬುದು ಮುಖ್ಯ. ಲಭಿಸಿರುವ ಈ ಅವಕಾಶದಲ್ಲಿ ಉತ್ತಮ ಆಡಳಿತ ನೀಡುವುದರ ಜತೆಗೆ ಮತ್ತೊಂದು ಅವಧಿಗೆ ಬಿಜೆಪಿಯನ್ನು ಅಧಿಕಾರಕ್ಕೆ ತರುತ್ತೇನೆ ಎಂದು ಸಿಎಂ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Advertisement

ಬಿಜೆಪಿ ಈಗ ಕರ್ನಾಟಕದಲ್ಲಿ ಒಂದು ಸಮುದಾಯಕ್ಕೆ ಸೀಮಿತವಾಗಿಲ್ಲ. ಸಮಾಜದ ಎಲ್ಲ ವರ್ಗದವರಿಗೂ ತಲುಪಿ ಅವರ ಬೆಂಬಲಗಳಿಸಿದೆ ಎಂದು ಶುಕ್ರವಾರ ಹೊಸದಿಲ್ಲಿಯಲ್ಲಿ ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಸಂದರ್ಭ ಸಿಎಂ ಹೇಳಿದರು.

ಉತ್ತರ ಕರ್ನಾಟಕದಿಂದ ಲಿಂಗಾಯತ ಸಮುದಾಯದ ಹಲವರು ಪಕ್ಷದ ಶಾಸಕರು, ಸಂಸದರಾಗಿದ್ದಾರೆ. ಒಂದು ಸರಕಾರ ಅಧಿಕಾರಕ್ಕೆ ಬರಬೇಕಾದರೆ ಎಸ್‌ಸಿ, ಎಸ್‌ಟಿ, ಒಕ್ಕಲಿಗ, ಹಿಂದುಳಿದ ವರ್ಗದವರ ಬೆಂಬಲ ಬೇಕು. ಈ ವರ್ಗದವರು ಬಿಜೆಪಿಯನ್ನು ಬೆಂಬಲಿಸಿದ್ದಾರೆ. ಹೀಗಾಗಿ ಬಿಜೆಪಿ ಈಗ ಕರ್ನಾಟಕದಲ್ಲಿ ಸಮಾಜದ ಎಲ್ಲ ವರ್ಗದವರ ಪಕ್ಷವಾಗಿದೆ ಎಂದರು.

ಯಡಿಯೂರಪ್ಪ ಅವರು ಕರ್ನಾಟಕದಲ್ಲಿ ಪಕ್ಷವನ್ನು ಕಟ್ಟಿ ಬೆಳೆಸಿದ್ದಾರೆ. ಸಿಎಂ ಸ್ಥಾನದಿಂದ ಕೆಳಗಿಳಿದು ಮುಂದಿನ ಜನಾಂಗಕ್ಕೆ ಅವಕಾಶ ಮಾಡಿಕೊಟ್ಟಿದ್ದಾರೆ. ಅವರೊಬ್ಬ ಪ್ರಬಲ ನಾಯಕ ಎಂದು ಸಿಎಂ ಕೊಂಡಾಡಿದರು.

ಇದನ್ನೂ ಓದಿ:ಉಪ ಚುನಾವಣೆಯಲ್ಲಿ ಗೆಲ್ಲುವ ಅಭ್ಯರ್ಥಿಗೆ ಜನ ಮತ: ಸಿದ್ದರಾಮಯ್ಯ

Advertisement

ರಸಗೊಬ್ಬರ ಕೊರತೆ ನೀಗಿಸಲು ಮನವಿ
ರಾಜ್ಯಕ್ಕೆ ಅಗತ್ಯವಿರುವ ಡಿಎಪಿ ಮತ್ತು ಎಂಒಪಿ ರಸಗೊಬ್ಬರವನ್ನು ಸರಬರಾಜು ಮಾಡುವಂತೆ ಕೇಂದ್ರ ಆರೋಗ್ಯ, ರಾಸಾಯನಿಕ, ರಸಗೊಬ್ಬರ ಸಚಿವ ಮನ್‌ಸುಖ್‌ ಮಾಂಡವೀಯ ಅವರಿಗೆ ಮನವಿ ಮಾಡಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.

ಪ್ರಸ್ತುತ ವರ್ಷದ ರಾಬಿ ಹಂಗಾಮಿಗೆ ಸುಮಾರು 32 ಸಾವಿರ ಮೆಟ್ರಿಕ್‌ ಟನ್‌ ಡಿಎಪಿ ಮತ್ತು ಸುಮಾರು 10 ಸಾವಿರ ಮೆಟ್ರಿಕ್‌ ಟನ್‌ ಎಂಒಪಿ ಕೊರತೆ ಇದ್ದು, ಇದನ್ನು ಒದಗಿಸುವಂತೆ ಮನವಿ ಮಾಡಲಾಯಿತು. ವಾರದೊಳಗೆ ರಸಗೊಬ್ಬರ ಒದಗಿಸುವುದಾಗಿ ಕೇಂದ್ರ ಸಚಿವರು ತಿಳಿಸಿದ್ದಾರೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next