Advertisement

ನನ್ನ ಯೋಜನೆಗಳು ಶಾಶ್ವತ,ಯಾವುದೇ ಸರ್ಕಾರ ನಿಲ್ಲಿಸಲಿ ನೋಡೋಣ!

09:50 AM May 15, 2019 | Team Udayavani |

ಬೆಂಗಳೂರು : ನನ್ನ ಯಾವ ಕಾರ್ಯಕ್ರಮವೂ Populist ಇಲ್ಲವೇ ತಾತ್ಕಾಲಿಕ ಅಲ್ಲ. ಅನ್ನಭಾಗ್ಯ,ಕ್ಷೀರಭಾಗ್ಯ,ಕ್ಷೀರಧಾರೆ, ಕೃಷಿಭಾಗ್ಯ, ಪಶುಭಾಗ್ಯ….ಇವುಗಳನ್ನು ಯಾವುದೇ ಸರ್ಕಾರ ನಿಲ್ಲಿಸಲಿ ನೋಡೋಣ. ಜಾಗೃತ ಮತದಾರರು ಇರುವ ವರೆಗೆ ಇವೆಲ್ಲ ಶಾಶ್ವತ ಕಾರ್ಯಕ್ರಮಗಳು. ಟೀಕಾಕಾರರಿಗೆ ನೆನಪಿರಲಿ. ಎಂದು ಮಂಗಳವಾರ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್‌ ಮೂಲಕ ಎಚ್ಚರಿಕೆ ನೀಡಿದ್ದಾರೆ.

Advertisement

ಇನ್ನೊಂದು ಟ್ವೀಟ್‌ನಲ್ಲಿ ಗೆಳೆಯ ಜಿ.ಟಿ.ದೇವೇಗೌಡರು ಇತ್ತೀಚೆಗೆ ನನ್ನ ವಿರುದ್ಧ ಮಾತನಾಡಿಲ್ಲ ನಿಜ. ಆದರೆ ಮೈಸೂರಲ್ಲಿ ಜೆಡಿಎಸ್ ನವರು ಬಿಜೆಪಿಗೆ ಮತ ಹಾಕಿದ್ದಾರೆಂಬ ಅವರ ಹೇಳಿಕೆ ಸತ್ಯವಾಗಿದ್ದರೂ ಅನಗತ್ಯವಾಗಿತ್ತು. ಇದರಿಂದಾಗಿ ಕೆರಳಿದ ನಮ್ಮ ಕಾರ್ಯಕರ್ತರು ಜೆಡಿಎಸ್ ವಿರುದ್ಧ ಮಾತನಾಡತೊಡಗಿದ್ದರು. ಮೈತ್ರಿಕೂಟದಲ್ಲಿ ಇಂತಹದನ್ನು ಮಾಡಬಾರದು ಎಂದು ಬರೆದಿದ್ದಾರೆ.

ನಮಗೂ ಟಚ್‌ನಲ್ಲಿ ಇದ್ದಾರೆ

ಎಎನ್‌ಐ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ಸಿದ್ದರಾಮಯ್ಯ , ಬಿಜೆಪಿಯ ಕೆಲ ಎಂಎಲ್‌ಎಗಳು ನಮ್ಮ ಟಚ್‌ನಲ್ಲೂ ಇದ್ದಾರೆ ಎಂದು ಬಾಂಬ್‌ ಸಿಡಿಸಿದ್ದಾರೆ.

ಸಮನ್ವಯ ಸಮಿತಿಯಲ್ಲಿ ಚರ್ಚೆ
ಜೆಡಿಎಸ್‌ ರಾಜ್ಯಾಧ್ಯಕ್ಷ ವಿಶ್ವನಾಥ್‌ ಅವರ ಹೇಳಿಕೆಗಳ ಕುರಿತು ಸಾರ್ವಜನಿಕ ಚರ್ಚೆ ಇಲ್ಲ. ಈಗಾಗಲೇ ಹೇಳಿದ್ದೇನೆ ನಾನು ಸಮನ್ವಯ ಸಮಿತಿಯಲ್ಲಿ ಚರ್ಚೆ ಮಾಡುತ್ತೇನೆ ಎಂದರು.

Advertisement

2023ರಲ್ಲಿ ಆಗಬಾರದೆ?

ಮುಂದಿನ ಚುನಾವಣೆ ಆದ ಮೇಲೆ ಜನ ಆಶೀರ್ವಾದ ಮಾಡಿದರೆ ಸಿಎಂ ಆಗಬಾರದು ಅಂತ ಇದೆಯಾ ? 2023 ರಲ್ಲಿ
ನಾನು ಮತ್ತೆ ಸಿಎಂ ಆಗಬಾರದೇ ಎಂದು ಜನರು ಅಭಿಮಾನದಿಂದ ಹೇಳುತ್ತಾರೆ, ಜನರ ಬಾಯಿ ಮುಚ್ಚಲು ಆಗುತ್ತದೆ ಎಂದು ಪ್ರಶ್ನಿಸಿದರು.

ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲವೆಂದು ನಾನು ಈಗಾಗಲೇ ಹೇಳಿದ್ದೇನೆ ಎಂದು ಇದೇ ವೇಳೆ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next