Advertisement
ಭಾನುವಾರ ನಡೆದ ತಮ್ಮ 103ನೇ ಆವೃತ್ತಿಯ ಮನ್ ಕಿ ಬಾತ್ ಬಾನುಲಿ ಕಾರ್ಯಕ್ರಮದಲ್ಲಿ ಈ ವಿಚಾರ ತಿಳಿಸಿದ ಅವರು, “ಈಗಾಗಲೇ ದೇಶವು ಸ್ವಾತಂತ್ರ್ಯದ ಅಮೃತ ಮಹೋತ್ಸವವನ್ನು ಆಚರಿಸುತ್ತಿದ್ದು, ದೇಶಾದ್ಯಂತ ಇದು ಅನುರಣಿಸುತ್ತಿದೆ. ಈವರೆಗೆ ಸುಮಾರು 2 ಲಕ್ಷದಷ್ಟು ಕಾರ್ಯಕ್ರಮಗಳನ್ನು ನಡೆಸಲಾಗಿದೆ. ಆ.15 ಸಮೀಪಿಸುತ್ತಿದೆ. ದೇಶಕ್ಕಾಗಿ ಪ್ರಾಣ ಬಲಿದಾನ ಮಾಡಿರುವ ಹುತಾತ್ಮರ ಸ್ಮರಣಾರ್ಥವಾಗಿ ಮೇರಿ ಮಾಟಿ ಮೇರಾ ದೇಶ್ ಎಂಬ ಅಭಿಯಾನ ನಡೆಸಲು ನಿರ್ಧರಿಸಲಾಗಿದೆ. ಅದರಂತೆ, ದೇಶದ ಮೂಲೆ ಮೂಲೆಗಳಿಂದಲೂ ಮೃತ್ತಿಕೆ ಸಂಗ್ರಹಿಸಿ, ದೆಹಲಿಯಲ್ಲಿರುವ ರಾಷ್ಟ್ರೀಯ ಯುದ್ಧ ಸ್ಮಾರಕದ ಸಮೀಪದಲ್ಲೇ ಆ ಮಣ್ಣಿನಲ್ಲಿ ಗಿಡಗಳನ್ನು ನೆಟ್ಟು “ಅಮೃತ್ ಉದ್ಯಾನ’ ನಿರ್ಮಿಸಲಾಗುವುದು. ಈ ಉದ್ಯಾನವು ಏಕ ಭಾರತ ಶ್ರೇಷ್ಠ ಭಾರತದ ಸಂಕೇತವಾಗಿ ಹೊರಹೊಮ್ಮಲಿದೆ’ ಎಂದು ತಿಳಿಸಿದ್ದಾರೆ.
Related Articles
Advertisement
– ಹುತಾತ್ಮ ಯೋಧರ ಸ್ಮರಣಾರ್ಥ ಪಂಚಾಯತ್‌ಗಳಲ್ಲಿ ವಿಶೇಷ ಶಾಸನಗಳ ಕೆತ್ತನೆ
– ಅಭಿಯಾನದಡಿ “ಅಮೃತ್ ಕಲಶ ಯಾತ್ರೆ’ ಆಯೋಜನೆ
– ದೇಶದ ಮೂಲೆ ಮೂಲೆಗಳಿಂದ 7,500 ಮಡಿಕೆಗಳಲ್ಲಿ ಮೃತ್ತಿಕೆ ಸಂಗ್ರಹಿಸಿ, ರಾಷ್ಟ್ರ ರಾಜಧಾನಿಗೆ ಒಯ್ಯುವುದು
– ಈ ಮಣ್ಣಿನಲ್ಲಿ ಸಸ್ಯಗಳನ್ನು ರಾಷ್ಟ್ರೀಯ ಯುದ್ಧ ಸ್ಮಾರಕದ ಬಳಿ ನೆಟ್ಟು, ಅಮೃತ್ ವಾಟಿಕಾವನ್ನು ನಿರ್ಮಿಸುವುದು
– ಈ ವರ್ಷವೂ ಸ್ವಾತಂತ್ರ್ಯ ದಿನಾಚರಣೆಯಂದು ಮನೆ ಮನೆಯಲ್ಲಿ ತ್ರಿವರ್ಣ ಧ್ವಜ ಹಾರಿಸುವುದು.