ಹುಬ್ಬಳ್ಳಿ: ಸೌಂದರ್ಯ ಕಾಣದಿರಲು ಹಾಗೂ ತಮ್ಮ ರಕ್ಷಣೆಗಾಗಿ ಹಿಜಾಬ್ ಧರಿಸುತ್ತಾರೆ ಎಂದಿದ್ದೆ. ಈ ನನ್ನ ಹೇಳಿಕೆಯನ್ನು ತಪ್ಪಾಗಿ ತಿಳಿದುಕೊಂಡು ಗೊಂದಲ ಸೃಷ್ಟಿ ಮಾಡಲಾಗಿದೆ ಎಂದು ಮಾಜಿ ಸಚಿವ ಜಮೀರ ಅಹ್ಮದ್ ತಿಳಿಸಿದರು.
ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಹಿಜಾಬ್ ಹಾಕದಿದ್ದರೆ ರೇಪ್ ಆಗುತ್ತದೆಂದು ಹೇಳಿಲ್ಲ. ಬೇರೆಯವರು ಗೊಂದಲ ಸೃಷ್ಟಿ ಮಾಡಿಕೊಂಡರೆ ನಾನು ಏನು ಮಾಡಲಿ? ಹಿಜಾಬ್ ಹಾಕಿದರೆ ಬ್ಯೂಟಿ ಕಾಣಲ್ಲ, ಸುರಕ್ಷತೆಗಾಗಿ ಹಾಕಿಕೊಳ್ಳುತ್ತಾರೆ ಎಂದು ಹೇಳಿದ್ದೆ. ಬೇರೆಯವರ ಕಣ್ಣು ಬೀಳಬಾರದು ಎಂದು ತಲೆ ಮತ್ತು ಮುಖ ಮುಚ್ಚಿಕೊಳ್ಳುತ್ತಾರೆ ಅಷ್ಟೇ ಎಂದರು.
ನಮ್ಮಲ್ಲಿ ರೇಪ್ ರೇಟ್ ಜಾಸ್ತಿ ಇದೆ. ಈ ಹೇಳಿಕೆ ತಪ್ಪಾಗಿ ತಿಳಿದುಕೊಂಡು ಗೊಂದಲ ಸೃಷ್ಟಿ ಮಾಡಿಕೊಳ್ಳಲಾಗಿದೆ. ಕೆಲವರು ಹಿಜಾಬ್ ಹಾಕುತ್ತಾರೆ, ಕೆಲವರು ಹಾಕಲ್ಲ. ಇಸ್ಲಾಂನಲ್ಲಿ ಹಿಜಾಬ್ ಹಾಕಬೇಕು ಎಂದು ಇದೆ ಎಂದು ತಿಳಿಸಿದರು.
ಇದನ್ನೂ ಓದಿ:ಬೆಳಗಾವಿ ಸುವರ್ಣವಿಧಾನಸೌಧದಲ್ಲಿ ಚೆನ್ನಮ್ಮ, ರಾಯಣ್ಣ ಪ್ರತಿಮೆ : ರಾಜ್ಯಪಾಲ ಗೆಹ್ಲೋಟ್
ದೇಶದಲ್ಲಿ ರೇಪ್ ರೇಟ್ ಜಾಸ್ತಿ ಇದೆ. ಬೇರೆ ದೇಶಕ್ಕೆ ಹೋಲಿಸಿದರೆ ನಮ್ಮಲ್ಲಿ ಜಾಸ್ತಿ ಇದೆ. ಹಿಜಾಬ್ ಧರಿಸುವುದರಿಂದ ಏನು ಎಂದು ಹೇಳಿದ್ದೇನೆ ಅಷ್ಟೇ. ಉದಾಹರಣೆಗೆ ಹೆಲ್ಮೆಟ್ ಹಾಕಿಕೊಳ್ಳೊದು ಸೇಫ್ಟಿಗಾಗಿ ಅಲ್ಲವೇ. ಹೆಲ್ಮೆಟ್ ಹಾಕಲು ಸರಕಾರ ಆದೇಶ ಮಾಡಿದೆ. ನ್ಯಾಯಾಲಯದಲ್ಲಿ ಹಿಜಾಬ್ ಆದೇಶಕ್ಕೆ ತಲೆ ಬಾಗುತ್ತೇವೆ. ಅದಕ್ಕೆ ಸ್ವಾಗತ ಮಾಡುತ್ತೇವೆ ಎಂದರು.
ಸಿಎಂ ಇಬ್ರಾಹಿಂ ಪಕ್ಷ ಬಿಡಲ್ಲ ಎಂದು ನಿನ್ನೆಯೇ ಹೇಳಿದ್ದೆ. ಅವರ ಹಾಗೂ ಸಿದ್ದರಾಮಯ್ಯನವರ ಸಂಬಂಧ ಹಾಗಿದೆ ಎಂದು ತಿಳಿಸಿದರು.