Advertisement

ಮೈ ಶುಗರ್‌ ಸಕ್ಕರೆ ಕಾರ್ಖಾನೆ ಪುನಶ್ಚೇತನಕ್ಕೆ ಬದ್ಧ

08:19 PM May 29, 2020 | Sriram |

ಬೆಂಗಳೂರು: ಮಂಡ್ಯದ ಮೈಶುಗರ್‌ ಸಕ್ಕರೆ ಕಾರ್ಖಾನೆಯನ್ನು ಪುನಶ್ಚೇತನಗೊಳಿಸಲು ಸರ್ಕಾರ ಬದ್ಧ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಭರವಸೆ ನೀಡಿದರು.

Advertisement

ಗೃಹ ಕಚೇರಿ “ಕೃಷ್ಣಾ’ದಲ್ಲಿ ಶುಕ್ರವಾರ ಮಂಡ್ಯ ಜಿಲ್ಲೆಯ ಶಾಸಕರೊಂದಿಗೆ ಸಭೆ ನಡೆಸಿದ ಯಡಿಯೂರಪ್ಪ, ಕಾರ್ಖಾನೆ ಪುನಶ್ಚೇತನಕ್ಕೆ ಸರ್ಕಾರ ಬದ್ಧವಾಗಿದೆ.

ಕಾರ್ಯಾಚರಣೆ ಮತ್ತು ನಿರ್ವಹಣೆ ಜತೆಗೆ ಸರ್ಕಾರವೇ ಕಾರ್ಖಾನೆಯ ಸಂಪೂರ್ಣ ನಿರ್ವಹಣೆ ಮಾಡುವುದರ ಸಾಧಕ- ಬಾಧಕ ಕುರಿತಂತೆ ಸಂಪುಟ ಸಹೋದ್ಯೋಗಿಗಳೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಇದಕ್ಕೂ ಮೊದಲು ಮಂಡ್ಯ ಜಿಲ್ಲೆಯ ಶಾಸಕರ ನಿಯೋಗ, ಐತಿಹಾಸಿಕ ಮಹತ್ವವುಳ್ಳ ಮಂಡ್ಯದ ಮೈಶುಗರ್‌ ಕಾರ್ಖಾನೆ ಸರ್ಕಾರಿ ಸ್ವಾಮ್ಯದಲ್ಲಿಯೇ ಉಳಿಯಬೇಕು. ಆ ಮೂಲಕ ಜಿಲೆಯ ರೈತರನ್ನು ಕಾಪಾಡಬೇಕು ಎಂದು ಮನವಿ ಮಾಡಿತು.

ಸಚಿವರಾದ ಶಿವರಾಮ ಹೆಬ್ಟಾರ್‌, ಕೆ.ಸಿ.ನಾರಾಯಣಗೌಡ, ಮಾಜಿ ಸಚಿವರಾದ ಸಿ.ಎಸ್‌.ಪುಟ್ಟರಾಜು, ಡಿ.ಸಿ. ತಮ್ಮಣ್ಣ, ಶಾಸಕರಾದ ಡಾ.ಕೆ.ಅನ್ನದಾನಿ, ರವೀಂದ್ರ ಶ್ರೀಕಂಠಯ್ಯ, ಕೆ.ಟಿ.ಶ್ರೀಕಂಠೇಗೌಡ, ರೈತ ಮುಖಂಡರಾದ ಸುನಂದಾ ಜಯರಾಮ್‌ ಉಪಸ್ಥಿತರಿದ್ದರು.

Advertisement

 

Advertisement

Udayavani is now on Telegram. Click here to join our channel and stay updated with the latest news.

Next