Advertisement

ಮೈಲಾಪುರ: ಮಕ್ಕಳ ಗ್ರಾಮಸಭೆ

04:05 PM Dec 16, 2019 | Suhan S |

ಕಾರಟಗಿ: ತಾಲೂಕಿನ ಮೈಲಾಪುರ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಮಕ್ಕಳ ಹಕ್ಕುಗಳ ಗ್ರಾಮಸಭೆಯನ್ನು ಗ್ರಾಪಂ ವ್ಯಾಪ್ತಿಯ ಸೋಮನಾಳ ಗ್ರಾಮದ ಡಾ| ಅಂಬೇಡ್ಕರ್‌ ನಗರದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಲಾಗಿತ್ತು. ಗ್ರಾಮಸಭೆಗೆ ಶಾಲಾ ವಿದ್ಯಾರ್ಥಿಗಳು ಜ್ಯೋತಿ ಬೆಳಗಿಸುವ ಮೂಲಕ ಚಾಲನೆ ನೀಡಿದರು.

Advertisement

ಉಪಸ್ಥಿತರಿದ್ದ ಪಂಚಾಯತ್‌ ವ್ಯಾಪ್ತಿಯಲ್ಲಿನ ವಿವಿಧ ಶಾಲೆಗಳಿಂದ ಆಗಮಿಸಿದ್ದ ವಿದ್ಯಾರ್ಥಿ, ವಿದ್ಯಾರ್ಥಿನಿಯರು ತಮ್ಮ ಶಾಲೆಗಳಲ್ಲಿನ ಕುಂದು-ಕೊರತೆಗಳನ್ನು ಅಧಿಕಾರಿಗಳ, ಪಂಚಾಯತ್‌ ಸದಸ್ಯರ ಹಾಗೂ ಅಧಿ ಕಾರಿಗಳ ಗಮನಕ್ಕೆ ತಂದರು. ತಮ್ಮ ಶಾಲೆಗಳಲ್ಲಿನ ಶೌಚಾಲಯದ ಕೊರತೆ, ಕೊಠಡಿ ಹಾಗೂ ಶಿಕ್ಷಕರ ಕೊರತೆಯನ್ನು ಗಮನಕ್ಕೆ ತಂದಿದ್ದು ವಿಶೇಷವಾಗಿತ್ತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಗ್ರಾಪಂ ಅಧ್ಯಕ್ಷೆ ದೇವಮ್ಮ ಹುಲುಗಪ್ಪ, ಪಿಡಿಒ ಮಲ್ಲಿಕಾರ್ಜುನ ಕಡಿವಾಳವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಉತ್ತರಿಸಿ, ಶಾಲೆ ಸಮಸ್ಯೆಗಳನ್ನು ಸಂಬಂಧಿಸಿದ ಇಲಾಖೆಗಳ ಗಮನಕ್ಕೆ ತಂದು ಪರಿಹರಿಸುವ ಭರವಸೆ ನೀಡಿದರು. ಪಿಡಿಒ ಮಲ್ಲಿಕಾರ್ಜುನ ಕಡಿವಾಳ ಪ್ರಾಸ್ತಾವಿಕ ಮಾತನಾಡಿದರು. ಈ ಸಂದರ್ಭದಲ್ಲಿ ತಾಪಂ ಸದಸ್ಯೆ ಶೋಭಾ ಬಸವರಾಜ, ಗ್ರಾಮ ಪಂಚಾಯತ್‌ ಸದಸ್ಯರು, ವಿವಿಧ ಶಾಲೆಗಳ ಮುಖ್ಯೋಪಾಧ್ಯಾಯರು, ಶಿಕ್ಷಕರು, ಅಂಗನವಾಡಿ, ಆಶಾ ಕಾರ್ಯಕರ್ತೆಯರು ಮತ್ತಿತರರು ಪಾಲ್ಗೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next