Advertisement
6 ಸಾವಿರ ದಾಟಿದ ಕೊರೊನಾ ಸೋಂಕು: ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದ್ದು, ಒಂದು ವಾರದಲ್ಲೇ ಸೋಂಕಿತರ ಸಂಖ್ಯೆ ಸಾವಿರದ ಗಡಿದಾಟುತ್ತಿದೆ. ಜುಲೈನಲ್ಲೇ ಮೈಸೂರಿನಲ್ಲಿ ನಾಲ್ಕು ಸಾವಿರಕ್ಕೂ ಅಧಿಕ ಪ್ರಕರಣಗಳು ವರದಿಯಾಗಿತ್ತು. ಆದರೆ, ಕಳೆದ ಒಂದು ವಾರದಲ್ಲಿ ಸೋಂಕಿತರ ಸಂಖ್ಯೆ ಆರು ಸಾವಿರದ ಗಡಿ ದಾಟಿದ್ದು, ಸೋಂಕಿತರ ಸಂಖ್ಯೆ 6115ಕ್ಕೆ ಏರಿಕೆಯಾಗಿದೆ. ಸೋಂಕಿತರ ಪ್ರಾಥಮಿಕ ಸಂಪರ್ಕದಿಂದ 261 ಮಂದಿ, ವಿಷಮಶೀತ ಜ್ವರದಿಂದ (ಐಎಲ್‌ಐ) 48, ಉಸಿರಾಟದ ತೊಂದರೆಯಿಂದ (ಎಸ್‌ಎಆರ್‌ಐ-ಸಾರಿ) 7 ಹಾಗೂ ಪ್ರವಾಸದ ಹಿನ್ನೆಲೆಯಿಂದ 23 ಮಂದಿಗೆ ಸೋಂಕು ತಗುಲಿದೆ. 112 ಮಂದಿ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಗುಣಮುಖ ವಾದವರ ಸಂಖ್ಯೆ 2342ಕ್ಕೆ ಏರಿಕೆಯಾಗಿದೆ. ಸದ್ಯ ಜಿಲ್ಲೆಯಲ್ಲಿ 3579 ಮಂದಿ ಸಕ್ರೀಯ ಸೋಂಕಿತರಿದ್ದು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮೈಸೂರು ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಅವರಿಗೆ ಸೋಂಕು ದೃಢಪಟ್ಟಿದೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ನಾನು ಕೋವಿಡ್-19 ಪರೀಕ್ಷೆಗೆ ಒಳಗಾಗಿದ್ದು ಕೋವಿಡ್ ಪಾಸಿಟಿವ್ ಎಂದು ವರದಿ ಬಂದಿದೆ. ರೋಗ ಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯ ಮೇರೆಗೆ ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದೇನೆ. ಕಳೆದ 7 ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದಿರುವವರು ಕೋವಿಡ್ ಪರೀಕ್ಷೆಗೆ ಒಳಪಟ್ಟು, ಕೂಡಲೇ ಕ್ವಾರಂಟೈನ್‌ಗೆ ಒಳಗಾಗಿ ಮುಂಜಾಗ್ರತೆ ವಹಿಸಿ ಎಂದು ವಿನಂತಿಸಿಕೊಂಡಿದ್ದಾರೆ. ಅಲ್ಲದೆ, ಸಚಿವ ಎಸ್.ಟಿ.ಸೋಮಶೇಖರ್ ಅವರಿಗೂ ಸೋಂಕು ತಗುಲಿದ್ದು, ಬೆಂಗಳೂರಿನಲ್ಲಿ
ಚಿಕಿತ್ಸೆ ಪಡೆಯುತ್ತಿದ್ದಾರೆ.