Advertisement

ಹಿಂಬದಿಯಿಂದ ಕಾರು ಡಿಕ್ಕಿ: ಬೈಕ್‌ ಸವಾರ ಸಾವು

01:44 PM Feb 09, 2021 | Team Udayavani |

ನಂಜನಗೂಡು: ಬೈಕ್‌ಗೆ ಕಾರು ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಸಂಭವಿಸಿದೆ. ನಗರದ ಹೊರವಲಯದ ಗುಂಡ್ಲುಪೇಟೆ ರಸ್ತೆಯ ಹೊಸಳ್ಳಿ ಗೇಟ್‌ ಬಳಿ ಈ ಅವಘಡ ಜರುಗಿದ್ದು, ನಂಜನ ಗೂಡು ತಾಲೂಕಿನ ಮುದ್ದಳ್ಳಿ ಗ್ರಾಮದ ನವೀನ (22) ಮೃತ ಯುವಕ ಎಂದು ಗುರುತಿಸಲಾಗಿದೆ.

Advertisement

ಸ್ವಗ್ರಾಮ ಮುದ್ದಳ್ಳಿಗೆ ನವೀನ್‌ ದ್ವಿಚಕ್ರವಾಹನದಲ್ಲಿ ತೆರಳುತ್ತಿದ್ದರು. ಅದೇ ಮಾರ್ಗದಲ್ಲಿ ಕೇರಳಕ್ಕೆ ತೆರಳುತ್ತಿದ್ದ ಇನೊವಾ ಕಾರು ಹಿಂಬದಿಯಿಂದ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ಬೈಕ್‌ ಸವಾರ ನವೀನ್‌ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಆರು ಮಂದಿ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಇದನ್ನೂ ಓದಿ :

ಡಿಕ್ಕಿಯ ರಭಸಕ್ಕೆ ಕಾರು ನಜ್ಜುಗುಜ್ಜಾಗಿ ಸಮೀಪದ ಗದ್ದೆಗೆ ಉರುಳಿದೆ. ಘಟನಾ ಸ್ಥಳಕ್ಕೆ ನಂಜನಗೂಡು ಸಂಚಾರ ಠಾಣೆ ಅಧಿಕಾರಿ ಜಯಲಕ್ಷ್ಮೀ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next