Advertisement

ಮೈಸೂರು ಪ್ರಕರಣ : ತಮಿಳುನಾಡಿನಲ್ಲಿ ಅಡಗಿದ್ದ 7ನೇ ಆರೋಪಿ ಸೆರೆ

08:05 PM Sep 07, 2021 | Team Udayavani |

ಮೈಸೂರು : ಮೈಸೂರಿನಲ್ಲಿ ನಡೆದ ವಿದ್ಯಾರ್ಥಿನಿಯ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ತಲೆಮರೆಸಿಕೊಂಡಿದ್ದ ಏಳನೇ ಆರೋಪಿಯನ್ನು ಪೊಲೀಸರು ತಮಿಳುನಾಡಿನಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Advertisement

ಕಳೆದ ಆಗಸ್ಟ್ 23 ರಂದು ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಘಟನೆ ನಡೆದಿದ್ದು, ಈ ಬಗ್ಗೆ ತನಿಖೆ ಕೈಗೊಂಡಿದ್ದ ಪೊಲೀಸರು ಘಟನೆ ನಡೆದ ಮೂರು ದಿನಗಳಲ್ಲಿ 6 ಆರೋಪಿಗಳನ್ನು ತಮಿಳುನಾಡಿನಲ್ಲಿ ಬಂಧಿಸಿದ್ದರು. ತಲೆಮರೆಸಿಕೊಂಡಿದ್ದ ಏಳನೇ ಆರೋಪಿಯ ಪತ್ತೆಗಾಗಿ ಮೈಸೂರು ನಗರ ಪೊಲೀಸ್ ಆಯುಕ್ತರು ಎಸಿಪಿ ನೇತೃತ್ವದಲ್ಲಿ ತಂಡ ರಚಿಸಿದ್ದರು.

ನಿರಂತರ ಕಾರ್ಯಾಚರಣೆ ಬಳಿಕ ತಮಿಳುನಾಡಿನ ಗ್ರಾಮವೊಂದರಲ್ಲಿ ಅಡಗಿಕೊಂಡಿದ್ದ ಏಳನೇ ಆರೋಪಿಯನ್ನು ಪತ್ತೆ ಹಚ್ಚಿ ಮೈಸೂರಿಗೆ ಕರೆ ತಂದಿದ್ದಾರೆ.

ಪ್ರಕರಣ ಸಂಬಂಧ ಮೈಸೂರಿನ ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ : ಇರುವೆಯ ಹಲ್ಲಿನ ರಹಸ್ಯ ಬಯಲು! ಸತುವಿನ ಅಣುಗಳಿಂದಲೇ ಇರುವೆಗೆ ಸೂಪರ್‌ ಪವರ್‌

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next